Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗಿನಲ್ಲಿ ಬಿರುಗಾಳಿ ಮಳೆ : ಧರೆಗುರುಳಿದ ನೂರಾರು ಮರಗಳು, ವಿದ್ಯುತ್ ಕಂಬಗಳು : ಗೋಡೆ ಕುಸಿದು ಮಹಿಳೆ ಸಾವು : ಆಟೋ ಚಾಲಕ, ವಿದ್ಯಾರ್ಥಿನಿಗೆ ಗಾಯ : ದೇವಾಲಯಕ್ಕೆ ಹಾನಿ*
ಇತ್ತೀಚಿನ ಸುದ್ದಿಗಳು

*ಕೊಡಗಿನಲ್ಲಿ ಬಿರುಗಾಳಿ ಮಳೆ : ಧರೆಗುರುಳಿದ ನೂರಾರು ಮರಗಳು, ವಿದ್ಯುತ್ ಕಂಬಗಳು : ಗೋಡೆ ಕುಸಿದು ಮಹಿಳೆ ಸಾವು : ಆಟೋ ಚಾಲಕ, ವಿದ್ಯಾರ್ಥಿನಿಗೆ ಗಾಯ : ದೇವಾಲಯಕ್ಕೆ ಹಾನಿ*

July 26, 20252 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜು.25 NEWS DESK : ಕೊಡಗು ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಸಾವು ನೋವು ಸಂಭವಿಸಿದೆÉ. ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದರೆ, ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಬಿದ್ದು ಚಾಲಕ ಹಾಗೂ ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ಗಾಳಿಯ ವೇಗ ಹೆಚ್ಚುತ್ತಲೇ ಇರುವುದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ. ಭಾರೀ ಗಾಳಿಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕಲಬುರ್ಗಿ ಜಿಲ್ಲೆಯ ನಿವಾಸಿ ರವಿ ಎಂಬುವವರ ಪತ್ನಿ ಸುಷ್ಮಾ (37) ಮೃಪಟ್ಟಿದ್ದಾರೆ. ಮೃತರ ಸಹೋದರ ಅಕ್ಷಯ್ ಗೆ ಭುಜ ಭಾಗಕ್ಕೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಕುಟುಂಬವರ್ಗಕ್ಕೆ ಸಾಂತ್ವಾನ ಹೇಳಿದರು. ಅಧಿಕಾರಿಗಳನ್ನು ಸಂಪರ್ಕಿಕಿಸಿದ ಅವರು ಅಗತ್ಯ ತುರ್ತು ಕ್ರಮಕೈಗೊಳ್ಳುವಂತೆ ತಿಳಿಸಿದರು.
*ಆಟೋದ ಮೇಲೆ ಬಿದ್ದ ಮರ* ಸೋಮವಾರಪೇಟೆ ತಾಲ್ಲೂಕಿನಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಕುಂಬೂರು ಗ್ರಾಮದಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಮರ ಬಿದ್ದು ಹಾನಿಯಾಗಿದೆ. ಆಟೋ ಚಾಲಕ ಕುಂಬೂರು ಗ್ರಾಮದ ನಿವಾಸಿ ಪ್ರವೀಣ್ ಹಾಗೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
*ದೇವಾಲಯಕ್ಕೆ ಹಾನಿ* ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಚುರಿಯಾಲ್‍ನಲ್ಲಿರುವ ಪನ್ನಂಗಾಲತ್ತಮ್ಮೆ ದೇವಾಲಯದ ಮೇಲೆ ಮರ ಬಿದ್ದು ಹಾನಿಯಾಗಿದೆ. ದೇವಾಲಯದ ಅರ್ಧ ಭಾಗದಷ್ಟು ಹಾನಿಗೀಡಾಗಿದ್ದು, ಯಾರೂ ಇಲ್ಲದ್ದರಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ವಿರಾಜಪೇಟೆ ತಹಶೀಲ್ದಾರರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಶನಿವಾರಸಂತೆ ಹೋಬಳಿ ಕೊರಲಳ್ಳಿ ಗ್ರಾಮದ ಸುಕನ್ಯಾ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಸಂಪಾಜೆ ವ್ಯಾಪ್ತಿಯ ಮೇಕೇರಿ ಗ್ರಾಮದ ಸುಭಾಷ್ ನಗರದ ನಸೀಮಾ ಎಂಬುವವರ ಮನೆಯ ಮೇಲೆ ಮರ ಬಿದ್ದು ಭಾಗಶಃ ಹಾನಿ ಉಂಟಾಗಿದೆ. ಡಬ್ಬಡ್ಕ ಗ್ರಾಮದ ಮುಕ್ಕಾಟಿ ತಮ್ಮಯ್ಯ ಎಂಬುವವರ ಮನೆಯ ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಅಮ್ಮತ್ತಿ ಹೋಬಳಿ ಬಿಳುಗುಂದ ಗ್ರಾಮದ ಹೆಚ್.ಟಿ.ಗಣೇಶ್ ಎಂಬುವವರ ವಾಸದ ಮನೆಯ ಹಿಂಬದಿಯ ಗೋಡೆ ಮತ್ತು ಮೇಲ್ಚಾವಣಿ ಮಳೆಯಿಂದ ಕುಸಿದು ಬಿದ್ದು ತೀವ್ರ ಹಾನಿಯಾಗಿದೆ.ನಾಪೋಕ್ಲು  ಹೋಬಳಿ ಎಮ್ಮೆಮಾಡು ಗ್ರಾಮದ ಅಬ್ದುಲ್ ರಹೆಮಾನ್ ಎಂಬುವರ ಮನೆಯ ಹಿಂಭಾಗದಲ್ಲಿ ಮರಬಿದ್ದು ಹಾನಿಯಾಗಿದೆ. ಎಮ್ಮೆಮಾಡು ಗ್ರಾಮದ ಅಬ್ದುಲ್ ಅಫೀಲ್ ಅವರ ವಾಸದ ಮನೆಯ ಪಕ್ಕದಲ್ಲಿ ಬರೆ ಕುಸಿತಗೊಂಡಿದೆ. ದೊಡ್ಡಕೂಡ್ಲಿ ಗ್ರಾಮದ ಕೃಷ್ಣಚಾರ್ಯ ಎಂಬುವರ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಕುಶಾಲನಗರ ತಾಲ್ಲೂಕು ಕೂಡಿಗೆ ಗ್ರಾಮ ಪಂಚಾಯಿತಿಯ ಬ್ಯಾಡಗೊಟ್ಟ ಗ್ರಾಮದ ನಿವಾಸಿ ಪಾಂಡುರಂಗ ಎಂಬುವರ ಮನೆಗೆ ಮರ ಬಿದ್ದು ಮನೆಯ 2 ಶೀಟ್ ಹಾಗೂ ಮನೆಗೆ ಹೊಂದಿಕೊಂಡಂತೆ ಇರುವ ಕೊಟ್ಟಿಗೆಗೆ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಭಾಗಮಂಡಲ ಹೋಬಳಿ ಕರಿಕೆ ಗ್ರಾಮದ ಸುಮತಿ ಎಂಬುವವರ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
*ರಸ್ತೆಗೆ ಬಿದ್ದ ಮರಗಳು* ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಗ್ರಾಮೀಣ ಪ್ರದೇಶಗಳು ಮಾತ್ರವಲ್ಲದೆ ಹೆದ್ದಾರಿಗಳಲ್ಲೂ ಬೃಹತ್ ಮರಗಳು ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸುಂಟಿಕೊಪ್ಪ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ವಿದ್ಯುತ್ ಮಾರ್ಗಕ್ಕೆ ಹಾನಿ ಉಂಟಾಯಿತ್ತಲ್ಲದೆ, ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಚೆಟ್ಟಳ್ಳಿ, ಸಿದ್ದಾಪುರ ರಸ್ತೆಯಲ್ಲೂ ಮರಗಳು ಬಿದ್ದಿವೆ. ಸೋಮವಾರಪೇಟೆಯ ಕಾಜೂರು ಬಳಿ ರಸ್ತೆಗೆ ಮರ ಬಿದ್ದು ಸಂಚಾರ ಬಂದ್ ಆಗಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಹಲವು ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಬಹುತೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಆಸ್ಪತ್ರೆಗಳಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗಾಳಿಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿದೆ. ಎತ್ತರ ಮತ್ತು ತಗ್ಗು ಪ್ರದೇಶ ಹಾಗೂ ನದಿತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಇಂಡಿಯನ್ ಬ್ಯಾಂಕ್ : 1500 ಅಪ್ರೆಂಟಿಸ್ ಶಿಪ್ ಹುದ್ದೆಗಳು*
Next Article *ಕಾರ್ಗಿಲ್ ವಿಜಯ್ ದಿವಸ್ : ಹುತಾತ್ಮ ಯೋಧರಿಗೆ ಸೋಮವಾರಪೇಟೆಯಲ್ಲಿ ಗೌರವ ನಮನ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.