Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಮುಂದುವರಿದ ಗಾಳಿ ಮಳೆ : ಹಲವೆಡೆ ವಿದ್ಯುತ್ ಕಂಬ, ಮರ, ಮನೆ ಬಿದ್ದು ಹಾನಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಮುಂದುವರಿದ ಗಾಳಿ ಮಳೆ : ಹಲವೆಡೆ ವಿದ್ಯುತ್ ಕಂಬ, ಮರ, ಮನೆ ಬಿದ್ದು ಹಾನಿ*

ಜುಲೈ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.27 : ಕೊಡಗು ಜಿಲ್ಲೆಯಾದ್ಯಂತ ಗಾಳಿ ಮಳೆ ಮುಂದುವರೆದಿದ್ದು, ಹಲವೆಡೆ ವಿದ್ಯುತ್ ಕಂಬಗಳು, ಮರಗಳು ಮತ್ತು ಮನೆಗಳು ಬಿದ್ದು ಹಾನಿ ಸಂಭವಿಸಿದೆ. ಸಾಲು ಸಾಲು ವಿದ್ಯುತ್ ಕಂಬಗಳು ನೆಲಕಚ್ಚಿರುವುದರಿಂದ ಜಿಲ್ಲೆಯ ಬಹುತೇಕ ಗ್ರಾಮಗಳು ಕಾರ್ಗತ್ತಲಿನಲ್ಲಿವೆ. ಚಳಿ, ಗಾಳಿ, ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ ಒಂದೇ ದಿನದಲ್ಲಿ ದಾಖಲೆಯ 10 ಇಂಚು ಮಳೆಯಾಗಿದ್ದರೆ, ದಕ್ಷಿಣ ಕೊಡಗಿನ ಹುದಿಕೇರಿಯಲ್ಲಿ 8 ಇಂಚು, ಶ್ರೀಮಂಗಲದಲ್ಲಿ 7 ಇಂಚು, ಕಾವೇರಿಯ ಉಗಮ ಸ್ಥಾನ ಮಡಿಕೇರಿ ತಾಲ್ಲೂಕಿನ ತಲಕಾವೇರಿ ಮತ್ತು ಭಾಗಮಂಲದಲ್ಲಿ 6 ಇಂಚು ಮಳೆಯಾಗಿದೆ. ಕುಶಾಲನಗರ ತಾಲ್ಲೂಕಿನ ಹಾರಂಗಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಜಲಾಶಯದ ಎದುರು ಇರುವ ಯಡವನಾಡು- ಹಾರಂಗಿ ಸೇತುವೆ ನೀರಿನಿಂದ ಮುಳುಗಡೆಯಾಗಿದ್ದು, ಸೇತುವೆಯ ಎರಡು ಬದಿಯಲ್ಲಿ  ಪೋಲೀಸ್ ಬ್ಯಾರಿಕೇಡ್ ನ್ನು ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು ಅಳವಡಿಸಿದರು. ಸಾರ್ವಜನಿಕರು ಹಾಗೂ ವಾಹನಗಳು ಹೋಗದಂತೆ ಎಚ್ಚರಿಕೆ ನೀಡಿದ್ದಾರೆ. *ಹಲವೆಡೆ ಹಾನಿ* ಅಮ್ಮತ್ತಿ ಹೋಬಳಿ ಪುಲಿಯೇರಿ ಗ್ರಾಮದ ಶ್ರೀಜಾ ರಜೀಶ್ ಅವರ ಮನೆಯ ಮೇಲೆ ವಿದ್ಯುತ್ ಕಂಬ ಬಿದ್ದು ಭಾಗಶಃ ಹಾನಿಯಾಗಿದೆ. ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದು ಜಖಂಗೊಂಡಿದೆ. ನಾಪೋಕ್ಲು ಹೋಬಳಿ ಎಮ್ಮೆಮಾಡು ಗ್ರಾಮದ ಕರೀಂ ಟಿ.ಎ ಅವರ ವಾಸದ ಮನೆಯ ಮುಂಭಾಗದ ಗೋಡೆ ಕುಸಿದು  ಹಾನಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.  ಮನೆಯು ಸಂಪೂರ್ಣವಾಗಿ ಕುಸಿದು ಬೀಳುವ ಸಾಧ್ಯತೆಯಿದ್ದು, ಬೇರೆಡೆಗೆ ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ನಿವಾಸಿಗಳಿಗೆ ಸಲಹೆ ನೀಡಿದ್ದಾರೆ. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದ ನಿವಾಸಿ ಮಹಾದೇವಿ ಅವರ ಮನೆಗೆ ಮಳೆಯಿಂದ ಹಾನಿಯಾಗಿದೆ. ಮನೆಯ ಎರಡು ಬದಿಯ ಪೂರ್ಣ ಗೋಡೆ ಕುಸಿಯುವ ಹಂತದಲ್ಲಿದ್ದು ಕಂಬಗಳನ್ನು ಆಧಾರವಾಗಿ ನೀಡಲಾಗಿದೆ. ಮಹಾದೇವಿ ಹಾಗೂ ಪಾರ್ಶ್ವವಾಯುವಿನಿಂದ ಮಲಗಿದಲ್ಲೆ ಇರುವ ಪತಿ ಕೆಂಚ ಅವರು ಸಂಕಷ್ಟಕ್ಕೆ ಸಿಲುಕಿದ್ದು, ಇಬ್ಬರನ್ನು ಸಂಬಂಧಿಯ ಮನೆಗೆ ಸ್ಥಳಾಂತರಿಸಲಾಗಿದೆ. ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸೋಮವಾರಪೇಟೆ ತಾಲ್ಲೂಕಿನ ಹರದೂರು ಗ್ರಾ.ಪಂ ಕಟ್ಟಡ ಹಾಗೂ ಪಕ್ಕದಲ್ಲೇ ಇರುವ ಅಂಗನವಾಡಿ ಕೇಂದ್ರದ ಶೌಚಾಲಯದ ಮೇಲೆ ಮರ ಬಿದ್ದು ಹಾನಿಯಾಗಿದೆ. ಶನಿವಾರಸಂತೆ ಹೋಬಳಿಯ ಎಂ.ಎನ್.ದಿವಾಕರ ಎಂಬುವವರ ಮನೆಗೆ ಹಾನಿಯಾಗಿದೆ. ಮನೆ ಸಂಪೂರ್ಣ ನೆಲಸಮಗೊಳ್ಳುವ ಸಾಧ್ಯತೆಗಳಿರುವುದರಿಂದ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಸುಂಟಿಕೊಪ್ಪ ಹೋಬಳಿಯ ಉಲುಗುಲಿ ಗ್ರಾಮದ ಎನ್.ಆರ್.ನಂಜಪ್ಪ ಅವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಸಂಪಾಜೆ ಗ್ರಾಮದ ಎ.ಬಿ.ಬೋಜಪ್ಪ ಅವರ ಮನೆಯ ಮೇಲೆ ಭಾರೀ ಗಾತ್ರದ ಮರ ಬಿದ್ದು ಹಾನಿಯಾಗಿದೆ. ಸೋಮವಾರಪೇಟೆ ಹೋಬಳಿಯ ಮಾದಾಪುರದ ಶ್ರೀಮತಿ ಡಿ.ಚೆನ್ನಪ್ಪ ಪದವಿ ಪೂರ್ವ ಕಾಲೇಜು ಕಟ್ಟಡದ ಮೇಲೆ ಮರ ಬಿದ್ದು ಹಾನಿಯಾಗಿದೆ. ಸೂರ್ಲಬ್ಬಿ ಶಾಲೆಯ ಸಭಾಂಗಣದ ಮೇಲ್ಚಾವಣಿಯ ಶೀಟ್ ಗಳು ಭಾರೀ ಗಾಳಿಗೆ ಹಾರಿ ಹೋಗಿದೆ. ಮಡಿಕೇರಿಯ ಕರ್ಣಂಗೇರಿ ಗ್ರಾಮದ ರಜಾಕ್ ಎಂಬುವವರ ಮನೆಯ ಗೋಡೆ ಕುಸಿದು ಹಾನಿಯಾಗಿದೆ. ಕುಂಜಿಲ ಗ್ರಾಮದ ಉಮ್ಮರ್ ಎಂಬುವವರ ಮನೆಯ ಗೋಡೆ ಕುಸಿದು ಹಾನಿಯಾಗಿದೆ. ಕುಶಾಲನಗರದ ನೆಲ್ಲಿಹುದಿಕೇರಿ ಗ್ರಾಮದ ಸತ್ಯವತಿ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. *ಸ್ಥಳಾಂತರಕ್ಕೆ ಸೂಚನೆ* ಭಾರೀ ಮಳೆಯಿಂದ ಸೋಮವಾರಪೇಟೆ ಹೋಬಳಿಯ ಬಿಳಿಗೇರಿ ಗ್ರಾಮದ ಹೊಳೆಯ ನೀರು ಏರಿಕೆಯಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಸುರಕ್ಷಿತ ಪ್ರದೇಶಕ್ಕೆ ಅಥವಾ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಿದ್ದಾರೆ. *ಸಹಕರಿಸಲು ಮನವಿ* ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಗಾಳಿ ಮಳೆಯಾಗುತ್ತಿದ್ದು, ವಿದ್ಯುತ್ ಕಂಬಕ್ಕೆ ಮರ ಹಾಗೂ ರೆಂಬೆ ಕೊಂಬೆಗಳು ಮುರಿದು ಬಿದ್ದು ವಿದ್ಯುತ್ ಮಾರ್ಗಕ್ಕೆ ಹಾನಿಯಾಗಿದೆ. ವಿದ್ಯುತ್ ಮಾರ್ಗದ ದುರಸ್ತಿ ಕಾರ್ಯವು ಸೆಸ್ಕ್ ವತಿಯಿಂದ ಸಮಾರೋಪಾದಿಯಲ್ಲಿ ನಡೆಯುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ  ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಕೋರಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು…

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.