
ಮಡಿಕೇರಿ ಜು.30 NEWS DESK : ಕೊಡಗು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಚಿವರು ಹಾಗೂ ಶಾಸಕರು ಕೊಡಗು ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಕುರಿತು ವಿವರಿಸಿದರು. ಜಿಲ್ಲಾ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳು ಉಂಟುಮಾಡಿರುವ ಧನಾತ್ಮಕ ಬದಲಾವಣೆಯ ಮಾಹಿತಿ ಪಡೆದ ಸಿಎಂ, ವಿವಿಧ ಇಲಾಖೆಗಳಡಿ ನೀಡಲಾದ ಅನುದಾನ ಮತ್ತು ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಪ್ರತಿ ಅರ್ಹರಿಗೂ ತಲುಪಿಸುವ ನಿಟ್ಟಿನಲ್ಲಿ ಕೆಲವು ಮಹತ್ವದ ಸಲಹೆಗಳನ್ನು ಮುಖ್ಯಮಂತ್ರಿಗಳು ನೀಡಿದರು ಎಂದು ಶಾಸಕದ್ವಯರು ತಿಳಿಸಿದ್ದಾರೆ.








