
ಮಡಿಕೇರಿ ಜು.30 NEWS DESK : ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ್ ಮೀನಾ ಅವರು ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತು 15 ದಿನಗಳ “ಕ್ಷೇತ್ರ ಭೇಟಿ ಪರಿಶೀಲನಾ ಆಂದೋಲನ” ದ ಅಂಗವಾಗಿ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ , ಏಳನೇ ಹೊಸಕೋಟೆ, ನಂಜರಾಯಪಟ್ಟಣ ಗ್ರಾಮಗಳಿಗೆ ಭೇಟಿ ನೀಡಿ ಜೆಜೆಎಂ ಕಾಮಗಾರಿಯಡಿ ಅಳವಡಿಸಿರುವ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ – ನೀರಿನ ಗುಣಮಟ್ಟ ಸೇರಿದಂತೆ ವಿವಿಧ ವಿಷಯಗಳ ಕುರಿತು ವರದಿಗಳನ್ನು ಪರಿಶೀಲಿಸಿದರು. ಗ್ರಾಮಗಳಲ್ಲಿನ ಶಾಲೆ, ಗ್ರಂಥಾಲಯ ಮತ್ತು ಅಂಗನವಾಡಿಗಳಿಗೆ ಭೇಟಿ ನೀಡಿದ ಅವರು ಗ್ರಾಮಗಳಲ್ಲಿರುವ ಕುಡಿಯುವ ನೀರಿನ ಯೋಜನೆಯ ನೀರು ಶುದ್ದಿಕರಣ ಘಟಕಗಳು ಹಾಗೂ ನೀರು ಶೇಖರಣ ತೊಟ್ಟಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕಾರ್ಯಪಾಲಕ ಅಭಿಯಂತರರು, ಗ್ರಾ.ಕು.ನೀ.ನೈ ವಿಭಾಗ, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲೂಕು ಪಂಚಾಯಿತಿ , ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ/ ಕಿರಿಯ ಅಭಿಯಂತರರು, ಜಿಲ್ಲಾ ಯೋಜನೆ ಸ್ಥಾಪಕರು, ಜಿಯಾಲಜಿಸ್ಟ್, ಸಪೋರ್ಟ್ ಇಂಜಿನಿಯರ್ ಗಳು ಹಾಗೂ ಗ್ರಾಮ ಪಂಚಾಯತಿ ಪಿಡಿಒ ಗಳು, ಅಧ್ಯಕ್ಷರು, ಸದಸ್ಯರು, ನೀರುಗಂಟಿಗಳು ಹಾಜರಿದ್ದರು.









