
ಕುಶಾಲನಗರ ಜು.30 NEWS DESK : ಕುಶಾಲನಗರ ವಾಸವಿ ಯುವ ಜನ ಸಂಘ ಆಶ್ರಯದಲ್ಲಿ ಮೈಸೂರು ನಾರಾಯಣ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಹೃದಯ ತಪಾಸಣಾ ಶಿಬಿರ ನಡೆಯಿತು. ಕುಶಾಲನಗರ ವಾಸವಿ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ವಾಸವಿ ಮಹಾಸಭಾ ಪ್ರಮುಖರು ಹಾಗೂ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಚಾಲನೆ ನೀಡಿದರು. ವಾಸವಿ ಯುವಜನ ಸಂಘದ ಅಧ್ಯಕ್ಷರಾದ ಪ್ರವೀಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಾಸವಿ ಮಹಾಸಭಾ ಕೊಡಗು ಜಿಲ್ಲಾ ಕಾರ್ಯದರ್ಶಿ ಬಿ.ಎಲ್.ಸತ್ಯನಾರಾಯಣ, ಮಹಿಳಾ ವೇದಿಕೆಯ ಅಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ಕಾರ್ಯದರ್ಶಿ ಹೇಮಾ ಸುನಿಲ್, ಪುರಸಭೆ ಸದಸ್ಯರಾದ ಅಮೃತರಾಜ್, ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ ಎನ್ ಚಂದ್ರಮೋಹನ್ ಮತ್ತಿತರರು ಇದ್ದರು. ಮೈಸೂರು ನಾರಾಯಣ ಆಸ್ಪತ್ರೆಯ ವೈದ್ಯರಾದ ಡಾ.ಗುಲ್ಜಾರ್ ಅವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ 120ಕ್ಕೂ ಅಧಿಕ ಮಂದಿ ಪಾಲ್ಗೊಂಡು ರಕ್ತ ಪರೀಕ್ಷೆ, ರಕ್ತದೊತ್ತಡ ಹಾಗೂ ಇಸಿಜಿ ಮತ್ತಿತರ ಪರೀಕ್ಷೆಯನ್ನು ತಂಡದ ಸಿಬ್ಬಂದಿಗಳು ನಡೆಸಿಕೊಟ್ಟರು. ವಾಸವಿ ಯುವಜನ ಸಂಘದ ಕಾರ್ಯದರ್ಶಿ ಅಂಜನ್, ಖಜಾಂಚಿ ಗೌತಮ್, ನಿಖಿಲ್ ವೈಶಾಖ ಮತ್ತಿತರರು ಇದ್ದರು.









