
ಮಡಿಕೇರಿ ಜು.30 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಸೋಮವಾರಪೇಟೆ ತಾಲ್ಲೂಕಿನ ಚನ್ನಾಪುರ ದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ ವತಿಯಿಂದ 6ನೇ ತರಗತಿಯಿಂದ 12ನೇ ತರಗತಿಯವರೆಗೆ 37.55 ಕೋಟಿ ರೂಪಾಯಿ ವೆಚ್ಚದಲ್ಲಿ ವಸತಿ ಶಾಲೆ ನಿರ್ಮಿಸಲು ಸರ್ಕಾರದಿಂದ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಶಾಸಕರಾದ ಶ್ರೀ ಡಾ.ಮಂತರ್ ಗೌಡ ಅವರು ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದರು.









