
ಮಡಿಕೇರಿ ಜು.31 NEWS DESK : ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ ದೈಹಿಕ ಶಿಕ್ಷಣ ಅಧಿಕಾರಿ ಗಾಯತ್ರಿ ಅವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಮುಖರು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಅನುದಾನಿತ ಶಾಲಾ ಕಾಲೇಜು ನೌಕರರ ಸಂಘದ ಅಧ್ಯಕ್ಷ ಪಡಿಞರಂಡ ಪ್ರಭುಕುಮಾರ್, ಗಾಯತ್ರಿಯವರು ದೈಹಿಕ ಶಿಕ್ಷಣ ಶಿಕ್ಷಕರಾಗಿ ವೃತ್ತಿಗೆ ಸೇರಿ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಕ್ರೀಡಾರಂಗದಲ್ಲಿ ಮಾರ್ಗದರ್ಶನ ನೀಡಿ ನಂತರ ಮುಖ್ಯಶಿಕ್ಷಕಿಯಾಗಿ ವಿರಾಜಪೇಟೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ ನಂತರ ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾಗಿ ವೃತ್ತಿ ಜೀವನದಲ್ಲಿ ಯವುದೇ ಕಪ್ಪು ಚುಕ್ಕೆ ಇಲ್ಲದೆ ನಿವೃತ್ತರಾಗುತ್ತಿರುವುದು ಇವರು ಶೖಕ್ಷಣಿಕ ಕ್ಷೇತ್ರಕ್ಕೆ ನೀಡಿರುವ ಬಹು ದೊಡ್ಡ ಕೊಡುಗೆ ಎಂದು ಅಭಿಪ್ರಾಯ ವ್ಯಕ್ತಿಪಡಿಸಿದರು. ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್, ಸಂಚಾಲಕರಾದ ಮಹೇಶ್, ಪೊನ್ನಂಪೇಟೆ ಗ್ರೇಡ್ ವನ್ ಶಿಕ್ಷಕರ ಸಂಘದ ಅಧ್ಯಕ್ಷ ಸದಾಶಿವ ಪಲ್ಲೇದ್, ವಿರಾಜಪೇಟೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಂಡೆಪ್ಪಂಡ ತಮ್ಮಯ್ಯ, ಶಿಕ್ಷಕ ಪ್ರಮುಖರಾದ ಪೂರ್ಣೆಶ್ ರಮಾನಂದ, ಶಿವ ಪ್ರಸಾದ್, ಅಶೋಕ್ ಕಳ್ಳಿಚಂಡ ಕಾವೇರಮ್ಮ ಸೇರಿದಂತ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಹಾಜರಿದ್ದರು.









