
ಮಡಿಕೇರಿ ಜು.31 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ, ವಿದ್ಯಾರ್ಥಿ ನಿಯರಿಗೆ ಜಾನಪದ ಗಾಯನ ಕಲಿಕಾ ತರಬೇತಿ ಶಿಬಿರವು ಆಗಸ್ಟ್, 01 ರಂದು ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ಮರೂರು ತಿತಿಮತಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ, ತಿತಿಮತಿ ಗ್ರಾ.ಪಂ. ಅಧ್ಯಕ್ಷರಾದ ಪಿ.ಎಸ್.ಪೊನ್ನು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೇಶವಕಾಮತ್, ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರ್ ಕೆ.ಎನ್.ಮೋಹನ್ ಕುಮಾರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಪೊನ್ನಂಪೇಟೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತೇಜರಾಜ ಹಲಸಬಾಳ್, ತಿತಿಮತಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗುರುಶ್ರೀ, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮುಖ್ಯ ಶಿಕ್ಷಕರಾದ ವಿ.ಎಸ್.ಪ್ರಶಾಂತ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ. ಕುಶಾಲನಗರ ಗಾಯಕರಾದ ಆರ್.ರವಿ ಅವರು ಜಾನಪದ ಸಂಗೀತ ತರಬೇತಿ ನೀಡಲಿದ್ದಾರೆ.









