Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣ, ನಿರ್ದೇಶನದ ‘ಕಂದೀಲು’ ಕನ್ನಡ ಚಲನಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿಯ ಗರಿ : ರಾಷ್ಟ್ರ ಪ್ರಶಸ್ತಿ ಗೆದ್ದ ಕೊಡಗಿನ ಮೊದಲ ನಿರ್ದೇಶಕಿ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಭಾರತ

ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣ, ನಿರ್ದೇಶನದ ‘ಕಂದೀಲು’ ಕನ್ನಡ ಚಲನಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿಯ ಗರಿ : ರಾಷ್ಟ್ರ ಪ್ರಶಸ್ತಿ ಗೆದ್ದ ಕೊಡಗಿನ ಮೊದಲ ನಿರ್ದೇಶಕಿ

ಆಗಷ್ಟ್ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಆ.1 : ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಡಗಿನ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿರುವ ಕನ್ನಡ ಚಲನಚಿತ್ರ ‘ಕಂದೀಲು’ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದೆ. 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಪ್ರಾದೇಶಿಕ ಚಿತ್ರ ವಿಭಾಗಗಳಲ್ಲಿ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳ 13 ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿದೆ. ಕೊಡಗು ಜಿಲ್ಲೆಯ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ನಿರ್ಮಿಸಿ, ನಿರ್ದೇಶಿಸಿರುವ ‘ಕಂದೀಲು’ ಚಿತ್ರ ಫೀಚರ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ‘ಕಂದೀಲು’ ಗ್ರಾಮವೊಂದರ ಕಥೆಯಾಗಿದ್ದು, ರೈತ ಹಾಗೂ ಆತನ ಕುಟುಂಬದ ಸುತ್ತ ಬೆಳಕು ಚೆಲ್ಲಲಾಗಿದೆ. ‘ಕಂದೀಲು’ ಚಿತ್ರದ ಮೂಲಕ ರಾಷ್ಟ್ರೀಯ ಪ್ರಶಸ್ತಿಯನ್ನು ಗಳಿಸಿರುವ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ರಾಷ್ಟ್ರ ಪ್ರಶಸ್ತಿ ಪಡೆದ ಕೊಡಗಿನ ಮೊದಲ ಮಹಿಳಾ ನಿರ್ದೇಶಕಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೊಲ್ಕತ್ತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದ “ಕಂದೀಲು” ಚಲನಚಿತ್ರ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾದ ಸ್ಪರ್ಧಾತ್ಮಕ ವಿಭಾಗದಲ್ಲಿ “2ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ” ಯನ್ನು ತನ್ನದಾಗಿಸಿಕೊಂಡಿತ್ತು. ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದ ಈ ಚಿತ್ರ ವಿಶ್ವ ವಿಖ್ಯಾತ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಇನಾಕ್ಸ್ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡು ಜನಮೆಚ್ಚುಗೆ ಪಡೆದುಕೊಂಡಿತ್ತು. ವಿಭಿನ್ನ ಕಥಾ ಹಂದರದ ‘ಕಂದೀಲು’ ಚಿತ್ರದ ಮುಖ್ಯಪಾತ್ರದಲ್ಲಿ ಪ್ರಭಾಕರ್ ಬಿ.ಕುಂದರ, ವಿನಿತಾ ರಾಜೇಶ್, ಗುರು ತೇಜಸ್, ಬಾಲ ನಟಿಯಾಗಿ ಈರಮಂಡ ಕುಷಿ ಕಾವೇರಮ್ಮ, ಚಂದ್ರಕಾಂತ್ ಕೋಟುಪಾಡಿ, ವೆಂಕಟೇಶ್ ಪಸಾದ್, ಹರಿಣಿ ವಿಜಯ್, ರಮೇಶ್ ಕೂಡ್ಲು, ಬಸವರಾಜ್, ಆಡುಗುಡಿ ಶ್ರೀನಿವಾಸ್, ಮಂಜುನಾಥ್, ಶಿವಕುಮಾರ್, ಹನುಮಂತ, ಜಿ.ಸಿ.ಪರಮೇಶ್ ಗೂಗರದೊಡ್ಡಿ, ದೊಡ್ಡಣ್ಣ, ಬಂಗಾರಶೆಟ್ಟಿ ಮುದುವಾಡಿ, ರತ್ನಾಕುಮಾರಿ, ರೋಹಿಣಿ ಮತ್ತಿತರರು ಅಭಿನಯಿಸಿದ್ದಾರೆ. ಶ್ರೀ ಸುರೇಶ್ ಸಂಗೀತ, ಪಿ.ವಿ.ಆರ್.ಸ್ವಾಮಿ ಛಾಯಾಗ್ರಹಣ ಚಿತ್ರಕ್ಕಿದ್ದು, ಕಥೆ, ಸಂಕಲನ, ಸಂಭಾಷಣೆ ಎನ್.ನಾಗೇಶ್, ಚಿತ್ರಕಥೆ ಸ.ಹರೀಶ್ ಹಾಗೂ ಎನ್.ನಾಗೇಶ್ ಒದಗಿಸಿದ್ದಾರೆ. ಪ್ರಸನ್ನ ಪನಕನಹಳ್ಳಿ, ನಾಗರಾಜ್ ಡಿಕ್ಕಿ, ಇತಿಹಾಸ್ ಶಂಕರ್, ಕಲರಿಂಗ್ ಬುಟ್ಟಂಡ ನಿಖಿಲ್ ಕಾರ್ಯಪ್ಪ, ಕಲಾ ನಿರ್ದೇಶನ ಚೇತನ್ ಕೆಂಕೆರೆ, ಮೇಕಪ್ ಶಿವು, ಕಾಸ್ಟಿಮ್ ಡಿಸೈನರ್ ಸುಧಾ ಪ್ರೊಡಕ್ಸನ್ ಟೀಮ್ ಮೂರ್ತಿ, ಲೈಟಿಂಗ್ ಟೀಮ್ ಹೆಚ್‌ಎಸ್‌ಎಂ ಸಿನಿ ಸರ್ವಿಸ್, ಪೋಸ್ಟ್ ಪ್ರೊಡಕ್ಷನ್ ರಾಷ್ಟ್ರಕ್ ಮಿಡಿಯಾ ಸೆಲ್ಯೂಷನ್, ಪೋಸ್ಟ್ ಡಿಸೈನರ್ ದೇವು, ಪ್ರೊಡಕ್ಷನ್ ಡಿಸೈನರ್ ಪಿವಿಆರ್ ಸ್ವಾಮಿ ನಿರ್ವಹಿಸಿದ್ದಾರೆ. *ಯಶೋಧ ಪ್ರಕಾಶ್ ಹರ್ಷ* ‘ಕಂದೀಲು’ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಬಂದಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು, ಇಡೀ ಚಿತ್ರತಂಡ ಹಾಗೂ ಕಲಾವಿದರ ಸಹಕಾರದಿಂದ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿದೆ. ಪತಿ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ನೀಡಿದ ಪ್ರೋತ್ಸಾಹ ಅಪಾರ ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 15: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕೊಡಗು ಜಿಲ್ಲೆಯಲ್ಲಿ ಪ್ರತಿಭಟನೆ…

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026

ಎಸ್.ಐ.ಆರ್. ಪ್ರಕ್ರಿಯೆ ರದ್ದತಿಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 15, 2026

ಸುಂಟಿಕೊಪ್ಪ ಮಲಯಾಳಿ ಸಮಾಜದ 19ನೇ ವರ್ಷದ ಓಣಂ ಆಚರಣೆ; ಸಮಾಜದ ಒಗ್ಗಟ್ಟು ಮತ್ತು ಸಂಘಟನೆ ಎಲ್ಲರಿಗೂ ಮಾದರಿ: ಶಾಸಕ ಡಾ. ಮಂತರ್ ಗೌಡ

ಅಕ್ಟೋಬರ್ 15, 2026

ಸುಂಟಿಕೊಪ್ಪದಲ್ಲಿ ಮಲಯಾಳಿ ಸಮಾಜದಿಂದ 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 15, 2026

ಹೊಸತೋಟದಲ್ಲಿ ರಕ್ತದಾನ ಶಿಬಿರ: 30 ಮಂದಿ ರಕ್ತದಾನ

ಅಕ್ಟೋಬರ್ 15, 2026

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.