Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು ವಿನಲ್ಲಿ ಕಕ್ಕಡ-18 ತೀನಿ ನಮ್ಮೆ : ಯುವ ಸಮೂಹ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ : ಮುಂಡಂಡ ಸಿ.ನಾಣಯ್ಯ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು ವಿನಲ್ಲಿ ಕಕ್ಕಡ-18 ತೀನಿ ನಮ್ಮೆ : ಯುವ ಸಮೂಹ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ : ಮುಂಡಂಡ ಸಿ.ನಾಣಯ್ಯ ಸಲಹೆ*

ಆಗಷ್ಟ್ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಆ.4 NEWS DESK : ಹದಿನೆಂಟು ಬಗೆಯ ಔಷಧೀಯ ಗುಣಗಳು ಹೊಂದಿರುವ ಮದ್ದುಸೊಪ್ಪಿನ ಬಳಕೆಯ ಆಚರಣೆ ಕಕ್ಕಡ-18 ಅನ್ನು ವೈಶಿಷ್ಟಪೂರ್ಣವಾಗಿ ಆಚರಿಸಬೇಕು ಎಂದು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು. ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ನಡೆದ ಕಕ್ಕಡ-18 ತೀನಿ ನಮ್ಮೆ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಹಿಂದೆ ಭತ್ತದ ಕೃಷಿ ಮಾಡುವ ರೈತರಲ್ಲಿ ಸಂತೋಷ, ಸಂಭ್ರಮ ಇತ್ತು. ಇಂದು ಅದೆಲ್ಲವೂ ಮರೆಯಾಗಿದೆ ಮಕ್ಕಳಿಗೆ ಕೃಷಿ ಚಟುವಟಿಕೆಗಳಲ್ಲಿ ಆಸಕ್ತಿ ಇಲ್ಲ. ರೈತರಿಗೆ ಖುಷಿ, ತೃಪ್ತಿ ಇಲ್ಲ. ಗದ್ದೆಗಳೆಲ್ಲ ಪಾಳುಬಿದ್ದಿವೆ. ಒಂದಷ್ಟು ಭಾಗ ಅಡಿಕೆ, ಕಾಫಿ ತೋಟಗಳಾಗಿವೆ. ಗತವೈಭವದ  ಸಂತೋಷ, ಸಂಭ್ರಮವನ್ನು ಕಾಣಬೇಕಿದ್ದರೆ ಇಂದಿನ ಯುವ ಜನರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಭತ್ತದ ಗದ್ದೆಗಳಲ್ಲಿ ಅಗೆ ತೆಗೆಯುವುದು, ನಾಟಿ ಮಾಡುವುದು ಹೇಗೆ ಎಂಬ ಬಗ್ಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ತರಬೇತಿ ನೀಡುವ ಅಗತ್ಯವಿದೆ ಎಂದರು. ಕಾರ್ಯಕ್ರಮವನ್ನು ಕೊಳಕೇರಿಯ ಕಾಫಿ ಬೆಳೆಗಾರ್ತಿ ಬಿದ್ದಾಟಂಡ ಸುಮನ್ ಪ್ರದೀಪ್ ಉದ್ಘಾಟಿಸಿ ಮಾತನಾಡಿ, ನಿಸರ್ಗದತ್ತವಾದ  ಆಹಾರ ಬಳಕೆ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು. ಕೊಡಗಿನಲ್ಲಿ ಕೊಡಗಿನ ಹವಗುಣಕ್ಕೆ ತಕ್ಕಂತೆ ಆಹಾರ ಪದ್ದತಿ ಕ್ರಮ ಇದ್ದು, ಅದನ್ನು ನಮ್ಮ ಹಿರಿಯರು ಪಾಲಸಿಕೊಂಡು ಇಲ್ಲಿಯವರೆಗೆ ಬಂದಿದ್ದಾರೆ. ಇನ್ನು ಮುಂದಕ್ಕೂ ಕೂಡ ಈ ಪದ್ದತಿ ಮುಂದುವರಿಯಬೇಕು. ಕೊಡಗಿನ ಮಹಿಳೆಯರು ಅಡುಗೆ ತಯಾರಿಸುವಲ್ಲಿ ನೈಪುಣ್ಯತೆ ಹೊಂದಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಮುಂದೆ ಬರಬೇಕು. ಒಗ್ಗಟ್ಟು, ಐಕ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದರು. ಬ್ಯಾಂಕ್ ಆಫ್ ಮಹಾರಾಷ್ಟ್ರದ ನಿವೃತ್ತ ವ್ಯವಸ್ಥಾಪಕಿ ಕೋಡಿಮಣಿಯಂಡ ರಚನ ಕುಟ್ಟಪ್ಪ ಮಾತನಾಡಿ, ಸಂಸಾರವನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಜವಾಬ್ದಾರಿ ಮಹಿಳೆಯರದ್ದು, ಕಕ್ಕಡ 18ರ ತಿನಿಸುಗಳ ಹಬ್ಬ ಎಲ್ಲರೂ ಸಂಘಟಿತರಾಗಲು ಒಂದು ಉತ್ತಮ ವೇದಿಕೆಯಾಗಿದೆ. ಸಂಘ ಸಂಸ್ಥೆಗಳ ನೆರವಿನಿಂದ ಕೃಷಿ ಚಟುವಟಿಕೆಗಳ ಪುನಃ ಚೇತನ ಅಗತ್ಯವಿದೆ ಎಂದರು.  ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಷಾ ಮೇದಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ತಿನಿಸುಗಳ ಪ್ರದರ್ಶನವನ್ನು ನೆಲಜಿ ಮಹಿಳಾ ಸಮಾಜದ ಮಾಜಿ ಅಧ್ಯಕ್ಷೆ ಮಣವಟ್ಟಿರ ಕಮಲ ಬೆಳ್ಳಪ್ಪ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನರ್ಸಿಂಗ್ ಸೂಪರಿಟೆಂಡೆಂಟ್ ಗ್ರೇಡ್ 2, ಬಾಳೆಯಡ ರತಿ ಪೆಮ್ಮಯ್ಯ ಹಾಗೂ ಗೋಣಿಕೊಪ್ಪದ ಕಾವೇರಿ ಕಾಲೇಜಿನ ಉಪನ್ಯಾಸಕಿ ಡಾ.ಚೀಯಕಪೂವಂಡ ಸವಿತ ಅಪ್ಪಚ್ಚು ಅವರನ್ನು ಪರಿಷತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಕ್ಕಡ ತೀನಿರ ಭೋಜ ಎಂಬ ವಿಷಯದ ಕುರಿತು ಪುಲಿಕೋಟು ಗ್ರಾಮದ ಲೇಖಕಿ ಕರವಂಡ ಸೀಮಾ ಗಣಪತಿ ವಿಚಾರ ಮಂಡಿಸಿದರು. ಕಾರ್ಯಕ್ರಮದಲ್ಲಿ ಕೊಡವ ತಿನಿಸುಗಳ ಪ್ರದರ್ಶನ ಮತ್ತು ತಯಾರಿ ಸ್ಪರ್ಧೆ ಹಾಗೂ ಇನ್ನಿತರ ಕ್ರೀಡೆ ಮತ್ತು ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿ ವಿಜೇತರಾದವರಿಗೆ ಗಣ್ಯರು ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು. ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ,  ಕನ್ನಂಬೀರ ಸ್ವರ್ಣ, ಕೋಟೆರ ಬಾನು  ತೀರ್ಪುಗಾರರಾಗಿ  (ಜಡ್ಜರ್ಸ್ ಕಾರ್ಯನಿರ್ವಹಿಸಿದರು). ಅರೆಯಡ ಸರಸು ಚರ್ಮನ ಅವರು ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಕೋಟೆರ ಝಾನ್ಸಿ ಮಂದಪ್ಪ ಸ್ವಾಗತಿಸಿ ಬಿದ್ದಾಟಂಡ ಮಮತಾ ಚಿಣ್ಣಪ್ಪ ಮತ್ತು  ಕದ್ದನಿಯಂಡ ವಂದನಾ ಚಿನ್ನಪ್ಪ ಕಾರ್ಯಕ್ರಮವನ್ನು ನಿರೂಪಿಸಿದರು. ಕರವಂಡ ಸರಸು ಪೆಮ್ಮಯ್ಯ, ಮುಕ್ಕಾಟಿರ ರೇಷ್ಮಾ,  ಕಾಂಡಂಡ ಪ್ರತಿಜಾ ಅಚ್ಚಪ್ಪ, ಪೆಮ್ಮಂಡ ಕೌಶಿ ಕಾವೇರಮ್ಮ, ನಾಯಕಂಡ ಜೋಬಿ ತಿಮ್ಮಯ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿ ಕಲಿಯಂಡ ಗೀತಾ ಗಿರೀಶ್ ವಂದಿಸಿದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.