
ವಿರಾಜಪೇಟೆ ಆ.5 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಪೊನ್ನಂಪೇಟೆ ವಲಯದ ಶೆಟ್ಟಿಗೇರಿ ಕಾರ್ಯಕ್ಷೇತ್ರದ ಹರಿಹರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರಾದ ಸುಶೀಲಾ ಅಶೋಕ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ತಡಿಯಂಗಡ ಸೌಮ್ಯ ಕರುಂಬಯ್ಯ ಮಾತನಾಡಿ, ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು, ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ, ನೀರು ಸಿಗುತ್ತದೆ ಹಾಗೂ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದಲ್ಲಿ ಗಿಡ ನಾಟಿ ಮಾಡಿ ಪರಿಸರ ಸಂರಕ್ಷಿಸಬೇಕು, ವಾಯು ಮಾಲಿನ್ಯ, ಜಲ ಮಾಲಿನ್ಯ, ಶಬ್ದ ಮಾಲಿನ್ಯದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ನಾಗರಾಜ್, ಕೃಷಿ ಮೇಲ್ವಿಚಾರಕ ವಸಂತ್, ಶಾಲಾ ಶಿಕ್ಷಕಿಯರಾದ ಸಾವಿತ್ರಿ, ಗುಲಾಬಿ, ವಿಧಿನ, ಹೇಮಾವತಿ ಒಕ್ಕೂಟದ ಅಧ್ಯಕ್ಷರಾದ ಮೀನಾ, ಒಕ್ಕೂಟದ ಪದಾಧಿಕಾರಿಗಳಾದ ಸರಸ್ವತಿ, ಉಷಾ, ರಮ್ಯಾ, ಬಬಿತ, ರಾಜೇಶ್ ಸೇವಾ ಪ್ರತಿನಿಧಿ ಸರಳ, ಗೀತಾ, ಶಾಲಾ ಮಕ್ಕಳು ಇದ್ದರು. ಶಾಲಾ ಆವರಣದಲ್ಲಿ ವಿವಿಧ ರೀತಿಯ ಹಣ್ಣಿನ ಗಿಡಗಳನ್ನು ನೆಡಲಾಯಿತು.









