ಮಡಿಕೇರಿ ಆ.6 NEWS DESK : ಪೊನ್ನಂಪೇಟೆ ತಾಲ್ಲೂಕಿನ ಬಾಳಲೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ, ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಲಹೆಗಳನ್ನು ನೀಡಿದರು. ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೋದಂಡ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಶಾಸಕರೊಂದಿಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ, ಹವಾಲುಗಳನ್ನು ನೀಡಿದರು. ಸಭೆಯಲ್ಲಿ ವಲಯ ಕಾಂಗ್ರೆಸ್ ಪದಾಧಿಕಾರಿಗಳು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅರುಣ್ ಮಾಚಯ್ಯ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ನಿಟ್ಟೂರು ವಲಯ ಅಧ್ಯಕ್ಷ ಪವನ್, ಚೋಂದಮ್ಮ, ಪಂಚಾಯಿತಿ ಸದಸ್ಯರಾದ ವಿನು ಉತ್ತಪ್ಪ, ಸರಕಾರಿ ನಾಮನಿರ್ದೇಶಿತ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.










