ಮಡಿಕೇರಿ ಆ.6 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕು ಕಾನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಲಕ್ಕುಂದ ಪೈಸಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್, ರಸ್ತೆ ಅಭಿವೃದ್ಧಿ ಹಾಗೂ ಹಕ್ಕುಪತ್ರ ಒದಗಿಸಲು ಕ್ರಮ ಕೈಗೊಳ್ಳುವಂತೆ ನಿವಾಸಿಗಳು ಶಾಸಕರ ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಶಾಸಕರು, ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. :: ಕಾಂಗ್ರೆಸ್‍ಗೆ ಸೇರ್ಪಡೆ :: ಶಾಸಕರ ಜನಪರ ಕಾಳಜಿ, ಅಭಿವೃದ್ಧಿ ಬಗ್ಗೆ ಚಿಂತನೆ ಹಾಗೂ ಕ್ಷೇತ್ರದ ಜನರ ಬಗ್ಗೆ ಅವರು ಹೊಂದಿರುವ ಅಭಿವೃದ್ಧಿಯ ಕನಸುಗಳನ್ನು ಮೆಚ್ಚಿದ ಇತರ ಪಕ್ಷದ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಪಕ್ಷದ ಶಾಲು ಹೊದಿಸಿ, ಪಕ್ಷಕ್ಕೆ ಬರಮಾಡಿಕೊಂಡ ಶಾಸಕರು ಪಕ್ಷವನ್ನು ಬಲಪಡಿಸುವುದರೊಂದಿಗೆ ಜನಸಾಮಾನ್ಯರ ಬಗ್ಗೆ ಅಪಾರ ಕಾಳಜಿ ವಹಿಸಿಕೊಂಡು ಅವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಕರೆ ನೀಡಿದರು. :: ಆಹಾರ ಕಿಟ್ ವಿತರಣೆ :: ಈ ಸಂದರ್ಭ ಶಾಸಕರು ಸ್ಥಳೀಯ ನಿವಾಸಿಗಳಿಗೆ ಐಟಿಡಿಪಿ ಇಲಾಖೆ ಮೂಲಕ ವಿತರಿಸಲಾಗುವ ಆಹಾರದ ಕಿಟ್ ಒದಗಿಸಿದರು. ಕಾನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ಪಂಚಾಯಿತಿ ಸದಸ್ಯರಾದ ಬೋಪಣ್ಣ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಮ್ಮಡ ಸೋಮಣ್ಣ, ಸ್ಥಳೀಯ ಪ್ರಮುಖರಾದ ಸಿದ್ದು ನಾಚಪ್ಪ, ಮನು, ನಿಖಿಲ್, ನಾಲ್ಕೇರಿ ವಲಯ ಅಧ್ಯಕ್ಷರಾದ ಕಟ್ಟಿ ಕಾರ್ಯಪ್ಪ, ಕೆ ಬಾಡಗ ವಲಯ ಅಧ್ಯಕ್ಷರಾದ ರವಿ, ಪಕ್ಷದ ಪ್ರಮುಖರು, ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರುಗಳು, ಸರಕಾರಿ ನಾಮನಿರ್ದೇಶಿತ ಪದಾಧಿಕಾರಿಗಳು, ತಾಲೂಕು ತಹಶೀಲ್ದಾರ್, ಐಟಿಡಿಪಿ ಅಧಿಕಾರಿಗಳು ಹಾಗೂ ಸ್ಥಳೀಯರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.










