
ನಾಪೋಕ್ಲು ಆ.6 NEWS DESK : ಪಾರಾಣೆ ಯೂತ್ ಕ್ರಿಕೆಟರ್ಸ್ ವತಿಯಿಂದ ಪಾರಾಣೆ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಿತು. ಕೆಸರು ಗದ್ದೆ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಆದರ್ಶ್ ಫ್ರೆಂಡ್ಸ್ ಚೆಡವು ಚಾಂಪಿಯನ್, ಕಗ್ಗೋಡು ಫ್ರೆಂಡ್ಸ್ ತಂಡ ದ್ವಿತೀಯ ಸ್ಥಾನ ಪಡೆಯಿತು. ಕ್ರಿಕೆಟ್ ಪಂದ್ಯದಲ್ಲಿ ಗೋಣಿಕೊಪ್ಪ ತಂಡ ಪ್ರಥಮ ಸ್ಥಾನ ಪಡೆದರೆ, ಓಂ ಸಿ ಸಿ ಬೆಟ್ಟಗೇರಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಸಮಾರೋಪ ಸಮಾರಂಭದಲ್ಲಿ ಅತಿಥಿಗಳು ಬಹುಮಾನ ವಿತರಿಸಿದರು.
ವರದಿ : ದುಗ್ಗಳ ಸದಾನಂದ








