Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪರಿಸರ ರಕ್ಷಣೆ, ಸರ್ಕಾರಿ ಶಾಲೆಗಳ ಉಳಿವಿಗಾಗಿ ಪರಿಸರ ಪ್ರೇಮಿ ಮಹಾಲಿಂಗಯ್ಯ ಸೈಕಲ್‌ ಯಾತ್ರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪರಿಸರ ರಕ್ಷಣೆ, ಸರ್ಕಾರಿ ಶಾಲೆಗಳ ಉಳಿವಿಗಾಗಿ ಪರಿಸರ ಪ್ರೇಮಿ ಮಹಾಲಿಂಗಯ್ಯ ಸೈಕಲ್‌ ಯಾತ್ರೆ*

ಆಗಷ್ಟ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಆ.6 NEWS DESK : ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಪರಿಸರ ಸಂರಕ್ಷಣೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಶಿಕ್ಷಣ ಸಬಲೀಕರಣಕ್ಕೆ ಆದ್ಯತೆ ನೀಡುವುದು ಬಹಳ ಮುಖ್ಯವಾಗಿದೆ’ ಎಂದು ತುಮಕೂರಿನ ಪರಿಸರ ಪ್ರೇಮಿ ಹಾಗೂ ಸೈಕ್ಲಿಸ್ಟ್‌ ಮಹಾಲಿಂಗಯ್ಯ ಕುಶಾಲನಗರದಲ್ಲಿ ಹೇಳಿದರು. ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಉಳಿವು ಮತ್ತು ಪರಿಸರ ಬಗ್ಗೆ ಜಾಗೃತಿ ಮೂಡಿಸಲು ಸೈಕಲ್​ ಮೂಲಕ ರಾಜ್ಯ ಪರ್ಯಟನೆ ಕೈಗೊಂಡಿರುವ ಮಹಾಲಿಂಗಯ್ಯ ಮಾತನಾಡಿ, ನಾವು ಗಿಡ- ಮರಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯೊಂದಿಗೆ ದೇಶವನ್ನು ಹಸಿರಿನಿಂದ ಸಮೃದ್ಧಗೊಳಿಸಿ ಕಂಗೊಳಿಸುವುದು ಸೇರಿದಂತೆ ರಾಜ್ಯದಲ್ಲಿರುವ ಕನ್ನಡ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಮನವಿ ಮಾಡಿದರು. ಬೈಸಿಕಲ್ ಜಾಥಾದ ಮೂಲಕ ರಾಜ್ಯಾದ್ಯಂತ ಸಂಚರಿಸುತ್ತಿರುವ ಮಹಾಲಿಂಗಯ್ಯ ಅವರು ಬುಧವಾರ ಬೆಳಿಗ್ಗೆ ಕೊಡಗು ಸಂಚಾರ ಪೂರೈಸಿ ಮೈಸೂರು ಜಿಲ್ಲೆಗೆ ತೆರಳುವ ಸಂದರ್ಭದಲ್ಲಿ ಕುಶಾಲನಗರದಲ್ಲಿ ಪ್ರವಾಸಿ ಮಂದಿರದ ಬಳಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ನಮ್ಮ ಸುತ್ತಲಿನ ಪರಿಸರ ಸಂರಕ್ಷಣೆ ಜತೆಗೆ ಪ್ರತಿ ಗ್ರಾಮ ಮತ್ತು ಊರುಗಳಲ್ಲಿಯೂ ಕೆರೆಗಳನ್ನು ಉಳಿಸಿ ಅಲ್ಲಿ ಹಸಿರು ಪರಿಸರ ನಿರ್ಮಿಸಿ ಪಕ್ಷಿ – ಸಂಕುಲಗಳ ಸಂರಕ್ಷಣೆಗೆ ಮನವಿ ಮಾಡಲಾಗುತ್ತಿದೆ. ಜಾಥಾದ ಸಂದರ್ಭದಲ್ಲಿ ಪ್ರತಿ ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಲಾಗುತ್ತಿದೆ ಎಂದರು. ಬಡ ಮಕ್ಕಳು ಹೆಚ್ಚಾಗಿ ಕಲಿಯುವ ಸರ್ಕಾರಿ ಶಾಲೆಗಳನ್ನು ಉಳಿಸಿ ಅವುಗಳ ಅಭಿವೃದ್ಧಿ ಮತ್ತು ಬಲವರ್ಧನೆಗೆ ಒತ್ತಾಯಿಸಿ ಮನವಿ ಮಾಡಲಾಗುತ್ತಿದೆ ಎಂದು ಮಹಾಲಿಂಗ ತಿಳಿಸಿದರು. ಪರಿಸರ ಪ್ರೇಮಿ ಮಹಾಲಿಂಗಯ್ಯ ಅವರ ಬೈಸಿಕಲ್ ಜಾಥಾದ ಪರಿಸರ ಕಾಳಜಿ ಕುರಿತು ಪ್ರಶಂಸೆ ವ್ಯಕ್ತಪಡಿಸಿ ಅವರನ್ನು ಸನ್ಮಾನಿಸಿ ಬೀಳ್ಕೊಟ್ಟ ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕ ಎಂ.ಎನ್.ಚಂದ್ರಮೋಹನ್ ಮಾತನಾಡಿ, ಸೈಕ್ಲಿಸ್ಟ್ ಮಹಾಲಿಂಗಯ್ಯ ಅವರ ಪರಿಸರ ಕಾಳಜಿ ಮೆಚ್ಚುವಂತದ್ದು, ಇಂತಹ ಪರಿಸರ ಜಾಥಾಕ್ಕೆ ಎಲ್ಲರೂ ಸಹಕರಿಸಬೇಕು ಎಂದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪರಿಸರ ಪ್ರೇಮಿ ಮಹಾಲಿಂಗಯ್ಯ ಅವರು ಪರಿಸರ ಸಂರಕ್ಷಣೆ ಹಾಗೂ ಸರ್ಕಾರಿ ಶಾಲೆಗಳ ಉಳಿವಿಗಾಗಿ
ಹಮ್ಮಿಕೊಂಡಿರುವ ಬೈಸಿಕಲ್ ಜಾಥಾವು ಶ್ಲಾಘನೀಯವಾದುದು ಎಂದರು. ಜನರಲ್ಲಿ ಪರಿಸರ ಜಾಗೃತಿ ಮೂಡಿಸುವ ಉತ್ತಮ ಉದ್ದೇಶದೊಂದಿಗೆ ಕೈಗೊಂಡಿರುವ ಬೈಸಿಕಲ್ ಜಾಥಾ ಯಶಸ್ವಿಯಾಗಲಿ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ನಾಗೇಶ್ ಹೇಳಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮಹೇಂದ್ರ, ಬೈಸಿಕಲ್ ಜಾಥಾಕ್ಕೆ ಶುಭ ಕೋರಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಅಳಿಲು ಸೇವಾ ತಂಡದ ಕಾರ್ಯಕರ್ತ ಕೆ.ಜಿ.ಮನು, ಕುಮಾರ್ ಇತರರು ಇದ್ದರು.
ಅಪರ ಜಿಲ್ಲಾಧಿಕಾರಿಗೆ ಮನವಿ ಮಡಿಕೇರಿಯಲ್ಲಿ ಮಂಗಳವಾರ ಅಪರ ಜಿಲ್ಲಾಧಿಕಾರಿ ಐಶ್ವರ್ಯ ಅವರನ್ನು ಭೇಟಿ ಮಾಡಿ ಕೆರೆಗಳ ಸಂರಕ್ಷಣೆ ಹಾಗೂ ಸರ್ಕಾರಿ ಶಾಲೆಗಳ ಉಳಿವಿಗೆ ಮಹಾಲಿಂಗಯ್ಯ ಮನವಿ ಮಾಡಿದ್ದಾರೆ. ತುಮಕೂರಿನಿಂದ ಮೂರು ತಿಂಗಳ ಹಿಂದೆ ಆರಂಭವಾಗಿರುವ ಇವರ ಸೈಕಲ್ ಯಾತ್ರೆಯು ಇಂದಿಗೆ 100 ದಿನಗಳಾಗಿದ್ದು, ಈಗಾಗಲೇ 5200 ಕಿಲೋ ಮೀಟರ್ ಪ್ರವಾಸ ಪೂರ್ಣಗೊಂಡಿದೆ. ತುಮಕೂರಿನಿಂದ ಸೈಕಲ್ ಜಾಥಾ ಆರಂಭಿಸಿ ಈಗಾಗಲೇ ರಾಜ್ಯದ 23 ಜಿಲ್ಲೆಗಳಲ್ಲಿ ಬೈಸಿಕಲ್ ಜಾಥಾ ನಡೆಸಲಾಗಿದೆ. ಇದೀಗ ಕೊಡಗಿನಿಂದ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಜಾಥಾ ಕೈಗೊಂಡು ಆ.15 ರಂದು ಬೆಂಗಳೂರಿನಲ್ಲಿ ವಿಧಾನ ಸೌಧ ಬಳಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶವಿದೆ. ಆ.15 ರ ನಂತರ ಉಳಿದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜಾಥಾ ಕೈಗೊಳ್ಳಲಾಗುವುದು ಎಂದು ಮಹಾಲಿಂಗಯ್ಯ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.