
ಮಡಿಕೇರಿ ಆ.6 NEWS DESK : ಮಕ್ಕಂದರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಮಕ್ಕಂದೂರು ಗ್ರಾಮದ ಅಂಗವಾಡಿ ಕೇಂದ್ರದಲ್ಲಿ ಎದೆ ಹಾಲಿನ ಮಹತ್ವ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಎದೆ ಹಾಲಿನ ಮಹತ್ವದ ಬಗ್ಗೆ ವಿವರಿಸಿದರು. ಪೌಷ್ಟಿಕ ಆಹಾರ ಸೇವನೆ, ವಾಯು ವಿಹಾರ, ಹೆಚ್ಚು ನೀರು ಸೇವನೆ, ಸ್ಥಳೀಯವಾಗಿ ಸಿಗುವ ಹಣ್ಣುಗಳು ಮತ್ತು ಸೊಪ್ಪುಗಳನ್ನು ಪ್ರತಿನಿತ್ಯ ಬಳಸಲು ಪ್ರೋತ್ಸಾಹಿಸಿದರು. ಭಾಗ್ಯಲಕ್ಷ್ಮಿ ಮಾತೃವಂದನ, ಎಫ್‍ಆರ್‍ಎಸ್, ಪೋಷಣ್ ಟ್ರ್ಯಾಕರ್, ಅಂಗನವಾಡಿಯಲ್ಲಿ ಸಿಗುವಂತಹ ಆಹಾರಗಳ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ಹಿರಿಯ ಪ್ರಾಥಮಿಕ ಸುರಕ್ಷಾ ಅಧಿಕಾರಿ ದೇವಕಿ ಅವರು ಪ್ರಾತ್ಯಕ್ಷಿಕೆ ಮೂಲಕ ಎದೆ ಹಾಲು ನೀಡುವ ಬಗ್ಗೆ ಮಾಹಿತಿ ನೀಡಿದರು. ಚುಚ್ಚುಮದ್ದು ಕಾರ್ಯಕ್ರಮಗಳ ಬಗ್ಗೆ ಇಲಾಖೆಯ ಸವಲತ್ತುಗಳ ಬಗ್ಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಸರೋಜಾ ಡಿಎಸ್, ಅಂಗನವಾಡಿ ಸಹಾಯಕಿ ಚಂದ್ರವತಿ, ಆಶಾ ಕಾರ್ಯಕರ್ತೆ ದಿವ್ಯ ಹಾಜರಿದ್ದರು.








