Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮದೆ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ : ಸಾರ್ವಜನಿಕರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ : ವಿ.ರಾಜೇಶ್ ಕುಮಾರ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮದೆ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ : ಸಾರ್ವಜನಿಕರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ : ವಿ.ರಾಜೇಶ್ ಕುಮಾರ್ ಸಲಹೆ*

ಆಗಷ್ಟ್ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.7 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಕೆನರಾ ಬ್ಯಾಂಕ್, ಮೈನ್ ಬ್ರಾಂಚ್, ಮಡಿಕೇರಿ ಶಾಖೆ, ಮದೆ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಕೇಂದ್ರ ಸರಕಾರದ ಆದೇಶದಂತೆ ಆಯಾಯ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತೀ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಮದೆ ಗ್ರಾಮದಲ್ಲಿ ನಡೆಯಿತು.  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ನ ಎಜಿಎಂ ರಾಜೇಶ್ ಕುಮಾರ್ ವಿ. ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20 ರೂ. ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 2 ಲಕ್ಷಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ. ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣ ಹೊಂದಿದರೆ ಅಂತವರ ನಾಮಿನಿಗೂ ಕೂಡ 2 ಲಕ್ಷಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 4 ಲಕ್ಷ ರೂ. ಗಳವರೆಗಿನ ವಿಮಾ ಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು. ಅಲ್ಲದೆ 60ವಯಸ್ಸು ಆದ ನಂತರದಲ್ಲಿ ಪಿಂಚಣಿ ರೂಪದಲ್ಲಿ 1000 ರೂ. ಗಳಿಂದ 5000 ರೂ.ಗಳವರೆಗಿನ ಪಿಂಚಣಿ ಹಣ ಸಿಗಬೇಕಾದರೆ ಈವಾಗಲೇ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು. ನಂತರದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್‍ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಎನ್ನುವ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲ್ಲೂಕುಗಳಲ್ಲಿ ಮಾಡುತ್ತಿದ್ದು, ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್‍ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ಅವಾರ್ಡ್ ಸಂಸ್ಥೆಯ ಸಮಾಲೋಚಕರಾದ ಪ್ರಿಯಾ ಕೆ.ಎಲ್.ತಿಳಿಸಿದರು. ಮದೆ ಗ್ರಾಮ ಪಂಚಾಯತಿ ಸದಸ್ಯರು ಮಾತನಾಡಿ ಈ ಒಂದು ಕಾರ್ಯಕ್ರಮವು ಅತ್ಯಂತ ಉಪಯುಕ್ತವಾದ ಕಾರ್ಯಕ್ರಮವಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ವೇದಿಕೆಯಲ್ಲಿ ಮದೆ ಗ್ರಾಮ ಪಂಚಾಯತಿ ಉಪಾಧ್ಯಕ್ಷರು, ಕೆನರಾ ಬ್ಯಾಂಕ್ ನ ಎಜಿಎಂ ರಾಜೇಶ್ ಕುಮಾರ್ ವಿ, ಕೆನರಾ ಬ್ಯಾಂಕ್‍ನ ವ್ಯವಸ್ಥಾಪಕರಾದ ಅನೀಶ್ ಮೋಹನ್ ಅವರು ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ : ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸ್ಪಷ್ಟನೆ*

ಮಾರ್ಚ್ 21, 2026

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 20, 2026: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಗಧಗಿಸುತ್ತಿದ್ದ ಬಿಸಿಲಿನ ಬೇಗೆಯ ನಡುವೆ ಈಗ…

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.