
ಮಡಿಕೇರಿ ಆ.7 NEWS DESK : ಕೊಡಗು ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ಹೆಡ್ ಕಾನ್ಸಟೇಬಲ್ ಮೂಲತ: ಚಾಮರಾಜನಗರ ಜಿಲ್ಲೆಯ ಎಂ.ಎನ್.ವಿಜಯ (47) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಪೊಲೀಸ್ ಹೆಡ್ ಕಾನ್ಸಟೇಬಲ್ ಎಂ.ಎನ್.ವಿಜಯ ಅವರು ಕೊಡಗು ಜಿಲ್ಲಾ ಸಶಸ್ತ್ರ ಪಡೆಯಲ್ಲಿ 1997ರ ಆಗಸ್ಟ್ 1 ರಂದು ಕರ್ತವ್ಯಕ್ಕೆ ನೇಮಕಗೊಂಡು ಸುಮಾರು 28 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಮಡಿಕೇರಿಯ ಪೊಲೀಸ್ ಮೈತ್ರಿ ಭವನದ ಉಸ್ತುವಾರಿಯಾಗಿದ್ದ ಇವರು ಪೊಲೀಸ್ ಬ್ಯಾಂಡ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ.6 ರಂದು ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತ್ತಾದರು ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಎಂ.ಎನ್.ವಿಜಯ ಅವರ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಗುರುವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ವಿಜಯ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ನಂತರ ಅವರ ಪಾರ್ಥೀವ ಶರೀರವನ್ನು ಹುಟ್ಟೂರಾದ ಚಾಮರಾಜನಗರಕ್ಕೆ ಕೊಂಡೊಯ್ಯಲಾಯಿತು.









