Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
  • *ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.12 ರಿಂದ 14ರ ವರೆಗೆ ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆ : ಕೊಡಗಿನಲ್ಲೂ ಆಶಾ ಕಾರ್ಯಕರ್ತೆಯರ ಬೆಂಬಲ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.12 ರಿಂದ 14ರ ವರೆಗೆ ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆ : ಕೊಡಗಿನಲ್ಲೂ ಆಶಾ ಕಾರ್ಯಕರ್ತೆಯರ ಬೆಂಬಲ*

ಆಗಷ್ಟ್ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.7 NEWS DESK : ಮಾಸಿಕ ಕನಿಷ್ಟ 10 ಸಾವಿರ ರೂ. ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಆ.12 ರಿಂದ 14ರ ವರೆಗೆ ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆ ನಡೆಯಲಿದೆ. ಇದರ ಭಾಗವಾಗಿ ಮಡಿಕೇರಿಯಲ್ಲಿ ಕೂಡ ಮೂರು ದಿನಗಳ ಕಾಲ ಸಮಾವೇಶ ಮತ್ತು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯ ಕಾರಣದಿಂದ ಮಡಿಕೇರಿಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲು ಸಾಧ್ಯವಾಗದಿರುವುದರಿಂದ ಆ.12, 13 ಹಾಗೂ 14 ರಂದು ಕೆಲಸ ಸ್ಥಗಿತಗೊಳಿಸಲಾಗುವುದು. ಆ.12 ರಂದು ನಗರದ ಬಾಲಭವನದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದರು. ಕಳೆದ ಜನವರಿಯಲ್ಲಿ ನಡೆದ ಹೋರಾಟದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ 10 ಸಾವಿರ ರೂ. ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಏಳು ತಿಂಗಳು ಕಳೆದರೂ ಯಾವುದೇ ಆದೇಶವಾಗಿಲ್ಲ ಎಂದು ದೂರಿದರು. ಆಶಾ ಕಾರ್ಯಕರ್ತೆಯರಿಗೆ ಅವರ ಕಾರ್ಯಕ್ಷಮತೆಯ ಆಧಾರದ ಮೇಲೆ ಕೇಂದ್ರ ಸರ್ಕಾರದಿಂದ ನೀಡುವ ಪ್ರೋತ್ಸಾಹವನ್ನು ನೇರ ಖಾತೆಗೆ ಜಮಾ ಮಾಡಬೇಕೆಂದು ಆಶಾ ಸಾಫ್ಟ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ ಕಾರ್ಯಕ್ಷಮತೆಯ ಆಧಾರದ ಮೇಲೆ ನೀಡುವ ಪ್ರೋತ್ಸಾಹಧನ ಸರಿಯಾದ ಸಮಯಕ್ಕೆ ಕೈಸೇರದಂತಾಗಿದ್ದು, ಇದರಿಂದ ಕೆಲಸ ಕಳೆದುಕೊಳ್ಳುವ ಆತಂಕ ಎದುರಾಗಿದೆ ಎಂದು ಹೇಳಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಹಗಲಿರುಳು ಸೇವೆಗೈದ ಪರಿಶ್ರಮದಿಂದ ತಾಯಿ ಮರಣ, ಶಿಶು ಮರಣ ಸೇರಿದಂತೆ ಸಾಂಕ್ರಾಮಿಕ ಸಾವಿನ ಪ್ರಮಾಣ ತಗ್ಗಿರುವ ಬಗ್ಗೆ ಸರ್ಕಾರವೇ ದೃಢಪಡಿಸಿದೆ. ಅಷ್ಟೇ ಅಲ್ಲದೇ ಕೋವಿಡ್ ಕಾಲದಲ್ಲಿ ಆಶಾಗಳು ತಮ್ಮ ಜೀವನದ ಹಂಗು ತೊರೆದು ಕೋಟ್ಯಾಂತರ ಜನರ ಪ್ರಾಣ ಉಳಿಸಿದ್ದಾರೆ. ಇಂತಹ ನಿಸ್ವಾರ್ಥ ಸೇವೆಗೈಯ್ಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ. ಗೌರವಧನ ನೀಡಲು ಮೀನಾಮೇಷ ಎಣಿಸುತ್ತಿರುವುದು ಖಂಡನೀಯ ಎಂದರು. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು, ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು, ಅವೈಜ್ಞಾನಿಕವಾಗಿರುವ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು, ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು, ನಗರ ಆಶಾಗಳಿಗೆ ರೂ.2 ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಎಂ.ಉಮಾದೇವಿ ಆಗ್ರಹಿಸಿದರು. ಸಂಘದ ಜಿಲ್ಲಾಧ್ಯಕ್ಷೆ ತೆಕ್ಕಡೆ ಪೂರ್ಣಿಮಾ ಮಾತನಾಡಿ, ಬಹುತೇಕ ಆಶಾ ಕಾರ್ಯಕರ್ತೆಯರು ಬಡವರಾಗಿದ್ದು, ಲೈನ್‌ಮನೆಗಳಲ್ಲಿ ವಾಸ ಮಾಡಿಕೊಂಡು ಈ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹಗಲು-ರಾತ್ರಿ ಎನ್ನದೆ ಕೆಲಸ ಮಾಡುತ್ತಿದ್ದಾರೆ, ಆದರೆ ದುಡಿಮೆಗೆ ತಕ್ಕ ಫಲ ಸಿಗುತ್ತಿಲ್ಲ. ಹಲವು ಬಾರಿ ಪ್ರತಿಭಟನೆ ಮಾಡಿದ್ದರೂ ಸರ್ಕಾರ ಯಾವ ಸ್ಪಂದನೆಯನ್ನೂ ನೀಡುತ್ತಿಲ್ಲ. ಮುಖ್ಯಮಂತ್ರಿಗಳೇ ಖುದ್ದಾಗಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಹೇಳಿದ್ದರೂ ಇಲ್ಲಿಯವರೆಗೆ ಬೇಡಿಕೆ ಈಡೇರಿಲ್ಲ. ಇನ್ನಾದರೂ ಸರ್ಕಾರ ಮಾತುಕೊಟ್ಟಂತೆ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಎಂ.ನಾಗಮಣಿ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷೆ ಐಮುಡಿಯಂಡ ಶಾಂತಿ ಗಣೇಶ್, ಸದಸ್ಯರಾದ ಬಿ.ವಿ.ವನಿತಾ ಹಾಗೂ ಎನ್.ಶ್ರೀಮತಿ ಉಪಸ್ಥಿತರಿದ್ದರು.

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು

ವಿಜಯವಾಡ, ಮಾರ್ಚ್ 20, 2026: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಪೋಲವರಂ ಬಳಿ ಗೋದಾವರಿ ನದಿಯಲ್ಲಿ ಈಜಲು ಹೋದ ಖಾಸಗಿ ವಿಶ್ವವಿದ್ಯಾಲಯದ…

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.