Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾಡಾನೆ ದಾಳಿ : ಬೃಹತ್ ಪ್ರತಿಭಟನೆಗೆ ಚೆಂಬು ಸಾರ್ವಜನಿಕ ಹಿತರಕ್ಷಣಾ ಸಮಿತಿ ನಿರ್ಧಾರ*
ಇತ್ತೀಚಿನ ಸುದ್ದಿಗಳು

*ಕಾಡಾನೆ ದಾಳಿ : ಬೃಹತ್ ಪ್ರತಿಭಟನೆಗೆ ಚೆಂಬು ಸಾರ್ವಜನಿಕ ಹಿತರಕ್ಷಣಾ ಸಮಿತಿ ನಿರ್ಧಾರ*

August 7, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.7 : ಚೆಂಬು ಗ್ರಾಮ ವ್ಯಾಪ್ತಿಯ ದಬ್ಬಡ್ಕ-ಚೆಂಬು ಮತ್ತು ಊರುಬೈಲು ಚೆಂಬು ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು ತಕ್ಷಣ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಸಂಪಾಜೆ ವಲಯ ಅರಣ್ಯಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಚೆಂಬು ಸಾರ್ವಜನಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಸಚಿನ್ ಕೆದಂಬಾಡಿ ಹಾಗೂ ಕಾರ್ಯದರ್ಶಿ ಪುಂಡರೀಕ ಅರಂಬೂರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿದಿನ ಕೃಷಿಕರ ತೋಟಗಳಿಗೆ ಕಾಡಾನೆಗಳು ನುಗ್ಗಿ ಅಡಿಕೆ, ತೆಂಗು, ಬಾಳೆ ಮತ್ತಿತರ ಕೃಷಿ ಫಸಲನ್ನು ತಿಂದು ಅಪಾರ ನಷ್ಟ ಉಂಟು ಮಾಡುತ್ತಿದ್ದು, ಕೃಷಿಕರ ಬದುಕೇ ದುಸ್ತರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಒಂಟಿಸಲಗವೊAದು ಗ್ರಾಮದಲ್ಲೇ ಬೀಡುಬಿಟ್ಟಿದ್ದು, ಜನ ಆತಂಕದಲ್ಲೇ ದಿನದೂಡುವಂತಾಗಿದೆ. ವಿದ್ಯಾರ್ಥಿಗಳು ಶಾಲೆಗೆ ತೆರಳಲು ಭಯ ಪಡುವಂತ್ತಾಗಿದೆ. ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ. ಈಗಾಗಲೇ ಗ್ರಾಮಸ್ಥರು ಸಮಿತಿಯೊಂದನ್ನು ರಚಿಸಿಕೊಂಡು ಕಾಡಾನೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಮತ್ತು ಗ್ರಾಮದಲ್ಲಿರುವ ಕಾಡಾನೆಯನ್ನು ಕಾಡಿಗೆ ಅಟ್ಟಬೇಕೆಂದು ಒತ್ತಾಯಿಸಿ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಆದರೆ ಮನವಿಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಒಂಟಿ ಸಲಗವೊಂದು ಈ ಪ್ರದೇಶಕ್ಕೆ ಲಗ್ಗೆ ಇಟ್ಟಿದ್ದು, ಶಿವಪ್ಪ ಎಂಬುವವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಶಾಸಕರ ಆಪ್ತರಾದ ಸಂಕೇತ್ ಪೂವಯ್ಯ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಕಾಡಾನೆ ದಾಳಿಯ ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸದೆ ಕೇವಲ ಮೃತಪಟ್ಟ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತಿರುವುದು ಖಂಡನೀಯ. ಕಾಡಾನೆ ದಾಳಿಯನ್ನು ತಡೆಗಟ್ಟಲು ಪರಿಹಾರ ಹುಡುಕುವ ಬದಲು ಸತ್ತಮೇಲೆ ಹೋಗಿ ಸಾಂತ್ವನ ಹೇಳುವುದು ಕಣ್ಣೊರೆಸುವ ತಂತ್ರವಾಗಿದೆ ಎಂದು ಸಚಿನ್ ಕೆದಂಬಾಡಿ ಹಾಗೂ ಪುಂಡರೀಕ ಅರಂಬೂರು ಟೀಕಿಸಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಂದಿನ 48 ಗಂಟೆಗಳಲ್ಲಿ ಕಾಡಾನೆ ಹಿಡಿಯಲು ಅನುಮತಿ ಕೊಡಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಈ ಹಿನ್ನೆಲೆ ಗ್ರಾಮಸ್ಥರು ಆ.10ರ ವರೆಗೆ ಕಾಲಾವಕಾಶ ನೀಡಿದ್ದು, ಆ.11 ರಂದು ಸಂಪಾಜೆ ವಲಯ ಅರಣ್ಯಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಆ.12 ರಿಂದ 14ರ ವರೆಗೆ ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆ : ಕೊಡಗಿನಲ್ಲೂ ಆಶಾ ಕಾರ್ಯಕರ್ತೆಯರ ಬೆಂಬಲ*
Next Article *ಗಾಜಿನ ಸೇತುವೆಗೆ ಮಾಜಿ ಸಚಿವ ಅಪ್ಪಚ್ಚು ರಂಜನ್ ತೀವ್ರ ವಿರೋಧ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.