
ಮಡಿಕೇರಿ ಆ.8 NEWS DESK : ಪ್ರಧಾನಮಂತ್ರಿಯವರ ಉದ್ಯೋಗ ಸೃಜನೆ ಯೋಜನೆಯಡಿಯಲ್ಲಿ ನಿಗಧಿತ ಗುರಿ ನೀಡಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ, ಪ್ರಧಾನಮಂತ್ರಿಯವರ ವಿಶ್ವಕರ್ಮ ಯೋಜನೆ ಜಿಲ್ಲಾ ಮಟ್ಟದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಗಾರಿಕಾ ಇಲಾಖೆ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದು ಉದ್ದಿಮೆದಾರರನ್ನು ಪ್ರೋತ್ಸಾಹಿಸುವುದರ ಜತೆಗೆ ಉದ್ದಿಮೆ ಪ್ರಾರಂಭಿಸಲು ಹೆಚ್ಚಿನ ಅನುಕೂಲ ಮಾಡಬೇಕು ಎಂದರು. ವಿಶ್ವಕರ್ಮ ಯೋಜನೆಯ ನಾಮ ನಿರ್ದೇಶಿತ ಸದಸ್ಯರಾದ ನಾಗೇಶ್ ಕುಂದಲ್ವಾಡಿ ಹಾಗೂ ರಾಬಿನ್ ದೇವಯ್ಯ ಅವರು ಸಭೆಯಲ್ಲಿ ಮಾತನಾಡಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಫಲಾನುಭವಿಗಳ ಯಶೋಗಾಥೆ ಒದಗಿಸುವಂತೆ ತಿಳಿಸಿದರು. ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಇರುವ ಕುಂದು ಕೊರತೆ, ಚಟುವಟಿಕೆ ಹಾಗೂ ಬದಲಾವಣೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಜಿಲ್ಲಾ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಶಿವಲಿಂಗಯ್ಯ ಹಾಗೂ ಉಪ ನಿರ್ದೇಶಕರಾದ ಉಮೇಶ್ವಿ ಹಾಜರಿದ್ದು ಇಲಾಖೆಯ ಕಾರ್ಯಕ್ರಮದಲ್ಲಿ ಆಗಿರುವ ಪ್ರಗತಿಯನ್ನು ಸಭೆಗೆ ವಿವರಿಸಿದರು. ಕೈಗಾರಿಕೆಗಳ ಬೆಳವಣಿಗೆ ಪೂರಕವಾದ ಸಂಸ್ಥೆ, ಇಲಾಖೆಗಳಾದ ಕಾಸಿಯಾ, ಕೆಐಎಡಿಬಿ, ಕೆಎಸ್‍ಎಸ್‍ಐಡಿಸಿ ಅಧಿಕಾರಿಗಳು, ಪ್ರತಿನಿಧಿಗಳು ಭಾಗವಹಿಸಿದರು.








