
ವಿರಾಜಪೇಟೆ NEWS DESK ಆ.8 : ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜ್ ನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ಅವರು ನೇಮಕಗೊಂಡಿದ್ದಾರೆ. ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯ ಆದೇಶಿಸಿದೆ. ತೃಪ್ತಿ ಬೋಪಣ್ಣ ಅವರು 22 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದು, ಕಳೆದ 16 ವರ್ಷಗಳಿಂದ ಸೆಂಟ್ ಆನ್ಸ್ ಪದವಿ ಕಾಲೇಜ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಾಣಿಜ್ಯ ಶಾಸ್ತ್ರ ವಿಷಯದ ಪ್ರಾಧ್ಯಾಪಕಿಯೂ ಆಗಿರುವ ಅವರು ಈ ಹಿಂದೆ ಕಾಲೇಜ್ ನ ಐಕ್ಯೂಎ ಸಿ ಸಂಚಾಲಕಿಯಾಗಿಯೂ ಕಾರ್ಯನಿರ್ವಹಿಸಿರುತ್ತಾರೆ. ಸಿಂಡಿಕೇಟ್ ಸದಸ್ಯರಾಗಿ ನಾಮ ನಿರ್ದೇಶನಗೊಂಡ ತೃಪ್ತಿ ಬೋಪಣ್ಣ ಅವರನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಅವರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.








