

ಮಡಿಕೇರಿ ಆ.11 NEWS DESK : ಕರಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ ನಡೆಯಿತು. ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಾಲಚಂದ್ರ ನಾಯರ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರಾದ ಪ್ರಸನ್ನ ಕುಮಾರಿ, ಮಹಾಲಕ್ಷ್ಮಿ, ಸಹ ಶಿಕ್ಷಕಿಯರಾದ ಅಹಲ್ಯ, ಲತಾ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಯಮುನಾ ಮತ್ತು ಸದಸ್ಯರು ಪೋಷಕರು ಹಾಗೂ ಪಂಚಾಯತಿ ಸದಸ್ಯರಾದ ಜಯಶ್ರೀ ಕೆ.ಸಿ.ಕೃಷ್ಣ ವಿದ್ಯಾರ್ಥಿಗಳು ಪಾಲ್ಗೊಂಡರು.









