Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»Uncategorized»ಅಬ್ಬಾ ! ಕೊಡಗಿನಲ್ಲಿ 12 ಕೆ.ಜಿ ಗೂ ಅಧಿಕ ಗಾಂಜಾ ವಶ : ಆರೋಪಿಗಳ ಬಂಧನ
Uncategorized

ಅಬ್ಬಾ ! ಕೊಡಗಿನಲ್ಲಿ 12 ಕೆ.ಜಿ ಗೂ ಅಧಿಕ ಗಾಂಜಾ ವಶ : ಆರೋಪಿಗಳ ಬಂಧನ

ಆಗಷ್ಟ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಆ.11 : ಮೂವರು ಆರೋಪಿಗಳ ಸಹಿತ 12 ಕೆ.ಜಿ ಗೂ ಅಧಿಕ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರು ಪಟ್ಟಣದ ವಿಜಯನಗರ ನಿವಾಸಿಗಳಾದ ಅನೀಸ್ ಅಹಮ್ಮದ್(45), ಪಿ.ಚೇತನ್(40) ಹಾಗೂ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಂಸಂತೆ ದೊಡ್ಡಬೈರನಕುಟ್ಟೆ ಗ್ರಾಮದ ನಿವಾಸಿ ಜಿ.ಅಕ್ರಂ(48) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಾದ ಅನೀಸ್ ಅಹಮ್ಮದ್ ಹಾಗೂ ಪಿ.ಚೇತನ್ ಅವರ ಬಳಿಯಿಂದ 7 ಕೆ.ಜಿ 872 ಗ್ರಾಂ ಗಾಂಜಾ, ಒಂದು ಕಾರು, 1 ಮೊಬೈಲ್ ಮತ್ತು ಗಾಂಜಾ ಸಾಗಿಸಲು ಬಳಸಿದ್ದ ಪ್ಲಾಸ್ಟಿಕ್ ಚೀಲವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಣಸೂರು ಕಡೆಯಿಂದ ವಿರಾಜಪೇಟೆ ಮಾರ್ಗವಾಗಿ ಕೇರಳಕ್ಕೆ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಿಸುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಪೊಲೀಸರು ಪತ್ತೆ ಹಚ್ಚಿದರು. ಕೇರಳದಲ್ಲಿ ಮಾರಾಟ ಮಾಡಲು ಗಾಂಜಾ ಸಾಗಾಟವಾಗುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ವಿರಾಜಪೇಟೆ ಪೊಲೀಸರು ಆರ್ಜಿ ಪೆರುಂಬಾಡಿ ಬಳಿ ಬಂದ ಕಾರನ್ನು ಪರಿಶೀಲನೆಗೆ ಒಳಪಡಿಸಿದರು. ಈ ಸಂದರ್ಭ ಕಾರಿನಲ್ಲಿ 4 ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ ಇರುವುದು ಪತ್ತೆಯಾಗಿದೆ. ಸ್ಥಳದಲ್ಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಎನ್‌ಡಿಪಿಎಸ್ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ವಿರಾಜಪೇಟೆ ಡಿವೈಎಸ್‌ಪಿ ಮಹೇಶ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಠಾಣಾಧಿಕಾರಿ ಪ್ರಮೋದ್, ಎಎಸ್‌ಐ ಮಂಜುನಾಥ್ ಸಿಬ್ಬಂದಿಗಳಾದ ಧರ್ಮ, ಗಿರೀಶ್, ಜೋಸ್ ನಿಶಾಂತ್, ಕುಮಾರ್, ಹೇಮಂತ್ ಕುಮಾರ್, ಶಿವ ಕುಮಾರ್ ಹಾಗೂ ಶಿವ ಶರಣಪ್ಪ ಕಾರ್ಯಾಚರಣೆ ನಡೆಸಿದರು.
*ಮತ್ತೊಂದು ಪ್ರಕರಣ* ಮತ್ತೊಂದು ಪ್ರಕರಣದಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟ್ಟಂಗಾಲ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಂಸಂತೆ ದೊಡ್ಡಬೈರನಕುಟ್ಟೆ ಗ್ರಾಮದ ನಿವಾಸಿ ಜಿ.ಅಕ್ರಂ(48) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಿಂದ 4 ಕೆ.ಜಿ 710 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಹೀಗೆ 12 ಕೆ.ಜಿ ಗೂ ಅಧಿಕ ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ

ಸೆಪ್ಟೆಂಬರ್ 15, 2026

“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ

ಸೆಪ್ಟೆಂಬರ್ 5, 2026

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸೆಪ್ಟೆಂಬರ್ 1, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 15: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕೊಡಗು ಜಿಲ್ಲೆಯಲ್ಲಿ ಪ್ರತಿಭಟನೆ…

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026

ಎಸ್.ಐ.ಆರ್. ಪ್ರಕ್ರಿಯೆ ರದ್ದತಿಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 15, 2026

ಸುಂಟಿಕೊಪ್ಪ ಮಲಯಾಳಿ ಸಮಾಜದ 19ನೇ ವರ್ಷದ ಓಣಂ ಆಚರಣೆ; ಸಮಾಜದ ಒಗ್ಗಟ್ಟು ಮತ್ತು ಸಂಘಟನೆ ಎಲ್ಲರಿಗೂ ಮಾದರಿ: ಶಾಸಕ ಡಾ. ಮಂತರ್ ಗೌಡ

ಅಕ್ಟೋಬರ್ 15, 2026

ಸುಂಟಿಕೊಪ್ಪದಲ್ಲಿ ಮಲಯಾಳಿ ಸಮಾಜದಿಂದ 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 15, 2026

ಹೊಸತೋಟದಲ್ಲಿ ರಕ್ತದಾನ ಶಿಬಿರ: 30 ಮಂದಿ ರಕ್ತದಾನ

ಅಕ್ಟೋಬರ್ 15, 2026

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.