
ವಿರಾಜಪೇಟೆ ಆ.12 NEWS DESK : ವಿರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಗೋಣಿಕೊಪ್ಪ ವಲಯದ ಮಾಯಮುಡಿ ಕಾರ್ಯಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿ ಸಚಿನ್ ಮಾತನಾಡಿ, ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು, ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ, ನೀರು ಸಿಗುತ್ತದೆ. ಹಣ್ಣಿನ ಗಿಡಗಳನ್ನು ಬೆಳೆಸಬೇಕು ನಮ್ಮ ಮನೆಯ ಸುತ್ತಮುತ್ತಲು ಗಿಡಮರಗಳನ್ನು ಬೆಳೆಸಬೇಕು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಉಮೇಶ್, ಕೃಷಿ ಮೇಲ್ವಿಚಾರಕ ವಸಂತ್, ಶಾಲಾ ಮುಖ್ಯ ಶಿಕ್ಷಕಿ ಜಯಮ್ಮ, ಮೀನಾಕ್ಷಿ ವೇದಿಕೆಯಲ್ಲಿದ್ದರು. ಶಾಲೆಯ ಸಹ ಶಿಕ್ಷಕಿ ಸಹನ ಪರಿಸರದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಪದಾಧಿಕಾರಿಗಳಾದ ಬಿಂದು, ಮೇರಿ, ಶಶಿ, ಸೇವಾ ಪ್ರತಿನಿಧಿ ಪುಷ್ಪಾ, ಶಾಲಾ ಮಕ್ಕಳು ಇದ್ದರು. ಶಾಲಾ ಆವರಣದಲ್ಲಿ ವಿವಿಧ ರೀತಿಯ ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು. ಶಾಲಾ ಶಿಕ್ಷಕರಾದ ರಾಗಿಣಿ ಡಿ.ಯು. ಸತ್ಯ ಎಂ.ಟಿ, ಲೀಲಾ ಎಂ.ಕೆ, ಸುಮಾ, ಪುಷ್ಪಾ, ಲಾವಣ್ಯ ಇದ್ದರು.








