
ನಾಪೋಕ್ಲು ಆ.12 NEWS DESK : ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ನರ್ಸಿಂಗ್ ಸೂಪರಿಟೆಂಡೆಂಟ್ ಗ್ರೇಡ್ 2. ಬಾಳೆಯಡ ರತಿ ಪೆಮ್ಮಯ್ಯ ಹಾಗೂ ಗೋಣಿಕೊಪ್ಪದ ಕಾವೇರಿ ಕಾಲೇಜಿನ ಉಪನ್ಯಾಸಕಿ ಡಾ.ಚೀಯಕಪೂವಂಡ ಸವಿತ ಅಪ್ಪಚ್ಚು ಅವರನ್ನು ಸನ್ಮಾನಿಸಲಾಯಿತು. ನಾಪೋಕ್ಲುಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಸಮಾಜದ ಪ್ರಮುಖರು ಹಾಗೂ ಪದಾಧಿಕಾರಿಗಳು ಸಾಧಕರನ್ನು ಸನ್ಮಾನಿಸಿ, ಗೌರವಿಸಿದರು. ಕೊಡವ ಸಮಾಜ ಮೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಷಾ ಮೇದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ, ಕಾಫಿ ಬೆಳೆಗಾರರಾದ ಬಿದ್ದಾಟಂಡ ಸುಮನ್ ಪ್ರದೀಪ್, ಬ್ಯಾಂಕ್ ಆಫ್ ಮಹಾರಾಷ್ಟ್ರದ ನಿವೃತ್ತ ವ್ಯವಸ್ಥಾಪಕಿ ಕೋಡಿಮಣಿಯಂಡ ರಚನ ಕುಟ್ಟಪ್ಪ ಇನ್ನಿತರ ಉಪಸ್ಥಿತರಿದ್ದರು.
ವರದಿ : ದುಗ್ಗಳ ಸದಾನಂದ.








