Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಮನವಿ*

ಆಗಷ್ಟ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.12 NEWS DESK : 2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ವರ್ತಕರಲ್ಲಿ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್‍ನ ನಗರಾಧ್ಯಕ್ಷ ಸಂತೋಷ್ ಅಣ್ವೇಕರ್ ಹಾಗೂ ಜಿಲ್ಲಾ ನಿರ್ದೇಶಕ ಧನಂಜಯ ಎಂ. ಅವರು ಸ್ವಚ್ಛ ಪರಿಸರಕ್ಕಾಗಿ 2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆ ಸಗಟು ವ್ಯಾಪಾರಸ್ಥರು ಹಾಗೂ ಚಿಲ್ಲರೆ ಮಾರಾಟ ಅಂಗಡಿ ಮಾಲೀಕರಲ್ಲಿ ಕಳೆದ ಜನವರಿಯಿಂದ ಮನವಿ ಮಾಡಿಕೊಳ್ಳಲಾಗಿದೆ. ಇದೇ ಆ.1 ರಿಂದ ಈ ನೀರಿನ ಬಾಟಲಿಗಳ ಮಾರಾಟವನ್ನು ನಗರಸಭೆ ಕಡ್ಡಾಯವಾಗಿ ನಿಷೇಧಿಸಿದೆ ಎಂದು ತಿಳಿಸಿದ್ದಾರೆ. 2024-25ರ ಪ್ರವಾಸೋದ್ಯಮ ಇಲಾಖೆಯ ಅಂಕಿ ಅಂಶದ ಪ್ರಕಾರ 45 ಲಕ್ಷಕ್ಕೂ ಅಧಿಕ ಪ್ರವಾಸಿಗರು ಮಡಿಕೇರಿ ನಗರಕ್ಕೆ ಭೇಟಿ ನೀಡಿದ್ದಾರೆ. ಕನಿಷ್ಠ 25 ರಿಂದ 30 ಲಕ್ಷ ನೀರಿನ ಬಾಟಲ್ ಮಡಿಕೇರಿ ನಗರ ಒಂದರಲ್ಲೇ ಕಂಡು ಬಂದಿದೆ. ಈ ಬಾಟಲ್ ಗಳು ತೋಡು, ಚರಂಡಿಗಳಲ್ಲಿ, ಕಾಡಿನ ಮಧ್ಯ ಭಾಗದಲ್ಲಿ ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಮರುಬಳಕೆಯಾಗದ ಸ್ಥಿತಿಯಲ್ಲಿ ರಾಶಿ ಬಿದ್ದಿರುವುದನ್ನು ಗಮನಿಸಿದ್ದೇವೆ. ಚರಂಡಿ ಮತ್ತು ತೋಡುಗಳಲ್ಲಿ ನೀರು ಸರಾಗವಾಗಿ ಹರಿಯಲು ಪ್ಲಾಸ್ಟಿಕ್ ಬಾಟಲಿಗಳು ಅಡಚಣೆಯನ್ನುಂಟು ಮಾಡುತ್ತಿವೆ. ಎಲ್ಲೆಂದರಲ್ಲಿ ಬಿದ್ದಿರುವ ಖಾಲಿ ಬಾಟಲಿಗಳಿಂದ ಸೊಳ್ಳೆ, ಕ್ರಿಮಿ, ಕೀಟಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವುದಕ್ಕೂ ಕಾರಣವಾಗುತ್ತಿದೆ. ಪರಿಸರದ ಮೇಲೂ ನೀರಿನ ಪ್ಲಾಸ್ಟಿಕ್ ಬಾಟಲಿಗಳು ದುಷ್ಪರಿಣಾಮ ಉಂಟು ಮಾಡುತ್ತಿರುವುದರಿಂದ ಜಿಲ್ಲಾಡಳಿತ ಮತ್ತು ನಗರಸಭೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ವರ್ತಕರು 2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದೆ ಮಡಿಕೇರಿ ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕೆಂದು ಸಂತೋಷ್ ಅಣ್ವೇಕರ್ ಹಾಗೂ ಧನಂಜಯ ಎಂ. ಮನವಿ ಮಾಡಿದ್ದಾರೆ.
ನಗರದಲ್ಲಿ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜಿಲ್ಲಾಡಳಿತ, ನಗರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳ ನೆರವಿನೊಂದಿಗೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಲು ಚೇಂಬರ್ ಆಫ್ ಕಾಮರ್ಸ್ ಮುಂದಾಗಿದೆ. ಈಗಾಗಲೇ ನಗರಸಭಾ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಯುಕ್ತರ ಸಮ್ಮುಖದಲ್ಲಿ ನಗರದ ವಿವಿಧ ಭಾಗಗಳಲ್ಲಿ ಸುಮಾರು 10 ಸ್ಥಳಗಳನ್ನು ಗುರುತಿಸಿ 500 ಲೀಟರ್ ಸಾಮಥ್ರ್ಯದ ನೀರಿನ ಟ್ಯಾಂಕ್ ಅಳವಡಿಸಲು ಚಿಂತನೆ ನಡೆದಿದೆ. ಟ್ಯಾಂಕ್ ನ ಕೆಳಭಾಗದಲ್ಲಿ ತಣ್ಣೀರು ಮತ್ತು ಬಿಸಿ ನೀರು ಒದಗಿಸಲು ವಾಟರ್ ಪ್ಯೂರಿಫೈಯರ್ ವ್ಯವಸ್ಥೆಯನ್ನು ಮಾಡಲಾಗುವುದು. ಆದ್ದರಿಂದ ವರ್ತಕರು ಪ್ಲಾಸ್ಟಿಕ್ ಮುಕ್ತ ಮಡಿಕೇರಿ ನಗರದ ಪರಿಕಲ್ಪನೆಗೆ ಬೆಂಬಲ ನೀಡಬೇಕೆಂದು ಕೋರಿದ್ದಾರೆ.
ನಗರದಲ್ಲಿ ಪ್ಲಾಸ್ಟಿಕ್ ಚೀಲಗಳ ಬಳಕೆಗೆ ನಿಷೇಧವಿದ್ದರೂ ಇತ್ತೀಚಿನ ದಿನಗಳಲ್ಲಿ ಇದರ ಬಳಕೆ ಹೆಚ್ಚಾಗುತ್ತಿದೆ. ನಗರದ ಹಿತದೃಷ್ಟಿಯಿಂದ ವರ್ತಕರು ಹಾಗೂ ಗ್ರಾಹಕರು ಸ್ವಯಂ ಪ್ರೇರಿತರಾಗಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ತಿಳಿಸಿದ್ದಾರೆ. ವ್ಯಾಪಾರೋದ್ಯಮ ಪರವಾನಗಿಯನ್ನು ನವೀಕರಿಸದೆ ಇರುವ ನಗರದ ವರ್ತಕರು ತಕ್ಷಣ ನವೀಕರಣಗೊಳಿಸುವಂತೆ ಸಂತೋಷ್ ಅಣ್ವೇಕರ್ ಹಾಗೂ ಧನಂಜಯ ಎಂ. ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.