Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೋಮವಾರಪೇಟೆ ತಾಲ್ಲೂಕು ಬಂದ್‌ಗೆ ವ್ಯಾಪಕ ಬೆಂಬಲ : ರಸ್ತೆ ತಡೆ ಪ್ರತಿಭಟನೆ, ಮಾತಿನ ಚಕಮಕಿ : ಜಿಲ್ಲಾಧಿಕಾರಿಗಳ ಆಗಮನ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಸೋಮವಾರಪೇಟೆ ತಾಲ್ಲೂಕು ಬಂದ್‌ಗೆ ವ್ಯಾಪಕ ಬೆಂಬಲ : ರಸ್ತೆ ತಡೆ ಪ್ರತಿಭಟನೆ, ಮಾತಿನ ಚಕಮಕಿ : ಜಿಲ್ಲಾಧಿಕಾರಿಗಳ ಆಗಮನ

ಆಗಷ್ಟ್ 12, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ NEWS DESK ಆ.12 : ಸಿ ಆ್ಯಂಡ್ ಡಿ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು, ಆಸ್ತಿ ದುರಸ್ತಿ ವಿಳಂಬವನ್ನು ಖಂಡಿಸಿ ತಾಲ್ಲೂಕು ರೈತ ಹೋರಾಟ ಸಮಿತಿ ಹಾಗು ಕೊಡಗು ರೈತ ಸಂಘ ಮಂಗಳವಾರ ಕರೆ ನೀಡಿದ್ದ ಸೋಮವಾರಪೇಟೆ ತಾಲ್ಲೂಕು ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಗ್ರಾಮೀಣ ಭಾಗದ ರೈತರು ಬೆಳಿಗ್ಗೆಯೇ ಸೋಮವಾರಪೇಟೆ ಪಟ್ಟಣಕ್ಕೆ ಆಗಮಿಸಿ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್, ಸಂಚಾಲಕ ಬಿ.ಜೆ.ದೀಪಕ್, ಪ್ರಮುಖರಾದ ಎಸ್.ಜಿ.ಮೇದಪ್ಪ, ಕೆ.ಎಂ.ಲೋಕೇಶ್ ಕುಮಾರ್, ಬಿ.ಪಿ.ಅನಿಲ್, ಹರಗ ಮಿಥುನ್, ಕೂತಿ ದಿವಾಕರ್, ಕೆ.ಎಂ.ದಿನೇಶ್ ಅವರುಗಳ ನೇತೃತ್ವದಲ್ಲಿ ವಿವೇಕಾನಂದ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿದರು. ಬೀಟಿಕಟ್ಟೆ ಜಂಕ್ಷನ್‌ನಲ್ಲಿ ರೈತ ಹೋರಾಟ ಸಮಿತಿ ಹಾಗು ರೈತ ಸಂಘದ ಎಸ್.ಬಿ.ಭರತ್‌ಕುಮಾರ್, ಜಿ.ಎಂ.ಹೂವಯ್ಯ, ಬಿ.ಪಿ.ಮೊಗಪ್ಪ, ಗೋಪಾಲ್‌ಕೃಷ್ಣ ಅವರ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿದರು ಗೌಡಳ್ಳಿ, ಚೌಡ್ಲು, ತೋಳೂರುಶೆಟ್ಟಳ್ಳಿ, ಕಲ್ಕಂದೂರು-ಕೂಡುರಸ್ತೆ, ಮಾದಾಪುರ, ಕುಂಬೂರು, ಅಬ್ಬೂರುಕಟ್ಟೆ ಜಂಕ್ಷನ್‌ನಲ್ಲಿ ರಸ್ತೆ ತಡೆ ನಡೆಸಿದರು. ಸೋಮವಾರಪೇಟೆ ಪಟ್ಟಣದಲ್ಲಿ ವರ್ತಕರು ಅಂಗಡಿ ಮುಂಗಟ್ಟು ಮುಚ್ಚಿದ್ದರು. ಖಾಸಗಿ ಬಸ್‌ಗಳು, ಆಟೋ, ಬಾಡಿಗೆ ವಾಹನಗಳು ರಸ್ತೆಗಿಳಿಯದೆ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಗ್ರಾಮೀಣ ಭಾಗದಲ್ಲೂ ಅಂಗಡಿಗಳನ್ನು ಮುಚ್ಚಿ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಕೆಲವು ಕಡೆ ಮರಗಳನ್ನು ಕಡಿದು ರಸ್ತೆ ಹಾಕಲಾಗಿತ್ತು. ಕೆಲ ಕಡೆ ವಾಹನ ಚಕ್ರದ ಗಾಳಿ ಬಿಟ್ಟ ಘಟನೆ ನಡೆಯಿತು. ವಾಹನಗಳಿಗೆ ಸೈಕಲ್ ಪಂಪ್‌ಗಳಿAದ ಗಾಳಿ ತುಂಬಿಸುಕೊಂಡು ಚಾಲಕರು ತೆರಳಿದರು. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಕೆಲ ವಿದ್ಯಾರ್ಥಿಗಳು ಕಾಲೇಜಿಗೆ ಬಂದು ಪರದಾಡಿದರು. ಸರ್ಕಾರಿ ಕಚೇರಿಗಳು ಸಿಬ್ಬಂದಿಗಳಿಲ್ಲದೆ ಬಿಕೋ ಎನ್ನುತ್ತಿತ್ತು. ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರವೂ ಇರಲಿಲ್ಲ.
ಪಟ್ಟಣದ ವಿವೇಕಾನಂದ ಸರ್ಕಲ್ ಬಳಿ ಪ್ರತಿಭಟನಕಾರರು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಕೃಷಿ ಭೂಮಿಯನ್ನು ಸಿ ಆ್ಯಂಡ್ ಡಿ ಎಂದು ಸರ್ವೆ ಮಾಡುತ್ತಿದ್ದಾರೆ. ರೈತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಕೃಷ್ಣಮೂರ್ತಿ ಹಾಗೂ ಆರ್‌ಎಫ್‌ಒ ಶೈಲೇಂದ್ರ ಕುಮಾರ್ ಅವರೊಂದಿಗೆ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗು ಅರಣ್ಯ ಸಂರಕ್ಷಣಾಧಿಕಾರಿ ಆಗಮಿಸಬೇಕು. ರೈತ ಹೋರಾಟದ ಮನವಿ ಪತ್ರವನ್ನು ಪಡೆದುಕೊಳ್ಳಬೇಕು ಎಂದು ಪಟ್ಟು ಹಿಡಿದರು. ಜಿಲ್ಲಾಧಿಕಾರಿ ವೆಂಕಟರಾಜ, ಎಎಸ್‌ಪಿ ಬಿ.ಪಿ.ದಿನೇಶ್ ಕುಮಾರ್, ಎಸಿಎಫ್ ಗೋಪಾಲ್ ಮಧ್ಯಾಹ್ನ ಸ್ಥಳಕ್ಕೆ ಆಗಮಿಸಿ ಪ್ರತಿಭಟನಕಾರರ ಬೇಡಿಕೆ ಆಲಿಸಿದರು. ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್ ಮಾತನಾಡಿ, ತಾಲ್ಲೂಕಿನಲ್ಲಿ ರೈತರು ಹಲವು ದಶಕಗಳಿಂದ ಕೃಷಿ ಮಾಡಿಕೊಂಡಿರುವ ಸಿ ಆ್ಯಂಡ್ ಡಿ ಜಾಗವನ್ನು ಕಳೆದು ಕೊಳ್ಳುವ ಭೀತಿಯಲ್ಲಿದ್ದಾರೆ. ಕಂದಾಯ ಇಲಾಖೆಯ ಅಧಿಕಾರಿಗಳು ಕೃಷಿ ಭೂಮಿಯನ್ನು ಸಿ ಆ್ಯಂಡ್ ಭೂಮಿ (ಕೃಷಿಗೆ ಯೋಗ್ಯವಲ್ಲದ ಭೂಮಿ) ಎಂದು ವರದಿ ನೀಡಿದ್ದಾರೆ. ಇಂತಹ ಅವೈಜ್ಞಾನಿಕ ವರದಿಯಿಂದ ರೈತರಿಗೆ ಆಸ್ತಿ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕೃಷಿ ಭೂಮಿಗೆ ಹಕ್ಕುಪತ್ರಗಳು ಸಿಗುತ್ತಿಲ್ಲ. ಅರಣ್ಯ ಇಲಾಖೆಯವರು ಕೃಷಿ ಭೂಮಿಯನ್ನೇ ಸಿ ಆ್ಯಂಡ್ ಡಿ ಎಂದು ಸೆಕ್ಷನ್ -4 ಸರ್ವೆಗೆ ಮುಂದಾಗಿದ್ದಾರೆ. ಕೃಷಿ ಭೂಮಿಯನ್ನು ಅರಣ್ಯ ಇಲಾಖೆಗೆ ಸೇರಿಸಿದರೆ, ರೈತರ ಗುಳೇ ಹೋಗಬೇಕಾಗುತ್ತದೆ ಎಂದು ಹೇಳಿದರು. ಮುಂಗಾರು ಅಧಿವೇಶನದಲ್ಲಿ ಸಿ ಆ್ಯಂಡ್ ಡಿ ಭೂಮಿ ವಿಷಯದಲ್ಲಿ ಚರ್ಚೆ ಆಗಬೇಕು. ರೈತ ಮುಖಂಡರು ಸೇರಿದಂತೆ ಉನ್ನತ ಮಟ್ಟದ ಸಮಿತಿ ರಚನೆ ಆಗಬೇಕು. ಅರಣ್ಯ ಹಾಗು ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ಆಗಬೇಕು. ಆ.18 ರ ಒಳಗೆ ಅಧಿವೇಶನದಲ್ಲಿ ಚರ್ಚೆಯಾಗಿ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತರೊಂದಿಗೆ ಆಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ಜಿಲ್ಲಾಧಿಕಾರಿ ವೆಂಕಟರಾಜು ಮಾತನಾಡಿ, ಸಿ ಆ್ಯಂಡ್ ಡಿ ಭೂಮಿ ವಿಷಯದಲ್ಲಿ ಎಲ್ಲಾ ಮಾಹಿತಿ ಸಂಗ್ರಹಿಸಲಾಗಿದೆ. ಸಿ ಆ್ಯಂಡ್ ಡಿ ಭೂಮಿಯಲ್ಲಿ ಕೃಷಿ ಮಾಡಿರುವುದು, ವಾಸದ ಮನೆಗಳಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ರೈತಾಪಿ ವರ್ಗಕ್ಕೆ ತೊಂದರೆಯಾಗಬಾರದೆಂಬುದು ಜಿಲ್ಲಾಡಳಿತದ ಆಶಯವೂ ಆಗಿದೆ. ಜಂಟಿ ಸರ್ವೆಯ ಸಂದರ್ಭ ಗ್ರಾಮಸ್ಥರಿಗೆ ಮಾಹಿತಿ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. *ಅಭಿಪ್ರಾಯ* >> ಕೊಡಗು ಜಿಲ್ಲೆಯಲ್ಲಿ ಅರಣ್ಯ ಭೂಮಿ ಎಷ್ಟಿದೆ, ಅದರಲ್ಲಿ ಸಿ ಆ್ಯಂಡ್ ಡಿ, ಮತ್ತು ಪೈಸಾರಿ ಭೂಮಿ ಎಷ್ಟಿದೆ? ಎಲ್ಲಿದೆ? ಎಂಬುದನ್ನು ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ ರೈತರಿಗೆ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ 35 ಸಾವಿರ ಸಿ ಆ್ಯಂಡ್ ಡಿ ಭೂಮಿ ಇದೆ ಕಂದಾಯ ಇಲಾಖೆಯ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಸರ್ಕಾರ ಜಂಟಿ ಸರ್ವೆಗೆ ಅದೇಶ ನೀಡುವ ತನಕ ಅರಣ್ಯ ಇಲಾಖೆಯವರು ಸರ್ವೆಗೆ ಬರಬಾರದು. (ಬಿ.ಜೆ.ದೀಪಕ್, ಸಂಚಾಲಕ, ರೈತ ಹೋರಾಟ ಸಮಿತಿ) ರೈತರು ಕೃಷಿ ಮಾಡಿದ ಸಿ ಆ್ಯಂಡ್ ಡಿ ಭೂಮಿಗಾದರೂ ಹಕ್ಕುಪತ್ರ ಕೊಡಬೇಕು. ಸಿ ಆ್ಯಂಡ್ ಡಿ ಭೂಮಿಯನ್ನು ಆರಣ್ಯೀಕರಣ ಮಾಡುವುದನ್ನು ಸರ್ಕಾರ ತಡೆಯಬೇಕು. ನಮ್ಮ ಸರ್ಕಾರ ವಿದ್ದಾಗ ಸಿ ಆ್ಯಂಡ್ ಡಿ ಭೂಮಿ ಜಾಗಕ್ಕೂ ಹಕ್ಕುಪತ್ರ ನೀಡಲಾಗಿದೆ. ಒಟ್ಟು 9 ಸಾವಿರ ಹಕ್ಕುಪತ್ರ ನೀಡಿದ್ದೇವೆ. (ಅಪ್ಪಚ್ಚು ರಂಜನ್, ಮಾಜಿ ಶಾಸಕ)

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.