
ಮಡಿಕೇರಿ ಆ.13 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದಲ್ಲಿ ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿಗೆ ಒಳಪಡುವ ಮಂಡೆಪಂಡ, ಚೆಂದಂಡ ಕುಟುಂಬಗಳಿಗೆ ತೆರಳುವ ಹಾಗೂ ಸಾರ್ವಜನಿಕರ ಬಳಕೆಯ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಕುಟುಂಬಸ್ಥರ ಹಾಗೂ ಸಾರ್ವಜನಿಕರ ಉಪಯೋಗಕ್ಕೆ ಸಿದ್ಧಗೊಂಡಿದೆ. ಈ ಹಿಂದೆ ರಸ್ತೆಯ ಅಭಿವೃದ್ಧಿ ಕುರಿತು ಶಾಸಕರಿಗೆಮನವಿ ಬಂದಾಗ, ಅವರು ರೂ. 5 ಲಕ್ಷಗಳ ಅನುದಾನವನ್ನು ಒದಗಿಸಿದ್ದರು. ಇದೀಗ ಈ ರಸ್ತೆಯ ಪೂರ್ಣಗೊಂಡಿದ್ದು, ಲೋಕಾರ್ಪಣೆಗೆ ಸಿದ್ಧಗೊಂಡಿದ್ದು, ರಸ್ತೆ ಕಾಮಗಾರಿಗೆ ಸಹಕರಿಸಿದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಹಾಗೂ ಎಲ್ಲಾ ಪ್ರಮುಖ ನಾಯಕರಿಗೆ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಧನ್ಯವಾದಗಳು ಅರ್ಪಿಸಿದ್ದಾರೆ.








