
ಮಡಿಕೇರಿ ಆ.14 NEWS DESK : ಕೊಡಗು ಜಿಲ್ಲೆ ಕ್ರೀಡಾ ಚಟುವಟಿಕೆಗಳಿಗೆ ಹೆಸರು ವಾಸಿಯಾಗಿದೆ. ಈ ಹಿನ್ನೆಲೆ ಭಾರತೀಯ ಕ್ರೀಡಾ ಪ್ರಾಧಿಕಾರದ ಸಹಕಾರೊಂದಿಗೆ ಕೊಡಗು ವಿವಿಯಲ್ಲಿ ‘ಸೆಂಟರ್ ಆಫ್ ಸ್ಪೋಟ್ಸ್ ಎಕ್ಸಲೆನ್ಸ್’ ಕೇಂದ್ರವನ್ನು ತೆರೆಯುವ ಚಿಂತನೆ ಇರುವುದಾಗಿ ವಿವಿ ಕುಲಪತಿಗಳಾದ ಪ್ರೊ.ಅಶೋಕ ಸಂಗಪ್ಪ ಆಲೂರ ತಿಳಿಸಿದರು. ಇತ್ತೀಚೆಗೆ ನವದೆಹಲಿಯಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಈ ನಿಟ್ಟಿನಲ್ಲಿ ಮಾತುಕತೆಗಳನ್ನು ನಡೆಸಲಾಗಿದೆಯೆಂದು ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.








