

ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಅರ್ಥಪೂರ್ಣ ನಡೆಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಇತರರು ಇದ್ದರು. ಮಳೆಯ ಸಿಂಚನದ ನಡುವೆಯೂ ವಿವಿಧ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಕುರಿತು ನೃತ್ಯ ಪ್ರದರ್ಶನ ನೀಡಿದ್ದು ವಿಶೇಷವಾಗಿತ್ತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಜವಹರಲಾಲ್ ನೆಹರು, ಡಾ.ಬಿ.ಆರ್.ಅಂಬೇಡ್ಕರ್ ಹೀಗೆ ಸ್ವಾತಂತ್ರ್ಯ ಕ್ಕಾಗಿ ಹೊರಾಟ ಮಾಡಿದ ಮಹನೀಯರು ಹಾಗೂ ರಾಷ್ಟ್ರದ ಸೇನಾ ಪ್ರಥಮ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸೇರಿದಂತೆ ಹಲರನ್ನು ಸ್ಮರಿಸಿದ್ದು ಗಮನ ಸೆಳೆಯಿತು.











