


ಮಡಿಕೇರಿ ಆ.15 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಎ.ಜೆ.ಲೋಕೇಶ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸಂಸ್ಥೆಯ ಬೋಧಕ ಆಸ್ಪತ್ರೆಯ ನೂತನ ಕಟ್ಟಡದ ಎರಡನೇ ಹಂತದ ಕಾಮಗಾರಿಗೆ ಶಿಲಾನ್ಯಾಸ ನಡೆಯುತ್ತಿರುವುದು ಸಂತಸದ ವಿಚಾರ ಎಂದರು. ಸಮಾರಂಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಆರ್ಥಿಕ ಸಲಹೆಗಾರರಾದ ಸೈಯದ್ ಸಮೀಉಲ್ಲಾ, ಡಾ.ಕಾರ್ಯಪ್ಪ ಕೆ.ಬಿ. ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ವೈದ್ಯರುಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಎಂಬಿಬಿಎಸ್, ಸ್ನಾತಕೋತ್ತರ, ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಂದ ಪಥಸಂಚಲನ ಹಾಗೂ ದೇಶಭಕ್ತಿ ಗಾಯನ ನಡೆಯಿತು.









