
ಮಡಿಕೇರಿ ಆ.15 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜಾ ಉತ್ತಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ವಿಧಾನಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಮುಖಂಡರಾದ ಚಂದ್ರಕಲಾ, ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಉಪಾಧ್ಯಕ್ಷರಾದ ಸುಜು ತಿಮ್ಮಯ್ಯ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.









