Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
  • *ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ಹೆಚ್ಚುವರಿ ಕಾಮಗಾರಿಗೆ ಶಿಲಾನ್ಯಾಸ : ರಾಜ್ಯ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ : ಎನ್.ಎಸ್ ಭೋಸರಾಜು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ಹೆಚ್ಚುವರಿ ಕಾಮಗಾರಿಗೆ ಶಿಲಾನ್ಯಾಸ : ರಾಜ್ಯ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ : ಎನ್.ಎಸ್ ಭೋಸರಾಜು*

ಆಗಷ್ಟ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.15 NEWS DESK : ವೈದ್ಯಕೀಯ ಶಿಕ್ಷಣ ಇಲಾಖೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಹಯೋಗದೊಂದಿಗೆ 450 ಹಾಸಿಗೆ ಸಾಮಥ್ರ್ಯದ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ) ಕಾಮಗಾರಿಯ ಶಿಲಾನ್ಯಾಸವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು ಅವರು ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ನೆರವೇರಿಸಿದರು. ಬಳಿಕ‌ ಮಾತನಾಡಿದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದು ತಿಳಿಸಿದರು. ಸರ್ಕಾರಿ ಆಸ್ಪತ್ರೆಗೆ ಬಡವರು ಬರುತ್ತಾರೆ. ಆದ್ದರಿಂದ ಬಡ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವುದು ವೈದ್ಯರ ಜವಾಬ್ದಾರಿ ಎಂದರು. ಕೊಡಗು ವೈದ್ಯಕೀಯ ವಿಜ್ಞಾನ ‌ಸಂಸ್ಥೆಯನ್ನು ಮೇಲ್ದರ್ಜೆಗೆರಿಸುವಲ್ಲಿ ಶಾಸಕದ್ವಯರು ಶ್ರಮಿಸಿದ್ದಾರೆ. ಆ ದಿಸೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎಲ್ಲಾ ವಿಭಾಗಗಳಲ್ಲಿ ಆರೋಗ್ಯ ಸೇವೆಗಳು ತಲುಪಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನುಡಿದರು. ಜನಸಾಮಾನ್ಯರಿಗೆ ಆರೋಗ್ಯ ಸೇವೆಗಳು ಸಕಾಲದಲ್ಲಿ ತಲುಪಿದಾಗ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು ಎಂದು ಎನ್.ಎಸ್.ಭೋಸರಾಜು ಅವರು ವಿವರಿಸಿದರು. ವೈದ್ಯಕೀಯ ವಿಜ್ಞಾನ ಸಚಿವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಪ್ರಯತ್ನಿಸಿದ್ದಾರೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ವಿಭಾಗಕ್ಕೆ 1250 ಕೋಟಿ ರೂ ನೀಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಆಗಬೇಕು ಎಂದು ಹಲವು ವರ್ಷಗಳಿಂದ ಸಾರ್ವಜನಿಕರಿಂದ ಕೇಳಿ ಬರುತ್ತಿತ್ತು, ಅದು ಈಗ ಈಡೇರಿದಂತಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಎಲ್ಲರ ಪ್ರಯತ್ನದಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿದ್ದು, ಜನರಿಗೆ ಆರೋಗ್ಯ ಸೌಲಭ್ಯಗಳು ತಲುಪಬೇಕು ಎಂದು ಹೇಳಿದರು.
‘ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಮೂಲಭೂತ ಸೌಲಭ್ಯ ಕಲ್ಪಿಸುವುದು ನಮ್ಮ (ಜನ ಪ್ರತಿನಿಧಿಗಳ) ಜವಾಬ್ದಾರಿಯಾಗಿದೆ. ಅದೇ ರೀತಿ ಆಸ್ಪತ್ರೆಗೆ ಬರುವವರಿಗೆ ಸಕಾಲದಲ್ಲಿ ಆರೋಗ್ಯ ಸೇವೆ ಒದಗಿಸುವುದು ನಿಮ್ಮ (ವೈದ್ಯರ) ಕರ್ತವ್ಯ, ಅದನ್ನು ಅರಿತು ಕಾರ್ಯ ನಿರ್ವಹಿಸಬೇಕು ಎಂದು ಎಚ್ಚರಿಸಿದರು.’ ವೈದ್ಯರು ರೋಗಿಯ ಆರೋಗ್ಯ ಸರಿಯಾಗಿ ಉಪಚರಿಸಬೇಕು. ಇದರಿಂದ ರೋಗಿಯ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಾಣಬಹುದಾಗಿದೆ ಎಂದು ಡಾ.ಮಂತರ್ ಗೌಡ ಅವರು ಅಭಿಪ್ರಾಯ ಪಟ್ಟರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂ ಆರ್ ಐ ಸ್ಕ್ಯಾನಿಂಗ್ ವಿಭಾಗ ಸೇರಿದಂತೆ ಹಲವು ವಿಭಾಗಕ್ಕೆ ಮೂಲ‌ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಇಲ್ಲಿನ ಆಸ್ಪತ್ರೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ಡಾ.ಮಂತರ್ ಗೌಡ ಅವರು ನುಡಿದರು. ಕಾರ್ಡಿಯಾಲಜಿ ವಿಭಾಗದಲ್ಲಿಯೂ‌ ಸಹ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದರು. ಖಾಯಂ ವೈದ್ಯರ ನೇಮಕಕ್ಕೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು ಎಂದು ಡಾ.ಮಂತರ್ ಗೌಡ ಅವರು ಹೇಳಿದರು. ಮೇಲ್ದರ್ಜೆಗೆರುವ ಕಾಮಗಾರಿ 18 ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಗುಣಮಟ್ಟದ ಹಾಗೂ ಇಲ್ಲಿನ ವಾತಾವರಣಕ್ಕೆ ತಕ್ಕಂತೆ ಕಾಮಗಾರಿ ಕೈಗೊಳ್ಳುವಂತೆ ಸಲಹೆ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಭಿವೃದ್ಧಿಗೆ ಹೆಚ್ಚುವರಿಯಾಗಿ ಇನ್ನೂ 20 ಕೋಟಿ ರೂ ಒದಗಿಸಲು ಪ್ರಯತ್ನಿಸಲಾಗುವುದು. ಹಾಗೆಯೇ ಕ್ರಿಟಿಕಲ್ ಕೇರ್ ಸೆಂಟರ್ ಆರಂಭಕ್ಕೂ ಕ್ರಮವಹಿಸಲಾಗುದು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ವಿವರಿಸಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿ.ಪಂ.ಸಿಇಒ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಎ.ಜೆ.ಲೋಕೇಶ್, ಡಾ.ವಿಶಾಲ್ ಕುಮಾರ್, ಡಾ.ನಂಜುಂಡಯ್ಯ, ಡಾ.ಸತೀಶ್, ಡಾ.ಸೋಮಶೇಖರ್ ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು

ವಿಜಯವಾಡ, ಮಾರ್ಚ್ 20, 2026: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಪೋಲವರಂ ಬಳಿ ಗೋದಾವರಿ ನದಿಯಲ್ಲಿ ಈಜಲು ಹೋದ ಖಾಸಗಿ ವಿಶ್ವವಿದ್ಯಾಲಯದ…

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.