ಮಡಿಕೇರಿ NEWS DESK ಆ.15 : ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ನಡೆಯಿತು. ಮಡಿಕೇರಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿ ಆವರಣದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ನಾಪಂ ರವಿ ಕಾಳಪ್ಪ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ನಗರಸಭಾಧ್ಯಕ್ಷೆ ಪಿ.ಕಲಾವತಿ, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ನಿರ್ದೇಶಕರುಗಳು, ಸಿಬ್ಬಂದಿಗಳು ನಗರಸಭಾ ಸದಸ್ಯರು, ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕಿನ ಪದಾಧಿಕಾರಿಗಳು, ಬಿಜೆಪಿ ಜಿಲ್ಲಾ ಮತ್ತು ಮಂಡಲ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.










