Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜ್ಞಾನಗಂಗಾ ವಸತಿ ಶಾಲೆಯಲ್ಲಿ ಮಳೆಯ ನಡುವೆಯು ಸಂಭ್ರಮದಿಂದ ನಡೆದ 79ನೇ ಸ್ವಾತಂತ್ರ್ಯೋತ್ಸವ*
ಇತ್ತೀಚಿನ ಸುದ್ದಿಗಳು

*ಜ್ಞಾನಗಂಗಾ ವಸತಿ ಶಾಲೆಯಲ್ಲಿ ಮಳೆಯ ನಡುವೆಯು ಸಂಭ್ರಮದಿಂದ ನಡೆದ 79ನೇ ಸ್ವಾತಂತ್ರ್ಯೋತ್ಸವ*

August 16, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.16 NEWS DESK : ಕುಶಾಲನಗರದ ಜ್ಞಾನಗಂಗಾ ವಸತಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಮಳೆಯ ನಡುವೆಯು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಸೈನಿಕರು ಹಾಗೂ ವಾಣಿಜ್ಯ ತೆರಿಗೆ ಅಧಿಕಾರಿ ನವೀನ್ ರಾವ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಿಕೊಳ್ಳುತ್ತಾ ಅವರಿಗೆ ಗೌರವ ಸೂಚಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ನಾವೆಲ್ಲರೂ ಇಂದು ಸಂಭ್ರಮದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಈ ಸ್ವಾತಂತ್ರ್ಯ ಹಲವು ಮಹಾನ್ ನಾಯಕರ ಹೋರಾಟ ಮತ್ತು ತ್ಯಾಗ ಬಲಿದಾನಗಳಿಂದ ಬಂದಿದೆ. ಸ್ವಾತಂತ್ರ್ಯಕ್ಕಾಗಿ ಭಾರತೀಯರು ನಡೆಸಿದ ಹೋರಾಟ ಮತ್ತು ಅನುಭವಿಸಿದ ಸಂಕಷ್ಟಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ವಿವರಿಸಿದರು. ವಿದ್ಯಾರ್ಥಿಗಳು ನಕಾರಾತ್ಮಕ ಭಾವನೆಗಳನ್ನು ಕಿತ್ತೊಗೆದು ಸಕಾರಾತ್ಮಕ ಭಾವನೆಯನ್ನು ಬೆಳೆಸಿಕೊಂಡು ಉತ್ತಮ ಭವಿಷ್ಯದ ಗುರಿಯ ಕಡೆಗೆ ಸಾಗಬೇಕು. ಆ ಮೂಲಕ ಭಾರತದ ಅಮೂಲ್ಯ ರತ್ನಗಳಾಗಬೇಕೆಂದು ಕರೆ ನೀಡಿದರು. ಮಾಜಿ ಸೈನಿಕ ಸಿ.ಕೆ.ಪ್ರಭಾಕರ್ ಅವರು ಮಾತನಾಡಿ, ವಿದ್ಯಾರ್ಥಿಗಳು ನಿಷ್ಠೆ, ಪ್ರಾಮಾಣಿಕತೆ ಸಂಯಮವನ್ನು ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಎಂಬುವುದು ಒಂದು ದಿನದ ಸಂಭ್ರಮಾಚರಣೆಯಲ್ಲ. ಪ್ರತಿಯೊಬ್ಬರು ಪ್ರತಿಕ್ಷಣವು ದೇಶ ಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಹಿರಿಯರಾದ ನೀಲಕಂಠ ಅವರು ಮಾತನಾಡಿ, ಸರ್ವರ ಪ್ರಯತ್ನದಿಂದ ಸ್ವಾತಂತ್ರ್ಯ ಲಭಿಸಿದೆ, ಆದರೆ ಇಂದಿಗೂ ಶತ್ರುಗಳ ದಾಳಿಯನ್ನು ನೋಡುತ್ತಲೇ ಬಂದಿದ್ದೇವೆ. ಇಂತಹ ಸಂದರ್ಭದಲ್ಲಿ ಸೈನಿಕರು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ್ದಾರೆ. ಅವರ ಶ್ರಮವು ನಿಷ್ಪಲವಾಗಲು ಬಿಡದೆ ಎಲ್ಲರೂ ದೇಶದ ಉತ್ತಮ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದರು. ವಿದ್ಯಾರ್ಥಿಗಳ ಪಥಸಂಚಲನದ ಶಿಸ್ತನ್ನು ಶ್ಲಾಘಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಕೆ.ಸುಧೀರ್ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕು. ವ್ಯಾಪಾರಕ್ಕಾಗಿ ಭಾರತಕ್ಕೆ ಬಂದ ಬ್ರಿಟಿಷರು ಭಾರತದ ಸಂಪತ್ತನ್ನು ಕೊಳ್ಳೆ ಹೊಡೆದರು. ನಮ್ಮವರಲ್ಲದವರನ್ನು ನಾವು ನಮ್ಮ ಮನೆಯಲ್ಲಾಗಲಿ, ದೇಶದೊಳಗಾಗಲಿ ಬಿಟ್ಟುಕೊಳ್ಳಬಾರದು. ನಾವೆಲ್ಲರೂ ದೇಶಭಕ್ತರಾಗುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ, ಸದಸ್ಯರಾದ ಅನಂತ ಪದ್ಮನಾಭ, ಶೋಭಾ ಅನಂತ ಪದ್ಮನಾಭ, ಮನು, ಇತರ ಸದಸ್ಯರು, ಪ್ರಾಂಶುಪಾಲರಾದ ಎಸ್.ಎಂ.ಸುಲೋಚನ, ಉಪ ಪ್ರಾಂಶುಪಾಲರಾದ ಸಿ.ಕೆ.ನಾಗರಾಜ್, ಶಿಕ್ಷಕ, ಶಿಕ್ಷಕೇತರ ವರ್ಗ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. 2024-25ನೇ ಶೈಕ್ಷಣಿಕ ಸಾಲಿನ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಗಳಿಸಲು ಕಾರಣಕರ್ತರಾದ ಸಮಾಜ ವಿಜ್ಞಾನ ಶಿಕ್ಷಕಿ ಕೆ.ನಮಿತ ಹಾಗೂ ಕನ್ನಡ ಶಿಕ್ಷಕ ಹೆಚ್.ಭಾಸ್ಕರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
Previous Article*ಆ.23 ರಂದು ಭಾಗಮಂಡಲದಲ್ಲಿ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
Next Article ಕೊಡಗು ಜಿಲ್ಲಾ ಮರಾಠ ಮರಾಟಿ ಸಮಾಜ ಸೇವಾ ಸಂಘದ ಸಭೆ : ಸ್ವಾತಂತ್ರ್ಯೋತ್ಸವ ಆಚರಣೆ ಮತ್ತು ಶ್ರಮದಾನ

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.