Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಆಗಸ್ಟ್ 17 ರಂದು ಬೊಳ್ಳಜಿರ ಬಿ.ಅಯ್ಯಪ್ಪ ಅವರ ಜನ್ಮ ದಿನಾಚರಣೆ : ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಕೊಡುಗೆ ಅಪಾರ : 117 ಪುಸ್ತಕಗಳನ್ನು ಪ್ರಕಟಿಸಿದ ಹೆಗ್ಗಳಿಕೆ*
ಇತ್ತೀಚಿನ ಸುದ್ದಿಗಳು

*ಆಗಸ್ಟ್ 17 ರಂದು ಬೊಳ್ಳಜಿರ ಬಿ.ಅಯ್ಯಪ್ಪ ಅವರ ಜನ್ಮ ದಿನಾಚರಣೆ : ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಕೊಡುಗೆ ಅಪಾರ : 117 ಪುಸ್ತಕಗಳನ್ನು ಪ್ರಕಟಿಸಿದ ಹೆಗ್ಗಳಿಕೆ*

August 16, 20255 Mins Read
Share
Facebook Twitter LinkedIn Pinterest WhatsApp Email

NEWS DESK ಕೊಡವ ಮಕ್ಕಡ ಕೂಟ ಸಂಘಟನೆಯನ್ನು ಹುಟ್ಟು ಹಾಕಿ ಕೊಡಗಿನ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ಬೆಳವಣಿಗೆಗಾಗಿ ಶ್ರಮ ಪಡುತ್ತಿರುವ ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಆಗಸ್ಟ್ 17 ರಂದು ತಮ್ಮ 43ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕೊಡವ ಮಕ್ಕಡ ಕೂಟ ರಚನೆಯಾಗಿ 12 ವರ್ಷಗಳಾಗಿದ್ದು, ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಅಯ್ಯಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ದಾಖಲೆಯ 117 ಪುಸ್ತಕಗಳನ್ನು ಪ್ರಕಟಿಸಿದ ಹೆಗ್ಗಳಿಕೆ ಇವರದ್ದಾಗಿದ್ದು, ಯುವ ಬರಹಗಾರರಿಗೆ ಸ್ಫೂರ್ತಿಯಾಗಿದ್ದಾರೆ. ಸರಕಾರದ ಅನುದಾನವಿಲ್ಲದಿದ್ದರೂ ಸಾಹಿತ್ಯದ ಬೆಳವಣಿಗೆಗೆ ಒತ್ತು ನೀಡುತ್ತಿದ್ದಾರೆ. ದಾನಿಗಳ ನೆರವಿನಿಂದ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್ ಮತ್ತು ಹಿಂದಿ ಭಾಷೆಯ ಸುಮಾರು 117 ಪುಸ್ತಕಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ಸಮರ್ಪಿಸಿದ್ದಾರೆ. ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಬೊಳ್ಳಜಿರ ಬಿ.ಅಯ್ಯಪ್ಪ ಅವರು, 2024ನೇ ಇಸವಿಯ ಒಂದು ವರ್ಷದಲ್ಲಿ ಒಟ್ಟು 27 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ದಾಖಲೆ ಬರೆದಿದ್ದಾರೆ. ಬೊಳ್ಳಜಿರ ಅಯ್ಯಪ್ಪ ಅವರು ಪ್ರಸ್ತುತ ಕೊಡಗು ಪ್ರೆಸ್‌ಕ್ಲಬ್, ಫೀ.ಮಾ. ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿ ಸಂಘ, ಕೊಡಗು ಕನ್ನಡ ಭವನ ಮತ್ತು ಗ್ರಂಥಾಲಯದ ಅಧ್ಯಕ್ಷರಾಗಿ, ಕೊಡಗು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಗೌರವಾಧ್ಯಕ್ಷರಾಗಿ, 2013ನೇ ಇಸವಿಯಿಂದ ಕೊಡವ ಮಕ್ಕಡ ಕೂಟ ಸಂಘಟನೆಯ ಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಮಡಿಕೇರಿಯ ಶ್ರೀ ಕೋದಂಡ ರಾಮೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಸಹ ಕಾರ್ಯದರ್ಶಿಯಾಗಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಮಾಜಿ ಉಪಾಧ್ಯಕ್ಷರಾಗಿ, ಮಂಗಳೂರು ವಿಶ್ವ ವಿದ್ಯಾನಿಲಯದ ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ಸದಸ್ಯರಾಗಿ, ಕೊಡಗು ಕಲಾವಿದರ ಸಂಘದ ಉಪಾಧ್ಯಕ್ಷರಾಗಿ, ಕೊಡಗು ಜಿಲ್ಲಾ ಸಿರಿಗನ್ನಡ ವೇದಿಕೆ ಗೌರವ ಕಾರ್ಯದರ್ಶಿಯಾಗಿ, ಕೊಡಗು ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ 2007ರಿಂದ 2023ರ ವರೆಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕೊಡವ ಕೇರಿಯ ನಿರ್ದೇಶಕರಾಗಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, ಮಡಿಕೇರಿ ಕೊಡವ ಸಮಾಜ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ನಿರ್ದೇಶಕರಾಗಿ, 2020-21ನೇ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರಾಗಿ, ‘ಕಾವೇರಿ ಟೈಮ್ಸ್’ ದಿನಪತ್ರಿಕೆಯ ಪ್ರಕಾಶಕರು ಹಾಗೂ ಮಾಲೀಕರಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಗೆ ಇವರದ್ದಾಗಿದೆ. *ಬೊಳ್ಳಜಿರ ಅಯ್ಯಪ್ಪ ಮಾಡಿರುವ ಕೆಲಸಗಳು*
ಅಯ್ಯಪ್ಪ ಅವರ ಸಂಪಾದಕೀಯದ ದೇವತೆಯಡ ಪಿಂಞ ಕೇಳಿಪೋನಯಿಂಗಡ ಪಾಟ್‌ರ ಕಥಾರೂಪ, ಜಾನಪದ ಕತೆ ಜೊಪ್ಪೆ, ಚಂಗೀರ (ಸಂಶೋಧನಾ ಕೃತಿ), ಒತ್ತಜೋಡಿ (ಅಭಿನಂದನಾ ಗ್ರಂಥ) ಹಾಗೂ ಆಟ್-ಪಾಟ್ ಪಡಿಪು ಪುಸ್ತಕ (ಸಂಗ್ರಹ  ಪುಸ್ತಕ) ಎನ್ನುವ ಐದು ಪುಸ್ತಕಗಳು ಪ್ರಕಟವಾಗಿದೆ. ಕಳೆದ 7 ವರ್ಷಗಳಲ್ಲಿ ಮಕ್ಕಳಿಗೆ ಆಟ್-ಪಾಟ್ ಪಡಿಪು ಕಾರ್ಯಕ್ರಮ, ಕೊಡವ ಮಕ್ಕಡ ಕೂಟದ ವತಿಯಿಂದ ಇವರ ಅಧ್ಯಕ್ಷತೆಯಲ್ಲಿ ದಾಖಲೀಕರಣ ಸಾಹಿತ್ಯದ ಹಾಗೂ ಕೊಡಗಿಗೆ ಸಂಬಂಧಿಸಿದ 117 ಪುಸ್ತಕಗಳನ್ನು ಪ್ರಕಟಣೆ ಮಾಡಿದ್ದಾರೆ. ‘ನಾಡ ಪೆದ ಆಶಾ’ (ನಾಯಕ ನಟ), ‘ಕೊಡಗ್ರ ಸಿಪಾಯಿ’, ‘ಪೊಮ್ಮಾಲೆ ಕೊಡಗ್’, ‘ಕಾಂಗತ ಮೂಡ್’ ಎಂಬ ಕೊಡವ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಇವರು ಕಥೆ, ಸಂಭಾಷಣೆ ಒದಗಿಸಿ ನಿರ್ದೇಶಿಸಿ, ನಟಿಸಿದ ‘ನಂಬಿಕೆ’ ಕಿರು ಚಿತ್ರ ಕರ್ನಾಟಕ ಕೊಡವ ಸಾಹತ್ಯ ಅಕಾಡೆಮಿ ನಡೆಸಿದ ಕಿರುಚಿತ್ರ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ಅಯ್ಯಪ್ಪ ಅವರು ಸ್ಕಾ÷್ವಡ್ರನ್ ಲೀಡರ್  ಅಜ್ಜಮಾಡ ದೇವಯ್ಯ  (ಮಹಾವೀರ ಚಕ್ರ ಪುರಸ್ಕೃತ) ಅವರ ಪ್ರತಿಮೆ ಅನಾವರಣಕ್ಕೆ ಕಾರಣಕರ್ತರಾಗಿದ್ದಾರೆ. ಕೊಂಗಂಡ ಗಣಪತಿ, ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ, ಕೊಡಗ್‌ರ ಗಾಂಧಿ ಸ್ವಾತಂತ್ರ‍್ಯ ಹೋರಾಟಗಾರ ಪಂದ್ಯAಡ ಬೆಳ್ಯಪ್ಪ, ಕೊರವಂಡ ನಂಜಪ್ಪ ಇವರ ಹೆಸರನ್ನು ರಸ್ತೆಗೆ ಇಡುವ ಕಾರ್ಯ ಮಾಡಿದ್ದಾರೆ. ಕೊಡವ ಸಾಹಿತ್ಯ ಅಕಾಡೆಮಿಯ ಸಹಕಾರದೊಂದಿಗೆ ಮಕ್ಕಡ ಕೊಡವ ಸಾಂಸ್ಕೃತಿಕ ನಮ್ಮೆ ಮಾಡಲಾಗಿದೆ. ಕನ್ನಡ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರು ನಡೆಸಿಕೊಡುತ್ತಿದ್ದ ‘ಫ್ಯಾಮಿಲಿ ಪವರ್’ ರಿಯಾಲಿಟಿ ಶೋದಲ್ಲಿ ಭಾಗವಹಿಸಿ ಗೆದ್ದ 2 ಲಕ್ಷ ರೂ. ಬಹುಮಾನವನ್ನು ಸೇನೆಯಲ್ಲಿ ಮೃತಪಟ್ಟ ಸೈನಿಕರೊಬ್ಬರ ಕುಟುಂಬಕ್ಕೆ ದಾನ ಮಾಡಿದ್ದಾರೆ. ಕಳೆದ 11 ವರ್ಷಗಳಿಂದ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ (ಮಹಾವೀರ ಚಕ್ರ ಪುರಸ್ಕೃತ) ಇವರ ಸ್ಮರಣೆ ದಿನದ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. (ಅಜ್ಜಮಾಡ ಒಕ್ಕದ ಸಹಕಾರದಲ್ಲಿ), ಕಳೆದ 7 ವರ್ಷದಿಂದ ಎಡಮ್ಯಾರ್ ಒಂದ್ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಇವರು ದೂರದರ್ಶನದ ಚಂದನ ವಾಹಿನಿಯ ಸೋದರಸಿರಿ ಕಾರ್ಯಕ್ರಮದಲ್ಲಿ ಕೊಡವ ಕಾರ್ಯಕ್ರಮವನ್ನು ನೀಡಿರುವುದಲ್ಲದೆ, ಸಾಧಕರ ಸಂದರ್ಶನ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. *ಸಂದ ಸನ್ಮಾನ ಮತ್ತು ಪ್ರಶಸ್ತಿಗಳು*
2023ರಲ್ಲಿ ಸಮರ್ಥ ಕನ್ನಡಿಗರು (75 ಪುಸ್ತಕ ಪ್ರಕಶನಕ್ಕಾಗಿ) ಪ್ರಶಸ್ತಿ,  2022ರಲ್ಲಿ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ಅವಾರ್ಡ್ಸ್, ಅತ್ಯುತ್ತಮ ನಟ ಪ್ರಶಸ್ತಿ (ನಾಡ ಪೆದ ಆಶಾ ಚಿತ್ರದ ನಾಯಕನಟನ ಪಾತ್ರಕ್ಕಾಗಿ), ಮಣಿಪುರದ ಸಿನಿಮೋತ್ಸವದಲ್ಲಿ ಕೂಡ ಇದೇ ಚಿತ್ರದ ಅಭಿನಯಕ್ಕೆ ಬೆಸ್ಟ್ ಆಕ್ಟರ್ ಪ್ರಶಸ್ತಿ ಲಭಿಸಿದೆ. 2019ರಲಿ ಮಂಗಳೂರಿನ ದಕ್ಷಿಣ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಿರಿಯ ಪತ್ರಕರ್ತ ದಿ.ಪದ್ಯಾಣ ಗೋಪಾಲಕೃಷ್ಣಭಟ್ ಸಂಸ್ಕರಣ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ, ಕನ್ನಡ ಭವನದ ಪ್ರತಿಷ್ಠಿತ ಅಂತರಾಜ್ಯ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಪ್ರಶಸ್ತಿ 2025ರಲ್ಲಿ ಲಭಿಸಿದೆ.  Global Kodava summit    , ಕೊಡಗು ಪ್ರೆಸ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕನೆಕ್ಪಿಂಗ್ ಕೊಡವಾಸ್, ಅಜ್ಜಮಾಡ ಒಕ್ಕ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕೊಡವ ಕೇರಿಯಿಂದ ಕೊಡವ ಮಕ್ಕಡ ಕೂಟದಿಂದ ಪುಸ್ತಕ ಬಿಡುಗಡೆ ಮಾಡಿರುವುದಕ್ಕಾಗಿ ಹಾಗೂ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆ ಅನಾವಣಕ್ಕೆ ಕಾರಣಕರ್ತರಾಗಿದ್ದಕ್ಕೆ ಹಲವು ಸಂಘ ಸಂಸ್ಥೆಗಳಿಂದ ಸನ್ಮಾನ, ಎಫ್.ಎಂ.ಕೆ.ಎಂ.ಸಿ. ಕಾಲೇಜಿಗೆ ಸಹಕಾರ ನೀಡಿದನ್ನು ಸ್ಮರಿಸಿ ಸನ್ಮಾನಿಸಿ ಗೌರವಿಸಲಾಗಿದೆ. 2013ನೇ ಫೆಬ್ರವರಿ 18 ರಂದು ಬೊಳ್ಳಜಿರ ಬಿ.ಅಯ್ಯಪ್ಪ ಅವರ ನೇತೃತ್ವದಲ್ಲಿ ಆರಂಭಗೊಂಡ ಕೊಡವ ಮಕ್ಕಡ ಕೂಟ ಯುವಕರ ತಂಡ ಕೊಡವ ಸಾಹಿತ್ಯ, ಸಂಸ್ಕೃತಿ, ಪದ್ಧತಿ, ಕೊಡವ ಮಹಾನ್ ವ್ಯಕ್ತಿಗಳ ಸ್ಮರಣೆಯನ್ನು ನಡೆಸುತ್ತಾ ಬರುತ್ತಿದ್ದಾರೆ. ಕೊಡವ ಸಂಸ್ಕೃತಿಯ ಬಗ್ಗೆ ಯುವ ಜನರಲ್ಲಿ ಜಾಗೃತಿ ಹಾಗೂ ಆಸಕ್ತಿಯನ್ನು ನಿರಂತರವಾಗಿ ಮೂಡಿಸುತ್ತಾ ಸ್ತುತ್ಯಾರ್ಹವಾದ ಕಾರ್ಯವನ್ನು ಮಾಡಿಕೊಂಡು ಬರಲಾಗುತ್ತಿದೆ. ಮಕ್ಕಳು ಸಂಸ್ಕೃತಿಯಿಂದ ದೂರವಾಗುತ್ತಿದ್ದಾರೆ ಎನ್ನುವ ಹಿರಿಯರ ಟೀಕೆಯನ್ನು ದೂರ ಮಾಡಿ ಹಿರಿಯರೇ ಅಚ್ಚರಿ ಪಡುವಂತಹ ಕಾರ್ಯಕ್ರಮಗಳನ್ನು ಪ್ರತಿ ವರ್ಷ ನಡೆಸಿಕೊಂಡು ಬರುತ್ತಿದ್ದಾರೆ. ಯುವಕರಾದರೂ ಕೂಡ ಮರೆತು ಹೋಗಿದ್ದ ಹಿರಿಯರನ್ನು ನೆನಪು ಮಾಡಿಕೊಡುವುದು, ಅವರ ಹುಟ್ಟು ಹಬ್ಬ ಆಚರಿಸುವುದು, ಮಹನೀಯರ ಪ್ರತಿಮೆಗಳನ್ನು ಅನಾವರಣಗೊಳಿಸುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಬೊಳ್ಳಜಿರ ಅಯ್ಯಪ್ಪ ಅವರು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಹಲವು ಕಡೆಗಳಲ್ಲಿ ಕೊಡವ ಜಾನಪದ ಕಲಾ ಪ್ರಕಾರಗಳ ತರಬೇತಿಯನ್ನು ನೀಡಿ ಯುವ ಜನರಿಗೆ ಸಂಸ್ಕೃತಿಯ ಅರಿವನ್ನು ಮನದಟ್ಟು ಮಾಡಿಕೊಟ್ಟಿದ್ದಾರೆ. ಎಲ್ಲಾ ಕಾರ್ಯಕ್ರಮಗಳಲ್ಲಿ ದಕ್ಷಿಣ ಭಾರತದ ಮೊದಲ ಜಾನಪದ ಕೃತಿಯಾಗಿರುವ ಕೊಡವರ ಭಗವದ್ಗೀತೆ ಎಂದು ಕರೆಯಿಸಿಕೊಂಡಿರುವ “ಪಟ್ಟೋಲೆ ಪಳಮೆ’’ಯನ್ನು ಹಂಚುತ್ತಾ ಬರಲಾಗುತ್ತಿದೆ. ಆ ಮೂಲಕ ಕೊಡವ ಸಂಸ್ಕೃತಿಯ ಬೆಳವಣಿಗೆಗೂ ಕಾರಣಕರ್ತರಾಗಿದ್ದಾರೆ. ಹಲವು ರಸ್ತೆಗಳಿಗೆ ಕೊಂಗAಡ ಗಣಪತಿ, ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ, ಕೊರವಂಡ ನಂಜಪ್ಪ, ಪಂದ್ಯಂಡ ಬೆಳ್ಯಪ್ಪ ಅವರ ಹೆಸರುಗಳನ್ನು ಮರು ನಾಮಕರಣ ಮಾಡಿದ್ದಾರೆ. ಕೊಡವರಿಗೆ ಹಕ್ಕಾಗಿ ಬಂದಿರುವ ಪರವಾನಗಿ ರಹಿತ ಕೋವಿ ಹೊಂದುವ ಹಕ್ಕನ್ನು ಉಳಿಸಿಕೊಳ್ಳುವಲ್ಲಿ ಸಾಕಷ್ಟು ಪ್ರಯತ್ನಗಳನ್ನು ನಡೆಸಿದೆ. ಕೊಡವ ಸಂಸ್ಕೃತಿಯನ್ನು ಉಳಿಸುವ ಸಲುವಾಗಿ ಕೊಡವ ಕುಟುಂಬಗಳ ನಡುವಿನ “ಉಮ್ಮತ ಬೊಳಕ್’’ ಎಂಬ ಜಾನಪದ ನೃತ್ಯ ಸ್ಪರ್ಧೆಯನ್ನು ನಡೆಸಲಾಗಿದೆ. ಕೊಡವ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಕಳೆದ ಐದು ವರ್ಷಗಳಿಂದ “ಕುಂಞಯಡ ನಮ್ಮೆ”ಯನ್ನು ನಡೆಸಿಕೊಂಡು ಬರಲಾಗುತ್ತಿದೆ.  ಕಳೆದ 8 ವರ್ಷಗಳಿಂದ ಎಳೆಯ ಮಕ್ಕಳಿಗೆ ಕೊಡವ ಸಂಸ್ಕೃತಿ, ಸಾಹಿತ್ಯದ ಬಗ್ಗೆ ಅಭಿರುಚಿ ಮೂಡಿಸುವ ಸಲುವಾಗಿ ವರ್ಷಂಪ್ರತಿ ಮಕ್ಕಳಿಗೆ ಆಟ್-ಪಾಟ್ ಪಡಿಪು ಕಾರ್ಯಕ್ರಮ ನಡೆಸಲಾಗುತ್ತಿದೆ. 4000 ಆಟ್‌ಪಾಟ್ ಪಡಿಪು ಪುಸ್ತಕವನ್ನು ಮುದ್ರಿಸಿ ಉಚಿತವಾಗಿ ಶಾಲಾ ಕಾಲೇಜು ಸೇರಿದಂತೆ ಹಲವು ಮಕ್ಕಳಿಗೆ ನೀಡಲಾಗಿದೆ. ಕೊಡವ ಸಾಧಕ ಯುವಕ-ಯುವತಿಯರನ್ನು ಹಾಗೂ ಹಲವು ಸಾಧಕರನ್ನು ಗುರುತಿಸಿ, ಸನ್ಮಾನಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡಲಾಗಿದೆ. ಬೊಳ್ಳಜಿರ ಅಯ್ಯಪ್ಪ ಅವರು ಸಾಹಿತ್ಯ ಕ್ಷೇತ್ರಕ್ಕೆ ಸಾಕಷ್ಟು ಇಂಬು ನೀಡುತ್ತಿದ್ದು, ಈಗಾಗಲೇ ಹಲವು ಕೃತಿಗಳನ್ನು ಪ್ರಕಟಿಸಿ ಲೇಖಕರಿಗೆ ಪ್ರೋತ್ಸಾಹ ನೀಡಿದ್ದಾರೆ. ಹೆಚ್ಚು ಕೃತಿಗಳನ್ನು ರಚಿಸಿದ ಲೇಖಕರನ್ನು ಗುರುತಿಸಿ ಗೌರವಿಸಿದ್ದಾರೆ. ಪ್ರತಿ ವರ್ಷ ಕಾವೇರಿ ಚಂಗ್ರಾಂದಿಯಂದು ತೀರ್ಥೋದ್ಭವದ ಸಂದರ್ಭ ತಲಕಾವೇರಿಗೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ತೆರಳುತ್ತಿದ್ದಾರೆ. ಅಲ್ಲಿ ಸ್ವಯಂ ಸೇವಕರಂತೆ ಕಾರ್ಯನಿರ್ವಹಿಸುತ್ತಾರೆ. ಅಲ್ಲಿಂದ ತೀರ್ಥವನ್ನು ತಂದು ನಾಡಿಗೆ ಹಂಚುತ್ತಿದ್ದಾರೆ. ಈ ರೀತಿಯ ಹಲವು ಬಗೆಯ ಕಾರ್ಯಕ್ರಮಗಳನ್ನು ನಡೆಸಿ ನಾಡಿನ ಜನರ ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ ಬೊಳ್ಳಜಿರ ಅಯ್ಯಪ್ಪ.
*ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಪ್ರತಿಮೆ* 8 ವರ್ಷಗಳ ಹಿಂದೆ ಬೊಳ್ಳಜಿರ ಬಿ.ಅಯ್ಯಪ್ಪ ಅವರ ನೇತೃತ್ವದಲ್ಲಿ ಕೊಡವ ಮಕ್ಕಡ ಕೂಟ ದೊಡ್ಡ ಸಾಹಸಕ್ಕೆ ಕೈ ಹಾಕಿತು. 1965ರಲ್ಲಿ ನಡೆದ ಭಾರತ ಪಾಕಿಸ್ತಾನ ಯುದ್ಧದ ಸಂದರ್ಭ ವೀರಾವೇಶದಿಂದ ಹೋರಾಡಿ ಹುತಾತ್ಮರಾದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬೋಪಯ್ಯ ದೇವಯ್ಯ ಅವರ ಪ್ರತಿಮೆಯನ್ನು ಮಡಿಕೇರಿ ನಗರದಲ್ಲಿ ಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಜ್ಜಮಾಡ ದೇವಯ್ಯ ಅವರು ಹುತಾತ್ಮರಾದ ಸೆಪ್ಟೆಂಬರ್ 7 ರಂದು ಪ್ರತಿವರ್ಷ ಸ್ಮರಣೆ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. *ಪರಿಚಯ* ನಿವೃತ್ತ ಸಬ್ ಇನ್‌ಸ್ಪೆಕ್ಟರ್ ಬೊಳ್ಳಜಿರ ಬೋಪಯ್ಯ ಹಾಗೂ ಯಶೋಧ ಬೋಪಯ್ಯ (ತಾಮನೆ : ಅಜ್ಜಮಾಡ) ಇದೀಗ ವಿರಾಜಪೇಟೆಯಲ್ಲಿ ವಾಸವಿರುವ ದಂಪತಿಗಳ ಪ್ರಥಮ ಪುತ್ರ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಬಿ.ಕಾಂ (ಸಿ.ಎ), ಎಂ.ಎ. (ಕೊಡವ) ಪದವಿ ಪಡೆದಿದ್ದಾರೆ. ನಿವೃತ್ತ ಸಬ್ ಇನ್‌ಸ್ಪೆಕ್ಟರ್ ಮನ್ನೇರ ನಂಜಪ್ಪ ಹಾಗೂ ರಾಣಿ ನಂಜಪ್ಪ (ತಾಮನೆ: ಅಪ್ಪಾರಂಡ) ದಂಪತಿಗಳ ನಾಲ್ಕನೇ ಪುತ್ರಿ ಯಮುನಾ ಅವರನ್ನು ವಿವಾಹವಾಗಿದ್ದು, ಇವರಿಗೆ ದೇಚಮ್ಮ ಹಾಗೂ ಬೋಪಣ್ಣ ಎಂಬ ಇಬ್ಬರು ಮಕ್ಕಳಿದ್ದಾರೆ.
*ಅಯ್ಯಪ್ಪ ವಿಳಾಸ*
*ಬೊಳ್ಳಜಿರ ಬಿ. ಅಯ್ಯಪ್ಪ, (9880778047)*
ಕೆ.ಬಾಡಗ, ಫೀ.ಮಾ ಕಾರ್ಯಪ್ಪ ಕಾಲೇಜು ಪೋಸ್ಟ್,
ಮಡಿಕೇರಿ – 571201
*(ಬರಹ : ಎಸ್.ಆರ್.ವತ್ಸಲ, ಮಡಿಕೇರಿ)*

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ : ಆ.18 ರಂದು ಉದ್ಯೋಗ ಮೇಳ*
Next Article *ಕೊಡವ ಮಕ್ಕಡ ಕೂಟದ 117ನೇ ಪುಸ್ತಕ “ಕೊಡಗ್‌ಲ್ ಆನೆ-ಮಾಲವ ಪಣಂಗಲ್” ಬಿಡುಗಡೆ : ಆನೆ ಮಾನವ ಸಂಘರ್ಷ ತಡೆಗೆ ಯುವ ಜಾಗೃತಿ ಅಗತ್ಯ : ಮೇಜರ್ ಪ್ರೊ.ಬಿ.ರಾಘವ ಅಭಿಮತ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.