
ಸುಂಟಿಕೊಪ್ಪ NEWS DESK ಆ.17: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪ ಬಾಳೆಕಾಡು ರಸ್ತೆ ತಿರುವಿನಲ್ಲಿ ನಡೆದಿದೆ. ಕುಶಾಲನಗರದಿಂದ ಮಡಿಕೇರಿಗೆ ಬರುತ್ತಿದ್ದ ಬಸ್ ಮತ್ತು ಕುಶಾಲನಗರ ಕಡೆಗೆ ಸಾಗುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಕಾರು ಚಾಲಕ ರಂಜಿತ್ ಹಾಗೂ ಪ್ರಯಾಣಿಕ ಕುಮಾರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.










