Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ : ಜಲ ಜೀವನ್ ಮಿಷನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ : ಜಲ ಜೀವನ್ ಮಿಷನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ*

August 18, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.18 NEWS DESK : ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿಗಳು, ಜಿ.ಪಂ.ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ವಿರಾಜಪೇಟೆ ತಾ.ಪಂ.ಸಾಮಾನ್ಯ ಸಭೆ ನಡೆಯಿತು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಒಟ್ಟು 3 ಬ್ಯಾಚ್‍ಗಳಿಂದ 120 ಕಾಮಗಾರಿಗಳಿದ್ದು 44 ಕಾಮಗಾರಿಗಳು ಮಾತ್ರ ಮುಕ್ತಾಯಗೊಂಡಿದೆ. ಇನ್ನುಳಿದ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಲು ಕ್ರಮವಹಿಸಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಉಚಿತ ಪಠ್ಯ-ಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಊಟದ ನೀಡುತ್ತಿದ್ದರೂ ಕೂಡ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಮಾತ್ರ ಇಳಿಕೆಯಾಗುತ್ತಿದೆ. ಎಸ್‍ಎಸ್‍ಎಲ್‍ಸಿ ಓದುತ್ತಿರುವ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಗಮನಹರಿಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಾಡಿ ಜನರಿಗೆ ಸಿಗುತ್ತಿರುವ ಸೌಲಭ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. 6 ಆಶ್ರಮ ಶಾಲೆಗಳಲ್ಲಿ 700ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದು, ಎಲ್ಲಾ ಶಾಲೆಗಳು ಉತ್ತಮ ರೀತಿಯಲ್ಲಿ ನಿರ್ವಹಣೆ ಕೈಗೊಳ್ಳಲಾಗುತ್ತಿದೆ ಮತ್ತು ಹಾಡಿ ಜನರಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಅವರು ಸಭೆಗೆ ಮಾಹಿತಿ ನೀಡಿದರು. ಮೀನುಗಾರಿಕೆ ಇಲಾಖೆಯಿಂದ ಮೀನುಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಮೀನು ಹಿಡಿಯುವ ಕಿಟ್ ಹಾಗೂ ಮೀನು ಸಾಕಾಣಿಕೆ ಮಾಡುವ ರೈತರಿಗೆ ಅರ್ಹತೆ ಆಧಾರದ ಮೇಲೆ ಮೀನುಮರಿ ನೀಡಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಪಶು ಸಂಗೋಪನೆ ಇಲಾಖೆಯಿಂದ ಈಗಾಗಲೇ ರಾಸುಗಳಿಗೆ ಕಾಲು-ಬಾಯಿ ಜ್ವರದ ಲಸಿಕೆ, ಚರ್ಮಗಂಟು ನಿವಾರಣಾ ಲಸಿಕೆ ನೀಡಲಾಗಿದ್ದು, ತಾಲ್ಲೂಕಿನ ವ್ಯಾಪ್ತಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿ ಹೊರತುಪಡಿಸಿ ಹಾಲು ಮಾರಾಟ ಕೇಂದ್ರಗಳು ಇಲ್ಲವಾದ ಕಾರಣ ಹಸು ಸಾಕಾಣಿಕೆ ಮಾಡುವವರ ಸಂಖ್ಯೆಯು ಕಡಿಮೆಯಾಗಿದೆ ಎಂದು ಪಶುಪಾಲನೆ ಇಲಾಖೆಯ ಸಹಾಯಕ ನಿರ್ದೇಶರಾದ ಗಿರೀಶ್ ಅವರು ಮಾಹಿತಿ ನೀಡಿದರು. ಸೆಸ್ಕ್ ವಿಭಾಗದಿಂದ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಹೊಸ ಕಂಬಗಳನ್ನು ಅಳವಡಿಸುವ ಸಂಬಂಧಿಸಿದಂತೆ ಕಂಬಗಳನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವುದರಿಂದ ರಸ್ತೆಗೆ ಹಾನಿಯಾಗುತ್ತಿರುವುದು ಕಂಡುಬಂದಿದ್ದು, ಇದರ ಕುರಿತು ಕ್ರಮವಹಿಸಲು ಎಂಜಿನಿಯರ್‍ಗಳಿಗೆ ತಿಳಿಸಿದರು. ಅರಣ್ಯ ಇಲಾಖೆಯಿಂದ ವನ್ಯಜೀವಿಗಳ(ಆನೆದಾಳಿ, ಹುಲಿದಾಳಿ, ಬೆಳೆನಾಶ) ದಾಳಿಯಿಂದ ತಾಲ್ಲೂಕಿನಲ್ಲಿ ಒಟ್ಟು 618 ಪ್ರಕರಣಗಳು ದಾಖಲಾಗಿದ್ದು ಈಗಾಗಲೇ ಹಲವು ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ ಎಂದು ವಲಯ ಅರಣ್ಯಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಭೆಯಲ್ಲಿ ತಿಳಿಸಲಾಯಿತು. ಕೃಷಿ, ಸಹಕಾರ, ಕಂದಾಯ, ಅಬಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ, ತೋಟಗಾರಿಕೆ, ಅಕ್ಷರ ದಾಸೋಹ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇಲಾಖಾವಾರು ಸಭೆಗೆ ಮಹಿತಿ ನೀಡಿದರು. ಸಭೆಯಲ್ಲಿ ವಿರಾಜಪೇಟೆ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಸಿ.ಅಪ್ಪಣ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಹೇಳಿಕೆ ಬಾಲಿಶ : ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಸಮಾಧಾನ*
Next Article *ಹೊದ್ದೂರಿನಲ್ಲಿ ಜನ ಸುರಕ್ಷಾ ಅಭಿಯಾನ : ಸೈಬರ್ ವಂಚಕರಿಂದ ಎಚ್ಚರ ಅಗತ್ಯ : ಕೆ.ಎ.ಆಸೀಫ್ ಸಲಹೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.