
ವಿರಾಜಪೇಟೆ ಆ.19 NEWS DESK : ಶ್ರೀ ಕೃಷ್ಣ ಜನ್ಮಾಷ್ಠಮಿಯು ನಮ್ಮ ಇತಿಹಾಸ ಮತ್ತು ಸಂಸ್ಕøತಿಯಲ್ಲಿ ಬಹಳ ಮಹತ್ವತೆಯನ್ನು ಪಡೆದಿದೆ ಎಂದು ಶಿಕ್ಷಕರಾದ ವಿ.ಟಿ. ವೆಂಕಟೇಶ್ ಹೇಳಿದರು. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬಾಲಾಂಜನೇಯ ದೇವಾಸ್ಥಾನದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿ ವರ್ಷ ಇಡೀ ಜಗತ್ತು ಕೃಷ್ಟ ಜನ್ಮಾಷ್ಟಮಿ ಆಚರಿಸುತ್ತದೆ. ಮನೆ ಹಿರಿಯರನ್ನೂ ಮಕ್ಕಳೊಂದಿಗೆ ಮಕ್ಕಳಂತೆ ಸಂತೋಷ ಪಟ್ಟುಕ್ಕೊಳ್ಳಲು ಉತ್ತಮ ಅವಕಾಶವಾಗಿದೆ. ಮಕ್ಕಳಿಗೆ ಶಾಲೆಯ ವಿಷಯಗಳಿಂದ ಭಿನ್ನವಾಗಿ ತಮ್ಮನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವ ಕಾರ್ಯಕ್ರಮ ಎಂದರು. ಸಾಹಿತಿಗಳು, ವಿರಾಜಪೇಟೆ ತಾಲೂಕು ಕದಳಿ ವೇದಿಕೆ ಅಧ್ಯಕ್ಷೆ ರಜಿತ ಕಾರ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ರಾಮಾಯಣ ಮಹಾಭಾರತದಂತಹ ಕಾವ್ಯಗಳನ್ನು ಹೆಚ್ಚು ಹೆಚ್ಚಾಗಿ ಓದಿ ಅದರಲ್ಲಿರುವ ತತ್ವಸಾರವನ್ನು ತಿಳಿದು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿರುವ ವಿಚಾರಗಳು ಪ್ರಸ್ತುತ ಕೃಷ್ಣನ ಬದುಕಿನ ಕಥೆಗಳು ನಮ್ಮ ಜೀವನಕ್ಕೂ ಪ್ರೇರಣೆಯಾಗಲಿದೆ. ಇದರ ಸಾರವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳಿಗೆ ವಿದ್ಯೆಯೊಂದಿಗೆ ಸಂಸ್ಕಾರ, ಸಂಸ್ಕøತಿಯನ್ನು ಕಲಿಸಿಕೊಡುವಂತಾಗಬೇಕು. ಜೊತೆಗೆ ನಾಯಕತ್ವದ ಗುಣಗಳನ್ನು ಗಳಿಸಲು ಸ್ಪರ್ಧೆಗಳು ಬಹು ಸಹಕಾರಿಯಾಗಿದೆ. ನೃತ್ಯ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸುವಂತಾಗಲಿ ಎಂದು ಆಶಿಸಿದರು. ದಕ್ಷಿಣ ಕೊಡಗು ಲೇಖಕಿಯರ ಮತ್ತು ಕಲಾವಿದರ ಬಳಗದ ಅಧ್ಯಕ್ಷೆ ಪುಷ್ಪಲತಾ ಶಿವಪ್ಪ ಮಾತನಾಡಿ ಈ ಜಗತ್ತಿನಲ್ಲಿ ದುಷ್ಟ ಶಕ್ತಿಗಳು ಹೆಚ್ಚಾದಾಗ ದೇವರು ಅವತರಿಸಿ ದುಷ್ಟಶಕ್ತಿಗಳ ಸಂಹಾರ ಮಾಡುತ್ತಾನೆ. ರಾಮಾಯಣ, ಮಹಾಭಾರತ ಈ ಎರಡು ಮಹಾಕಾವ್ಯಗಳನ್ನು ಮೇಲುದೃಷ್ಠಿಯಿಂದ ನೋಡಬಾರದು ಅದರಲ್ಲಿರುವ ತತ್ವಸಾರವನ್ನು ತಿಳಿದುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರಲ್ಲದೆ ಶ್ರೀ ಕೃಷ್ಣನ ಜನ್ಮ ವೃತ್ತಾಂತವನ್ನು ಮಕ್ಕಳಿಗೆ ವಿವರಿಸಿದರು. ಬಾಲಾಂಜನೇಯ ದೇವಸ್ಥಾನದ ಧರ್ಮದರ್ಶಿಗಳಾದ ಬಾಬಾ ಶಂಕರ್ ಮಾತನಾಡಿ ಕೃಷ್ಷ ಜನ್ಮಾಷ್ಟಮಿ ಆಚರಣೆ ಮಹತ್ವ ಹಾಗೂ ಪ್ರತಿಯೊಬ್ಬರೂ ನಮ್ಮ ಆಚಾರ ವಿಚಾರ ಸಂಸ್ಕøತಿಗಳನ್ನು ಹೇಗೆ ರೂಢಿಸಿಕೊಳ್ಳಬೇಕು ಎಂಬ ವಿಚಾರವಾಗಿ ಮಾತಡಿದರಲ್ಲದೆ ವಿದ್ಯಾರ್ಥಿಗಳು ಮೊಬೈಲ್ ಬಳಕೆಯ ಚಟದಿಂದ ದೂರ ಉಳಿಬೇಕು, ಪ್ರತಿದಿನ ದೇವರ ದ್ಯಾನದೊಂದಿಗೆ ಹಿರಿಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕೆಂದು ಹೇಳಿದರು. ನಾಟ್ಯ ಮಯೂರಿ ನೃತ್ಯ ಶಾಲೆಯ ಶಿಕ್ಷಕಿ ವಿದೂಷಿ ಪ್ರೇಮಾಂಜಲಿ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಾತಿ ಮತ ಭೇಧವಿಲ್ಲದೆ ಜಗತ್ತಿನಾದ್ಯಂತ ಕೃಷ್ಣನನ್ನು ಆರಾಧಿಸಲಾಗುತ್ತಿದೆ. ಎಂದರಲ್ಲದೆ ನಾಟ್ಯ ಮಯೂರಿ ನೃತ್ಯ ಶಾಲೆ ಅತ್ಯಂತ ಕಡಿಮೆ ಅವಧಿಯಲ್ಲಿ ಹಲವು ಮೈಲುಗಲ್ಲನ್ನು ದಾಟಿ ಬಂದಿದೆ. ಪ್ರತಿಯೊಬ್ಬರ ಸಹಕಾರ ಕೂಡ ಇದಕ್ಕೆ ಪ್ರೇರಣೆಯಾಗಿದೆ. ಮುಂದಿನ ದಿನಗಳಲ್ಲಿ ನೃತ್ಯ ಶಾಲೆಯ ಮುಖಾಂತರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು. ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಮಕ್ಕಳು ಮುದ್ದು ಕೃಷ್ಣ ಮತ್ತು ಗೋಪಿಕೆಯರ ವೇಷದಲ್ಲಿ ಕಂಗೊಳಿಸಿದರು ಮತ್ತು ಶ್ರೀ ಕೃಷ್ಣನ ವಿವಿಧ ಸನ್ನಿವೇಶಗಳನ್ನೊಳಗೊಂಡ ನೃತ್ಯ ಪ್ರದರ್ಶನವನ್ನು ನೀಡಿದರು. ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಹಾಗೂ ಸ್ಪರ್ಧೇಯಲ್ಲಿ ವಿಜೇತರಾದ ಪೋಷಕರಿಗೂ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಸಾಹಿತಿಗಳಾದ ಸೋಮೆಯಂಡ ಕೌಶಲ್ಯ ಉಪಸ್ಥಿತರಿದ್ದರು. ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಟ್ರಸ್ಟಿಗಳಾದ ದೀಪಕ್ ಕಾರ್ಯಕ್ರಮ ನಿರ್ವಹಿಸಿದರು. ಕೌಶಲ್ಯ ಅವರು ವಿವಿಧ ಸ್ಪರ್ದೇಗಳ ತೀರ್ಪುಗಾರಿಕೆ ನೀಡಿದರು. ಕಾರ್ಯಕ್ರಮದಲ್ಲಿ ಪೋಷಕರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.









