Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪ್ರತಿಭೆಗಳನ್ನು ಹೊರ ತರುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಪ್ರಮುಖ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು

*ಪ್ರತಿಭೆಗಳನ್ನು ಹೊರ ತರುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಪ್ರಮುಖ : ಶಾಸಕ ಎ.ಎಸ್.ಪೊನ್ನಣ್ಣ*

August 19, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು  ಆ.19 NEWS DESK  : ಗ್ರಾಮೀಣ ಮಟ್ಟದಲ್ಲಿ ಹಲವು ಪ್ರತಿಭೆಗಳಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲು ಹಿಂದೂ ಮಲಯಾಳಿ ಸಂಘದ ವತಿಯಿಂದ ಸಮಸ್ತ ಹಿಂದೂ ಬಾಂಧವರಿಗಾಗಿ ಹಳೆ ತಾಲೂಕಿನ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆ ಕ್ರೀಡೆಗೆ ಹೆಸರುವಾಸಿಯಾಗಿದೆ. ಎಲ್ಲಾ ಸಮಾಜದವರನ್ನು, ಜನಾಂಗದವರನ್ನು ಉಗ್ಗೂಡಿಸುವ ಶಕ್ತಿ ಕ್ರೀಡೆಗಿದೆ. ದೇಶಕ್ಕೆ ದೊಡ್ಡ ಕೊಡುಗೆಯನ್ನು ಜಿಲ್ಲೆಯ ಕ್ರೀಡಾಪಟುಗಳು ನೀಡಿದ್ದಾರೆ ಮತ್ತಷ್ಟು ಕ್ರೀಡಾ ಪ್ರತಿಭೆಗಳನ್ನು ಹೊರ ತರುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಪ್ರಮುಖವಾದದ್ದು ಎಂದರು. ನಾಡಿನ ಸಮಸ್ತ ದೇವಾನುದೇವತೆಗಳು ಯುವಕರಿಗೆ,ಮಕ್ಕಳಿಗೆ ಉತ್ತಮ ಭವಿಷ್ಯ ನೀಡಲಿ.ಉತ್ತಮಮಳೆ-ಬೆಳೆಯಾಗಿ ನಾಡು ನಾಡುಸಮೃದ್ದಿಯಿಂದ ಕೂಡಿರಲಿ ಎಂದರು. ಸ್ಥಳೀಯ ಗ್ರಾಮೀಣ ನಿವಾಸಿಗಳು ಶತಮಾನಗಳಿಂದ ಹಗ್ಗಜಗ್ಗಾಟದಂತಹ ಹಲವು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದಿದ್ದಾರೆ ಇಂತಹ ಕ್ರೀಡೆಗಳು ಗ್ರಾಮೀಣ ಸೊಬಗನ್ನು ಎತ್ತಿ ಹಿಡಿಯುವುದರೊಂದಿಗೆ ಜನರಲ್ಲಿ ಒಗ್ಗಟ್ಟು ಮೂಡಿಸಿ ಸಾಮರಸ್ಯ ಮೂಡಿಸಲು ಸಹಕಾರಿಯಾಗಿದೆ. ಬಹುತೇಕ ಕೃಷಿಕರಾಗಿರುವ ಗ್ರಾಮೀಣ ಜನತೆಗೆ ಇಂತಹ ಕ್ರೀಡಾಕೂಟಗಳು ಮನೋರಂಜನೆ ಹಾಗೂ ಮನೋಸ್ಥೈರ್ಯವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದರು. ಹಿಂದೂ ಮಲಯಾಳಿ ಸಂಘ ಹಾಗೂ ಹಿಂದೂ ಮಲಿಯಾಳಿ ಸಮುದಾಯದವರು ಕೊಡಗಿನ ಅಭಿವೃದ್ಧಿಗೆ ಹಾಗೂ ಏಳಿಕೆಗೆ ಹಲವು ಕೊಡುಗೆಗಳನ್ನು ನೀಡಿದ್ದಾ.ರೆ ಅವರ ಕಾರ್ಯಕ್ಷಮತೆ, ಬದ್ಧತೆ ಎಲ್ಲರಿಗೂ ಮಾದರಿಯಾಗಿದೆ. ಕೊಡಗಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಹಿಂದೂ ಮಲೆಯಾಳಿಗಳ ಕೊಡುಗೆ ಗಣನೀಯವಾದದ್ದು ಎಂದರು ನಾಡಿನ ಹಾಗೂ ಕ್ಷೇತ್ರದ ಹಿಂದೂ ಮಲಯಾಳಿಗಳ ಶ್ರೇಯೋಭಿವೃದ್ಧಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಮಾಡುವುದಾಗಿ ಹೇಳಿದರು. ನಾಪೆÇೀಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಎ.ಕೆ ಮಾತನಾಡಿ ಶಾಸಕರು ಅಭಿವೃದ್ಧಿಗೆ ಪೂರಕವಾಗಿ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮಗಳಿಗೆ ಸಹಕಾರನೀಡುತ್ತಿದ್ದಾರೆ. ಶಾಸಕರು ಇಲ್ಲಿಯ ಹಿಂದೂ ಮಲಯಾಳಿ ಸಂಘದ ಅಭಿವೃದ್ಧಿಗೆ ನಿವೇಶನ ನೀಡಿ ಸಹಕರಿಸುವಂತೆ ಮನವಿ ಮಾಡಿ ದರಲ್ಲದೆ ಸಂಘಕ್ಕೆ ನಾನು ಈ ಹಿಂದೆ ವಾಗ್ದಾನ ನೀಡಿದಂತೆ ಸಂಘಕ್ಕೆ ರೂ.50 ಸಾವಿರ ರೂ ದೇಣಿಗೆ ನೀಡಲಿರುವುದಾಗಿ ಹೇಳಿದರು. ಗ್ರಾಮ ಪಂಚಾಯಿತಿ ಸದಸ್ಯ ಅರುಣ್ ಬೇಬ ಮಾತನಾಡಿ ಆಧುನಿಕ ಭರಾಟೆಯಲ್ಲಿ ತಂತ್ರಜ್ಞಾನ ಯುಗದಲ್ಲಿ ಎಲ್ಲವನ್ನೂ ಕಳೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಜಿಲ್ಲೆಯಕ್ರೀಡಾಕೂಟಗಳು ಎಲ್ಲರನ್ನಬೂಒಗ್ಗೂಡಿಸುವ ಕಾರ್ಯಕ್ರಮವಾಗಿದೆ. ಇಲ್ಲಿನ ಆಟದ ಮೈದಾನಕ್ಕೆ 150 ವರ್ಷಗಳ ಇತಿಹಾಸವಿದೆ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ನಾಪೋಕ್ಲು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಅನಿಲ್ ಕೆ ಕೆ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಅಧ್ಯಕ್ಷ ಎ.ಕೆ. ಚಂದ್ರ, ದಾನಿಗಳು ,ಕಾಫಿ ಬೆಳೆಗಾರರಾದ ಅಪ್ಪಚೆಟ್ಟೋಳಂಡ ನವೀನ್ ಅಪ್ಪಯ್ಯ, ದಾನಿಗಳಾದ ಚೀಯಕಪೂವಂಡ ಎಸ್.ಮಂಜುನಾಥ್ (ಕಟ್ಟಿ), ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮಾಚೇಟಿರ ಕುಸು ಕುಶಾಲಪ್ಪ, ಹೇಮಾ ಅರುಣ್, ಪ್ರತೀಪ ಬಿ.ಎಂ, ಕಲಿಯಂಡ ಸಂಪನ್ ಅಯ್ಯಪ್ಪ, ಹಿಂದೂ ಮಲಯಾಳಿ ಸಂಘದ ಸಲಹೆಗಾರ ರಘು ಅಜಿಮುಟ್ಟ, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ದೇವಸ್ಮಿತ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದ ನಿರೂಪಣೆ ಮತ್ತು ವಿಕ್ಷಕ ವಿವರಣೆಯನ್ನು ರವಿ ಓಂಕಾರ್, ಪ್ರಸಾದ ಹಾಗೂ ಶೈಲಾ ನಿರ್ವಹಿಸಿ ಅನಿಲ್ ಕೆ ಕೆ ವಂದಿಸಿದರು. ಇದಕ್ಕೂ ಮೊದಲು ಕೇರಳದ ಚೆಂಡ ಮೇಳ ಹಾಗೂ ಸಾಂಪ್ರದಾಯಿಕ ಉಡುಗೆ-ತೊಡುಗೆಗಳೊಂದಿಗೆ ಅತಿಥಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿಕೊಳ್ಳಲಾಯಿತು. ಆ ಬಳಿಕ ಶ್ರೀ ಈಶ್ವರ ಇ ಗ್ಗುತ್ತಪ್ಪ ಎ ಮತ್ತು ಬಿ ತಂಡಗಳ ಹಗ್ಗ ಜಗ್ಗಾಟ ಸ್ಪರ್ಧೆಯೊಂದಿಗೆ ಚಾಲನೆ ನೀಡಲಾಯಿತು.

ವರದಿ : ದುಗ್ಗಳ ಸದಾನಂದ. 

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆಯಲ್ಲಿ ಜನೋತ್ಸವ ಸಮಿತಿ ಸಭೆ : ಗೌರಿ-ಗಣೇಶೋತ್ಸವ ಸಾಮರಸ್ಯದ ಹಬ್ಬವಾಗಲಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*
Next Article *ಶ್ರೀ ಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ ಸ್ಮೃತಿ ಎಸ್.ಭಾರದ್ವಾಜ್ ಗೆ ಪ್ರಥಮ ಬಹುಮಾನ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.