
ಕುಶಾಲನಗರ ಆ.20 NEWS DESK : ಕೂಡಿಗೆಯಲ್ಲಿರುವ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ವತಿಯಿಂದ ಸಮವಸ್ತ್ರ ಹಾಗೂ ಶೂ ವಿತರಿಸಲಾಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ರೋಟರಿ ಸಂಸ್ಥೆಯ ಅಧ್ಯಕ್ಷ ಮನು ಪೇಮಯ್ಯ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಕಲಿಕೆಯ ಮೂಲಕ ತಮ್ಮ ಪ್ರತಿಭೆಯನ್ನು ಗಳಿಸಲು ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ರೋಟರಿ ಸಂಸ್ಥೆಯು ತೊಡಗಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸವಲತ್ತುಗಳನ್ನು ನೀಡುವ ಮೂಲಕ ವಿದ್ಯಾರ್ಜನೆಗೆ ಒತ್ತು ನೀಡಬೇಕು ಎಂಬ ಕನಸನ್ನು ನಮ್ಮ ರೋಟರಿ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಶೂ ಗಳನ್ನು ವಿತರಣೆ ಮಾಡಲು ಮುಂದಾಗಿದೆ ಎಂದರು. ಮುಂದಿನ ದಿನಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನಿರಂತರ ಸೇವೆಯನ್ನು ರೋಟರಿ ಸಂಸ್ಥೆ ವತಿಯಿಂದ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ವ್ಯವಸ್ಥಾಪಕರಾದ ಬೋಸ್ ಮೊಣ್ಣಪ್ಪ, ಶಾಲೆ ಅಭಿವೃದ್ಧಿಗೆ ಮತ್ತು ವಿದ್ಯಾರ್ಥಿಗಳಿಗೆ ಸಹಕಾರ ನೀಡುವ ಮೂಲಕ ಪ್ರೊತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭ ರೋಟರಿ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ್, ರೋಟರಿ ಕ್ಲಬ್ ಹಿರಿಯ ಸದಸ್ಯ, ನಿಕಟ ಪೂರ್ವ ಅಧ್ಯಕ್ಷ ಎಸ್.ಕೆ.ಸತೀಶ್, ಶೋಭಾ ಸತೀಶ್, ಉಲ್ಲಾಸ್ ಕೃಷ್ಣ, ಸುನಿತಾ ಮಹೇಶ್, ರುದ್ರೇಶ್ ಪಟೇಲ್, ಚಂದ್ರಶೇಖರ್, ಸ್ಥಳೀಯ ಪ್ರಮುಖರಾದ ಕಲಾವತಿ, ಪ್ರಮೋದ್, ಚರಣ್ ,ಕುಮಾರ್, ದೀಕ್ಷಿತ್ ಮಂಜುಳಾ, ಆಡಳಿತ ಮಂಡಳಿಯ ಸದಸ್ಯರುಗಳಾದ ಅಪ್ಪಣ್ಣ, ಅರುಣ್ ಕುಮಾರ್ ವಿಜಯ, ಮಂಜುನಾಥ್, ಅಪ್ಪಣ್ಣ, ಆತ್ಮನಂದಪುರಿ ಸ್ವಾಮೀಜಿ, ಶಾಲಾ ಮುಖ್ಯ ಶಿಕ್ಷಕಿ ಪುಷ್ಪ, ಎನ್.ಸೋಮಯ್ಯ , ಎ.ಪಿ.ಕುಸುಮ, ರೂಪಕಲಾ, ಕಾಂತರಾಜ್ ಗಣೇಶ್, ಪ್ರತಾಪ್, ಸುರೇಶ್ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.








