ಮಡಿಕೇರಿ ಆ.18 NEWS DESK : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದ ಕಾಫಿ ತೋಟವೊಂದರಲ್ಲಿ ಹುಲಿಯ ಮೃತ ದೇಹ ಪತ್ತೆಯಾಗಿದೆ. ಹುಲಿ ವಯೋ ಸಹಜ ರೀತಿಯಲ್ಲಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಆಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.











