


ಸುಂಟಿಕೊಪ್ಪ ಆ.21 NEWS DESK : ಸುಂಟಿಕೊಪ್ಪ ವೃಕ್ಷೋದ್ಭವ ಶಕ್ತಿ ಗಣಪತಿ ದೇವಾಲಯದ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಬಿ.ಯಶೋಧರ ಪೂಜಾರಿ ಆಯ್ಕೆಯಾಗಿದ್ದಾರೆ. ಮಾದಾಪುರ ರಸ್ತೆಯ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ ಸಮಿತಿಯ ವಾರ್ಷಿಕ ಮಹಾಸಭೆಯು ದೇವಾಲಯದ ಆವರಣದಲ್ಲಿ ನಡೆಸಲಾಗಿದ್ದು 2025-26ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಬಿ.ದಿವಾಕರ್ ಪೂಜಾರಿ, ಪುಳಂಜನ ಕುಶಾಲಪ್ಪ, ದಿವಾಕರ್ ರೈ, ಸಹ ಕಾರ್ಯದರ್ಶಿಯಾಗಿ ಶಿವರಾಮನ್, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ್, ಖಜಾಂಚಿಯಾಗಿ ಮನು ಅಚ್ಚಮಯ್ಯ, ಕಾರ್ಯಾಕಾರಿ ಸಮಿತಿ ಸದಸ್ಯರುಗಳಾಗಿ ಎ.ಶ್ರೀಧರ್ ಕುಮಾರ್, ಮಹೇಶ್ ರೈ, ಬಿ.ಎಸ್.ರಮೇಶ್, ಶ್ರೀಧರ್, ಕೆ.ಎನ್.ಪವಿ, ಸುರೇಶ್‍ಗೋಪಿ, ಲೋಕೇಶ್, ಮಣಿಕಂಠ, ಪಿ.ಕಿಶೋರ್, ಅರುಣ, ಹೊನ್ನಪ್ಪಾಡಿ ಸುರೇಶ್, ಅಣ್ಣು ಶೇಖರ್ ಇವರುಗಳನ್ನು ಆಯ್ಕೆಗೊಳಿಸಲಾಗಿದೆ ಎಂದು ದೇವಸ್ಥಾನ ಟ್ರಸ್ಟ್ ಕಾರ್ಯದರ್ಶಿ ಎ.ಲೋಕೇಶ್ ಕುಮಾರ್ ತಿಳಿಸಿದ್ದಾರೆ.









