
ನಾಪೋಕ್ಲು ಆ.22 NEWS DESK : ನಾಪೋಕ್ಲು ಲಯನ್ಸ್ ಕ್ಲಬ್, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವನಮೋಹತ್ಸವವನ್ನು ಆಚರಿಸಲಾಯಿತು. ಕಾಲೇಜಿನ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವುದರ ಮೂಲಕ ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ನಾಪೋಕ್ಲು ಲಯನ್ಸ್ ಕ್ಲಬ್ ನ ಅಧ್ಯಕ್ಷರು ಮಾದೆಯಂಡ ಕುಟ್ಟಪ್ಪ, ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಪಿ.ಎಸ್.ಸುಬ್ಬಯ್ಯ, ಪ್ರಾಂಶುಪಾಲರಾದ ಕೆ.ಆರ್.ರಮೇಶ್ ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಈ ಸಂದರ್ಭ ಮುಖ್ಯ ಶಿಕ್ಷಕ ಲೋಕೇಶ್ ಸಿ.ಆರ್. ಲಯನ್ಸ್ ಕ್ಲಬ್‍ನ ಪದಾಧಿಕಾರಿಗಳು, ಸದಸ್ಯರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ









