Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವೃದ್ಧ ದಂಪತಿಯ ತೋಟ ನಾಶ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ : ಅರಣ್ಯ ಇಲಾಖೆ ವಿರುದ್ಧ ಹೋರಾಟದ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು

*ವೃದ್ಧ ದಂಪತಿಯ ತೋಟ ನಾಶ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ : ಅರಣ್ಯ ಇಲಾಖೆ ವಿರುದ್ಧ ಹೋರಾಟದ ಎಚ್ಚರಿಕೆ*

August 22, 20252 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಆ.22 NEWS DESK : ಮಡಿಕೇರಿ ತಾಲ್ಲೂಕಿನ ಮುಕ್ಕೋಡ್ಲು ಗ್ರಾಮದಲ್ಲಿ ವೃದ್ಧ ದಂಪತಿಯ ತೋಟವನ್ನು ನಾಶ ಮಾಡಿದ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿರುವ ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಅವರು, ಅರಣ್ಯ ಇಲಾಖೆಯ ವಿರುದ್ಧ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾನೂನು ಉಲ್ಲಂಘಿಸಿ ವೃದ್ಧ ದಂಪತಿಯ ತೋಟವನ್ನು ನಾಶ ಮಾಡುವ ಮೂಲಕ ಅರಣ್ಯ ಇಲಾಖೆ ಅಮಾನುಷವಾಗಿ ನಡೆದುಕೊಂಡಿದೆ. ತೋಟದಲ್ಲಿ ಬೆಳೆಯಲಾಗಿದ್ದ ಕಾಫಿ, ಏಲಕ್ಕಿ ಮತ್ತಿತರ ಗಿಡಗಳನ್ನು ಯಾವುದೇ ನೋಟಿಸ್ ನೀಡದೆ ಕಡಿದು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ. ಕಾಳಚಂಡ ನಾಣಿಯಪ್ಪ ಅವರು ಕಳೆದ 50 ವರ್ಷಗಳಿಂದ ಪೈಸಾರಿ ಭೂಮಿಯಲ್ಲಿ ಕೃಷಿ ಕಾರ್ಯ ಮಾಡಿಕೊಂಡು ಬಂದಿದ್ದಾರೆ. ಆದರೆ ಅರಣ್ಯ ಇಲಾಖೆ ತನಗೆ ಸೇರಿದ ಭೂಮಿ ಎಂದು ಕಾರ್ಯಾಚರಣೆ ನಡೆಸಿದೆ. ಜಾಗದ ಒಡೆತನದ ಕುರಿತು ಗೊಂದಲಗಳಿದ್ದರೆ ನೋಟಿಸ್ ನೀಡಲು ಮತ್ತು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಲು ಅವಕಾಶವಿತ್ತು. ಆದರೆ ಅರಣ್ಯ ಅಧಿಕಾರಿಗಳು ಕಾನೂನು ವ್ಯಾಪ್ತಿಯಲ್ಲಿ ಕ್ರಮಕ್ಕೆ ಮುಂದಾಗದೆ ಏಕಾಏಕಿ ದಾಳಿ ಮಾಡಿ ಆತಂಕ ಸೃಷ್ಟಿಸಿರುವುದು ಅರಣ್ಯ ಇಲಾಖೆಯ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಣಿಯಪ್ಪ ಅವರು ಈಗಾಗಲೇ ತೋಟದ ಜಾಗವನ್ನು ಸಕ್ರಮಗೊಳಿಸಿಕೊಳ್ಳಲು ಸರಕಾರಕ್ಕೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಅಲ್ಲದೆ 30 ವರ್ಷಗಳಿಗೆ ಗುತ್ತಿಗೆ ಆಧಾರದಲ್ಲಿ ಭೂಮಿ ನೀಡುವ ಸರಕಾರದ ನೂತನ ಯೋಜನೆಯಡಿಯೂ ಅರ್ಜಿಯನ್ನು ನೀಡಿದ್ದಾರೆ. ಇದು ಯಾವುದನ್ನೂ ಪರಿಗಣಿಸದೆ ಅರಣ್ಯ ಇಲಾಖೆ ಕಾನೂನು ಮೀರಿ ದಬ್ಬಾಳಿಕೆ ನಡೆಸಿರುವುದು ಖಂಡನೀಯ. ಫಸಲು ಬರುತ್ತಿದ್ದ ಗಿಡಗಳನ್ನು ಕಳೆದುಕೊಂಡ ವೃದ್ಧ ದಂಪತಿಗೆ ಅರಣ್ಯ ಇಲಾಖೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಮತ್ತು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿರುವ ಮನು ಮುದ್ದಪ್ಪ ಅವರು, ತಪ್ಪಿದಲ್ಲಿ ರೈತಪರ ಸಂಘಟನೆಗಳು ನಡೆಸುವ ಎಲ್ಲಾ ಹೋರಾಟಗಳಿಗೆ ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ. ಕಳೆದ ನೂರಾರು ವರ್ಷಗಳಿಂದ ಕೊಡಗಿನ ಜನ ಅಕ್ಕಪಕ್ಕದ ಪೈಸಾರಿ ಜಾಗವನ್ನು ಬಳಸಿಕೊಂಡು ಜೀವನೋಪಾಯಕ್ಕಾಗಿ ಕೃಷಿ ಮಾಡುತ್ತಿದ್ದಾರೆ ಹಾಗೂ ದನ ಕರುಗಳಿಗೆ ಮೇವು ಮತ್ತು ನೀರನ್ನು ಬಳಸಿಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ ಯಾರೂ ಈ ಜೀವನ ಕ್ರಮಕ್ಕೆ ಅಡ್ಡಿಪಡಿಸಿರಲಿಲ್ಲ, ಆದರೆ ಇತ್ತೀಚೆಗೆ ಅರಣ್ಯ ಇಲಾಖೆ ಜಿಲ್ಲೆಯ ಕೃಷಿಕರ ಭಾವನೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ದಿಢೀರ್ ಕಾರ್ಯಾಚರಣೆಯ ಮೂಲಕ ಜನರಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದನ್ನು ಕೊಡಗಿನ ರೈತಾಪಿ ವರ್ಗ ಎಂದಿಗೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಮುಕ್ಕೋಡ್ಲು ಗ್ರಾಮದ ವೃದ್ಧ ದಂಪತಿಯ ತೋಟ ನಾಶದ ಪ್ರಕರಣದ ಕುರಿತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ ಅವರ ಗಮನ ಸೆಳೆದು ಕ್ರಮಕ್ಕೆ ಒತ್ತಾಯಿಸುವುದಾಗಿ ಹೇಳಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಯೂನಿಯನ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ*
Next Article *ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಬಿ.ಯು.ಪೂವಣ್ಣ ಆಯ್ಕೆ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.