
ಮಡಿಕೇರಿ ಆ.22 NEWS DESK : ಕೊಡಗು ಜಿಲ್ಲಾ ಯುವ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆ.23 ರಂದು ಭಾಗಮಂಡಲದಲ್ಲಿ 33ನೇ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದ್ದು, ಅಂತಿಮ ಹಂತದ ತಯಾರಿ ನಡೆಯುತ್ತಿದೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಮತ್ತು ಅಯ್ಯಂಗೇರಿ ಶ್ರೀ ಕೃಷ್ಣ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಭಾಗಮಂಡಲ ಗ್ರಾಮದ ಬಳ್ಳಡ್ಕ ಅಪ್ಪಾಜಿ ಹಾಗೂ ಅನು ಅವರ ಗದ್ದೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಕ್ರೀಡಾಕೂಟಗಳು ಆರಂಭಗೊಳ್ಳಲಿವೆ.









