
ನಾಪೋಕ್ಲು ಆ.23 NEWS DESK : ಬೆಟ್ಟಗೇರಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕಾಡಾನೆಗಳು ತೋಟಗಳಿಗೆ ನುಗ್ಗೆ ಅಪಾರ ಪ್ರಮಾಣದ ಬೆಳೆಗಳನ್ನು ನಾಶಪಡಿಸುತ್ತಿರುವುದರಿಂದ ಬೆಳೆಗಾರರು ಕಂಗಾಲಾಗಿದ್ದಾಗಿದ್ದಾರೆ. ಗ್ರಾಮದ ಕಾಫಿ ಬೆಳೆಗಾರ ಚೌಂಡಿರ ಕುಮಾರ್, ಪಟ್ಟಡ ಗಣಿ ಸೇರಿದಂತೆ ಗ್ರಾಮದ ಹಲವು ಬೆಳೆಗಾರರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ, ಕಾಫಿ, ಅಡಿಕೆ, ತೆಂಗಿನ ಗಿಡಗಳನ್ನು ನಾಶಪಡಿಸಿ ಅಪಾರ ನಷ್ಟ ಉಂಟು ಮಾಡಿದೆ. ಸುಮಾರು 1.5 ಲಕ್ಷ ರೂ.ಬಾಳೆ ಹಾಗೂ ಕಾಫಿ ಪಸಲು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಬೆಟ್ಟಗೇರಿ ಗ್ರಾಮ ವ್ಯಾಪ್ತಿಯಲ್ಲಿ ನಿರಂತರ ಕಾಡಾನೆ ಹಾವಳಿಯಿಂದ ಜನರು ಭಯ ಬೀತರಾಗಿದ್ದು, ಕಾರ್ಮಿಕರು ತೋಟಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ವಿದ್ಯಾರ್ಥಿಗಳು ಶಾಲೆಗೆ ತೆರಳಲು ಭಯದ ವಾತಾವರಣ ಸೃಷ್ಟಿಯಾಗಿದ್ದು, ಅರಣ್ಯ ಇಲಾಖೆ ಕಾಡಾನೆಗಳನ್ನು ತಕ್ಷಣವೇ ಕಾಡಿಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮದ ಬೆಳೆಗಾರರರು ಒತ್ತಾಯಿಸಿದ್ದಾರೆ.
ವರದಿ : ದುಗ್ಗಳ ಸದಾನಂದ









