
ಮಡಿಕೇರಿ ಆ.23 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಭೆಯು ಕಾಲೇಜಿನ ನ್ಯಾಕ್ ಸಭಾಂಗಣದಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಕಾಲೇಜಿನಲ್ಲಿ ತರಲಾಗುವ ಬದಲಾಗುವಣೆ ಕುರಿತು ಹಾಗೂ ಕಾಲೇಜಿನ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಲಾಯಿತು. ಗೌರವ ಅಧ್ಯಕ್ಷ ಸ್ಥಾನವನ್ನ ಕಾಲೇಜು ಪ್ರಾಂಶುಪಾಲರು ವಹಿಸುವಂತೆ ನಿರ್ಣಯ ಕೈಗೊಳ್ಳಲಾಯಿತು. ಜೊತೆಗೆ ಮುಂಬರುವ ಕಾಲೇಜು ಅಭಿವೃದ್ಧಿ ಕುರಿತು ಚರ್ಚಿಸಿದ್ದು, ಆಡಳಿತ ಮಂಡಳಿ ಸದಸ್ಯರು ಒಪ್ಪಿಗೆ ಸೂಚಿಸಿದರು. ಈ ಕುರಿತು ಗೌರವ ಅಧ್ಯಕ್ಷರು ಹಾಗೂ ಕಾಲೇಜು ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಮಾತನಾಡಿ, ಕಾಲೇಜು ಅಭಿವೃದ್ಧಿಗೆ ಹಳೆ ವಿದ್ಯಾರ್ಥಿ ಸಂಘದ ಸಹಕಾರ ಅಗತ್ಯ. ಕಾಲೇಜಿನಲ್ಲಿ ಸಾಕಷ್ಟು ಸಮಸ್ಯೆ ಇದ್ದು, ಇದರ ಕಡೆ ಹಳೆ ವಿದ್ಯಾರ್ಥಿ ಸಂಘ ಗಮನ ಹರಿಸುವಂತೆ ಮನವಿ ಮಾಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹೊಸ ಆಡಳಿತ ಮಂಡಳಿ ಬಂದ ನಂತರ ಈವರೆಗೆ ನೂರಕ್ಕು ಹೆಚ್ಚು ಹೊಸ ಸದಸ್ಯತ್ಯವನ್ನ ಮಾಡಿರುವುದಾಗಿ ಮಾಹಿತಿ ನೀಡಿದರು. ಮುಂದಿನ ಮಾಹಾ ಸಭೆಯ ಒಳಗಾಗಿ 150ಕ್ಕು ಹೆಚ್ಚು ಸದಸ್ಯರನ್ನ ಸೇರಿಸುವುದಾಗಿ ತಿಳಿಸಿದರು. ಈ ಹತ್ತು ತಿಂಗಳಲ್ಲಿ ಕಾಲೇಜಿನ ಅಭಿವೃದ್ಧಿಗೆ ಕೈಜೋಡಿಸಿದಲ್ಲದೆ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯೋಜನ ಆಗುವ ಹಲವು ಕಾರ್ಯಕ್ರಮ ನಡೆಸಿದರ ಬಗ್ಗೆ ಮಾಹಿತಿ ನೀಡಿದರು. ಪತ್ರಿಕೋದ್ಯಮದ ವಿದ್ಯಾಗಳಿಗೆ ಜಿಲ್ಲಾ ಮಟ್ಟದ ಫೋಟೋಗ್ರಫಿ ಸ್ಪರ್ಧೆಯನ್ನ ಏರ್ಪಡಿಸುವುದಾಗಿ ತಿಳಿಸಿದರು. ಅಕ್ಟೋಬರ್ ತಿಂಗಳಲ್ಲಿ ವಾರ್ಷಿಕ ಸಭೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನ ನಡೆಸುವುದಾಗಿಯೂ, ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಸನ್ಮಾನ ಮಾಡಲಾಗುವುದು, ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದವರನ್ನ ಗೌರವಿಸುವುದಾಗಿ ತಿಳಿಸಿದರು. ಸದಸ್ಯತ್ವವ ಪಡೆದುಕೊಳ್ಳದವರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದುಕೊಳ್ಳುವಂತೆ ಕೋರಿಕೊಂಡರು. ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳಿಗೆ ಒಳ್ಳೆಯ ಕಾರ್ಯಕ್ರಮ ನಡೆಸುವುದರೊಂದಿಗೆ ಸಾಧಕ ವಿದ್ಯಾರ್ಥಿಗಳಿಗೆ ವಾರ್ಷಿಕ ಮಾಹಾ ಸಭೆಯಲ್ಲಿ ಸನ್ಮಾನಿಸಲಾಗುವುದೆಂದು ತಿಳಿಸಿದರು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಚಂದನ್ ನಂದರ ಬೆಟ್ಟು, ನಿರ್ದೇಶಕರುಗಳಾದ ಲೋಹಿತ್ ಮಾಗುಲು ಮನೆ, ಚೀಯಕಪೂವಂಡ ಸಚಿನ್ ಪೂವಯ್ಯ, ಐಚಂಡ ರಶ್ಮಿ ಮೇದಪ್ಪ, ಶೀತಲ್ ಪಿ.ಕೆ, ಕೋಚನ ದಿಶಾಂತ್, ಚರಣ್ ಬಲ್ಯದ್, ಆದರ್ಶ್ ಅದ್ಕಲೇಗಾರ್, ಬಿ.ಜಿ.ಹರ್ಷಿತ್, ಎಸ್.ಆರ್.ವತ್ಸಲ, ಕುರ್ಶಿದಾ ಬಾನು ಹಾಜರಿದ್ದರು.









