
ಬೆಂಗಳೂರು NEWS DESK ಆ.24 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಪಿಪಿಪಿ ಮಾದರಿಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ ರವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧದಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬಂಧ ಪರಿಶೀಲನಾ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಪಾಲ್ಗೊಂಡು ಯೋಜನೆ ಕಾರ್ಯಗತಗೊಳಿಸುವ ಸಂಭಂಧ ಸಚಿವರೊಂದಿಗೆ ಚರ್ಚಿಸಿದರು. ಸಚಿವರು ಯೋಜನೆ ಪ್ರಗತಿ ವಿವರವನ್ನು ಪರಿಶೀಲಿಸಿ ಅತ್ಯಾಧುನಿಕ ತಂತ್ರಜ್ಞಾನದ ಕ್ಯಾತ್ ಲ್ಯಾಬ್ ಸ್ಥಾಪಿಸುವ ಸಂಬಂಧ ಅಗತ್ಯ ಪ್ರಸ್ತಾವನೆಯನ್ನು ಶೀಘ್ರವಾಗಿ ಸಲ್ಲಿಸಿ ಟೆಂಡರ್ ಆಹ್ಚಾನಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಜಂಟಿ ಕಾರ್ಯದರ್ಶಿ ಡಾ. ವೆಂಕಟೇಶ್ ಮೂರ್ತಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕಾರದ ಡಾ. ಸುಜಾತ ರಾಥೋಡ್, ರಾಜ್ಯ ಪಿಪಿಪಿ ಕೋಶದ ನಿರ್ದೇಶಕಾರದ ಪುರುಷೋತ್ತಮ್ ಸಿಂಗ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕರಾದ ಡಾ. ಲೋಕೇಶ್ ಎ.ಜೆ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.










